ಬಿಜೆಪಿ ನಾಯಕ ಮುದ್ದಹನುಮೇಗೌಡ ಮತ್ತೆ ಕಾಂಗ್ರೆಸ್ ಗೆ: ಯಾವ ಕ್ಷೇತ್ರದಿಂದ ಸ್ಪರ್ಧೆ- ಚರ್ಚೆಯಾಗಿದ್ದೇನು?

ಬೆಂಗಳೂರು, ಜನವರಿ 10: 2024 ರ ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಕಾಂಗ್ರೆಸ್‌ ಹೆಚ್ಚು ಸ್ಥಾನಗಳನ್ನ ಗೆಲ್ಲುವ ನಿಟ್ಟಿನಲ್ಲಿ ಹಲವು ತಂತ್ರಗಾರಿಕೆಯನ್ನ ನಡೆಸುತ್ತಿದೆ. ಈ ಹಿನ್ನೆಲೆ ಹಲವು ಬಿಜೆಪಿ ಹಾಗೂ ಜೆಡಿಎಸ್‌ ನಾಯಕರನ್ನ ಕಾಂಗ್ರೆಸ್‌ ನಾಯಕರನ್ನ ಸಂಪರ್ಕಿಸುತ್ತಿದ್ದು, ಇಂದು(ಬುಧವಾರ) ಬಿಜೆಪಿ ನಾಯಕರನ್ನ ಸಿದ್ದರಾಮಯ್ಯ ಸಂಪುಟದ ಸಚಿವರೊಬ್ಬರು ಸಂಪರ್ಕಿಸಿದ್ದಾರೆ.

ಹೌದು, ಬಿಜೆಪಿ ಮುಖಂಡ ಹಾಗೂ ತುಮಕೂರಿನ ಲೋಕಸಭಾ ಮಾಜಿ ಸಂಸದ ಎಸ್‌ಪಿ ಮುದ್ದಹನುಮೇಗೌಡ ಅವರು ತುಮಕೂರಿನಲ್ಲಿ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರೊಂದಿಗೆ ಸಭೆ ನಡೆಸಿ ಮುಂಬರುವ ಲೋಕಸಭೆ ಚುನಾವಣೆ ಕುರಿತು ಚರ್ಚೆ ನಡೆಸಿದರು. ಸಭೆಯ ನಂತರ ಮಾತನಾಡಿದ ರಾಜಣ್ಣ, ಮುದ್ದಹನುಮೇಗೌಡರನ್ನು ಕಾಂಗ್ರೆಸ್‌ಗೆ ಮರಳಿ ಕರೆತರುವ ಪ್ರಯತ್ನ ನಡೆಯುತ್ತಿದೆ ಎಂದು ಸುಳಿವನ್ನ ನೀಡಿದ್ದಾರೆ.

BJP leader Muddahanumegowda might rejoin Congress in hope of getting ticket from Tumakuru

ಮುದ್ದಹನುಮೇಗೌಡ ಅವರು ತುಮಕೂರಿನಿಂದ 2014 ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ರು. 2019 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಸ್ಪರ್ಧಿ ನಡೆಸಿದ ಕಾರಣ ಮುದ್ದಹನುಮೇಗೌಡರಿಗೆ ಟಿಕೆಟ್ ನಿರಾಕರಿಸಿದ ನಂತರ ಪಕ್ಷದಲ್ಲಿ ಅಸಮಾಧಾನಗೊಂಡು ಬಿಜೆಪಿ ಸೇರ್ಪಡೆಯಾಗಿದ್ದರು. ಇನ್ನೂ ವಿಧಾನಸಭಾ ಚುನಾವಣೆಯ ಸಂದರ್ಭಧಲ್ಲಿ ಕುಣಿಗಲ್ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ಗಾಗಿ ಆಕಾಂಕ್ಷಿಯಾಗಿದ್ದರು. ಆದರೆ, ಪಕ್ಷವು ಅವರಿಗೆ ಟಿಕೆಟ್ ನಿರಾಕರಿಸಿತು.

ಬಿಜೆಪಿ-ಜೆಡಿಎಸ್ ಮೈತ್ರಿ

ಲೋಕಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್‌ ಗೆ ಠಕ್ಕರ್‌ ಕೊಡುವ ನಿಟ್ಟಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿಯಾಗಿದೆ. ಕ್ಷೇತ್ರ ಹಂಚಿಕೆ ವಿಚಾರದಲ್ಲಿ ತುಮಕೂರು ಕ್ಷೇತ್ರವನ್ನು ಪ್ರಾದೇಶಿಕ ಪಕ್ಷಕ್ಕೆ ಬಿಟ್ಟುಕೊಡುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಈ ಬಾರಿಯೂ ಬಿಜೆಪಿಯಿಂದ ಲೋಕಸಭಾ ಚುನಾವಣೆಯ ಟಿಕೆಟ್‌ ಸಿಗುವುದು ಅನುಮಾನವಾಗಿದೆ. ಸದ್ಯದ ರಾಜಕೀಯ ಸನ್ನಿವೇಶದಲ್ಲಿ ಮುದ್ದಹನುಗೌಡ ಅವರು ಲೋಕಸಭೆ ಟಿಕೆಟ್ ಸಿಗುವ ಭರವಸೆಯೊಂದಿಗೆ ಮಾತೃ ಪಕ್ಷಕ್ಕೆ ಮರಳಲು ಕಾಂಗ್ರೆಸ್ ಬಾಗಿಲು ತಟ್ಟಿದ್ದಾರೆ ಎನ್ನಲಾಗಿದೆ.

ಮುದ್ದಹನುಮೇಗೌಡ ಅವರು ಈಗಾಗಲೇ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೊಂದಿಗೆ ಒಂದು ಸುತ್ತಿನ ಸಭೆ ನಡೆಸಿದ್ದು, ತುಮಕೂರಿನ ಹಿರಿಯ ಕಾಂಗ್ರೆಸ್ ನಾಯಕರ ಸಮಾಲೋಚನೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ರಾಜಣ್ಣ, ಮುದ್ದಹನುಮೇಗೌಡರನ್ನು ಮತ್ತೆ ಕಾಂಗ್ರೆಸ್‌ಗೆ ಕರೆತರುವ ಪ್ರಯತ್ನ ನಡೆಯುತ್ತಿದೆ. ಈ ಹಿಂದೆ ಮಾಜಿ ಸಚಿವ, ಬಿಜೆಪಿ ಮುಖಂಡ ವಿ ಸೋಮಣ್ಣ ಕಾಂಗ್ರೆಸ್ ಸೇರಿ ತುಮಕೂರಿನಿಂದ ಲೋಕಸಭೆಗೆ ಸ್ಪರ್ಧಿಸಬಹುದು ಎಂಬ ಊಹಾಪೋಹಗಳು ಹರಿದಾಡಿದ್ದವು. ಸೋಮಣ್ಣ ಅವರನ್ನು ಗೃಹ ಸಚಿವ ಅಮಿತ್ ಶಾ ಬುಧವಾರ ದೆಹಲಿಗೆ ಕರೆಸಿ ಚರ್ಚೆ ನಡೆಸಿದ್ದಾರೆ ಎಂದು ಹೇಳಿದ್ದಾರೆ.

ಒಟ್ನಾಲಿ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಸೋಲಿನ ರುಚಿ ತೋರಿಸಲು ಬಿಜೆಪಿ ಹಾಗೂ ಜೆಡಿಎಸ್‌ ನಿರ್ಧರಿಸಿದ್ರೆ, ಇತ್ತ ಬಿಜೆಪಿ ಹಾಗೂ ಜೆಡಿಎಸ್‌ ಗೆ ಮತ್ತೆ ಶಾಕ್‌ ನೀಡಲು ಕಾಂಗ್ರೆಸ್‌ ನಾಯಕರು ಮಾಸ್ಟರ್‌ ಪ್ಲಾನ್‌ ನಡೆಸಿದ್ದು, ಹಲವು ನಾಯಕರಿಗೆ ಗಾಳ ಹಾಕಿದ್ದಾರೆ. ಅಲ್ಲದೇ ಹಲವು ಕಾಂಗ್ರೆಸ್‌ ನಾಯಕರ ಸಂಪರ್ಕದಲ್ಲಿರುವ ಮುದ್ದಹನುಮೇಗೌಡರು ಕಾಂಗ್ರೆಸ್‌ ಪಕ್ಷಕ್ಕೆ ಬಂದರೇ ತುಮಕೂರಿನಿಂದ ಟಿಕೆಟ್‌ ಕೊಡುವ ನಿಟ್ಟಿನಲ್ಲಿ ಕಾಂಗ್ರೆಸ್‌ ನಾಯಕರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+