ಕಾಂಗ್ರೆಸ್-ಜೆಡಿಎಸ್‌ನವರು ಮಕ್ಕಳ ಕಳ್ಳರು: ಈಶ್ವರಪ್ಪ ವ್ಯಂಗ್ಯ
ಬೆಂಗಳೂರು, ಜನವರಿ 19: 'ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹುಚ್ಚು ಹಿಡಿದಿದೆ. ಹೀಗಾಗಿ ಯಡಿಯೂರಪ್ಪ ಅವರ ಬಗ್ಗೆ ಏನೇನೂ ಮಾತನಾಡುತ್ತಿದ್ದಾರೆ' ಎಂದು ಬಿಜೆಪಿ ನಾಯಕ ಕೆ.ಎಸ್, ಈಶ್ವರಪ್ಪ ಹೇಳಿದ್ದಾರೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.
ಕಾಂಗ್ರೆಸ್ ಮತ್ತು ಜೆಡಿಎಸ್‌ನವರು ಮಕ್ಕಳ ಕಳ್ಳರಿದ್ದಂತೆ. ಹೀಗಾಗಿ ನಾವು ನಮ್ಮ ಪಕ್ಷದ ಮಕ್ಕಳನ್ನು ಕಾಪಾಡಿಕೊಳ್ಳುತ್ತಿದ್ದೇವೆ. ಕಾಂಗ್ರೆಸ್‌ನಲ್ಲಿ ಅಸಮಾಧಾನಗೊಂಡಿರುವ 20ಕ್ಕೂ ಹೆಚ್ಚು ಶಾಸಕರು ಪಕ್ಷ ಬಿಡಲಿದ್ದಾರೆ.

ಕಾಂಗ್ರೆಸ್‌ನಲ್ಲಿ ಗುಂಪುಗಾರಿಕೆ ಹೆಚ್ಚಾಗಿದೆ. ಆ ಕಾರಣದಿಂದಲೇ ಅವರು ಪಕ್ಷ ಬಿಟ್ಟು ಹೋಗುತ್ತಿದ್ದಾರೆ. ತಮ್ಮ ಶಾಸಕರನ್ನು ಉಳಿಸಿಕೊಳ್ಳಲು ಆಗದ ಕಾಂಗ್ರೆಸ್ಸಿನವರು ಗಾಳ ಹಾಕುತ್ತಿದ್ದಾರೆ. ನಮ್ಮ ಶಾಸಕರನ್ನು ಸೆಳೆದುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಗುಂಪುಗಾರಿಕೆಯಿಂದಲೇ ಸರ್ಕಾರ ಪತನಗೊಳ್ಳಲಿದೆ ಎಂದು ಈಶ್ವರಪ್ಪ ಹೇಳಿದ್ದಾರೆ.
ಆಪರೇಷನ್‌ಗೆ ಬಂದಿಲ್ಲ: ಕುಮಾರ್
ಆಪರೇಷನ್ ಕಮಲ ನಡೆಸುವ ಸಲುವಾಗಿ ನಾವು ಗುರುಗ್ರಾಮಕ್ಕೆ ಬಂದಿಲ್ಲ ಎಂದು ಬಿಜೆಪಿ ಶಾಸಕ ಕುಮಾರ್ ಬಂಗಾರಪ್ಪ ಹೇಳಿದ್ದಾರೆ. ರಾಜಕೀಯದಲ್ಲಿ ಇಂತಹ ಘಟನೆಗಳು ನಡೆಯುವುದು ಸಹಜ.
ನಾವೆಲ್ಲರೂ ಒಟ್ಟಿಗೆ ಇರಬೇಕು, ಒಗ್ಗಟ್ಟು ಪ್ರದರ್ಶಿಸಬೇಕು ಎಂದು ಇಲ್ಲಿಗೆ ಬಂದಿದ್ದೇವೆ ಎಂಬುದಾಗಿ ಕುಮಾರ್ ಬಂಗಾರಪ್ಪ ತಿಳಿಸಿದ್ದಾರೆ.












Click it and Unblock the Notifications