ಉಡುಪಿಯಲ್ಲಿ ಅಶ್ಲೀಲ ವಿಡಿಯೋ ಚಿತ್ರೀಕರಣದ ವಿರುದ್ಧ ಕಾನೂನು ಕ್ರಮಕ್ಕೆ ಎನ್.ರವಿಕುಮಾರ್ ಆಗ್ರಹ
ಬೆಂಗಳೂರು, ಜುಲೈ 25: ಉಡುಪಿಯ ಕಾಲೇಜ್ ಒಂದರಲ್ಲಿ ವಿದ್ಯಾರ್ಥಿನಿಯ ಅಶ್ಲೀಲ ವಿಡಿಯೋ ಚಿತ್ರೀಕರಣ ಮಾಡಿ ಅದನ್ನು ಇತರರಿಗೆ ಕಳುಹಿಸಿದ ವಿದ್ಯಾರ್ಥಿನಿಯರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಆಗ್ರಹಿಸಿದರು.
ಈ ಕುರಿತು ಬಿಜೆಪಿ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ವಿಡಿಯೋ ಯಾರ್ಯಾರಿಗೆ ಕಳುಹಿಸಿದ್ದಾರೆ ಎಂಬ ವಿವರವಾದ ತನಿಖೆ ಮಾಡಬೇಕು ಎಂದು ಒತ್ತಾಯಿಸಿದರು. ಇದರ ವಿರುದ್ಧ ಇದೇ 27ರಂದು ಮಹಿಳಾ ಮೋರ್ಚಾ ಮೂಲಕ ರಾಜ್ಯದಾದ್ಯಂತ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ಉಡುಪಿಯ ನೇತ್ರಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಯರಾದ ಅಲಿಮತುಲ್ಲ ಸಯೀಫ, ಶಬನಾಜ್, ಆಲಿಯ ಅವರು ಒಬ್ಬ ಹಿಂದೂ ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಣ ಮಾಡಿ ಬೇರೆಬೇರೆ ಮೊಬೈಲ್‍ಗಳಿಗೆ, ಅವರ ಫ್ರೆಂಡ್ಸ್ ಗ್ರೂಪಿನ ಮೊಬೈಲ್‍ಗಳಿಗೆ ಹರಿಬಿಟ್ಟಿರುವ ವಿಚಾರ ನಮಗೆ ಗೊತ್ತಾಗಿದೆ. ವಿಡಿಯೋ ಕ್ಯಾಮೆರಾವನ್ನು ಶೌಚಾಲಯ, ಸ್ನಾನದ ಕೊಠಡಿಯಲ್ಲಿ ಇಟ್ಟು ಸ್ನಾನ ಮಾಡುವಾಗ ತೆಗೆಯಲಾಗಿದೆ. ಇದನ್ನು ಬೇರೆಯವರಿಗೆ ಕಳುಹಿಸಿದ್ದಾರೆ ಎಂದು ಆರೋಪಿಸಿದರು.
ಹಿಂದೂ ವಿದ್ಯಾರ್ಥಿನಿಯರು ಮುಸ್ಲಿಂ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಮಾಡಿದ್ದರೆ ಘಟನೆ ಹೇಗಿರುತ್ತಿತ್ತು? ಗಲಾಟೆ ಹೇಗಾಗುತ್ತಿತ್ತು ಎಂದು ಪ್ರಶ್ನಿಸಿದ ಅವರು, ಇದನ್ನು ಸರಕಾರ ಅರ್ಥ ಮಾಡಿಕೊಳ್ಳಬೇಕು. ಈ ಸರಕಾರಕ್ಕೆ ಸಾಮಾನ್ಯ ಜ್ಞಾನ ಇಲ್ಲ. ಜುಲೈ 19ರಂದು ಈ ಘಟನೆ ಬೆಳಕಿಗೆ ಬಂದಿದೆ. ಆ ಮೂವರು ವಿದ್ಯಾರ್ಥಿನಿಯರನ್ನು ಅಮಾನತು ಮಾಡಿದ್ದನ್ನು ಹೊರತುಪಡಿಸಿದರೆ, ಬೇರೇನೂ ಕ್ರಮ ಕೈಗೊಂಡಿಲ್ಲ. ಅದರ ಬದಲಾಗಿ ಈ ಘಟನೆ ಬಗ್ಗೆ ಸಾಮಾಜಿಕ ಜಾಲತಾಣಗಳ ಮೂಲಕ ತಿಳಿಸಿದ ರಶ್ಮಿ ಸಾಮಂತ್ ಎಂಬ ವಿದ್ಯಾರ್ಥಿನಿ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಈ ಸರಕಾರಕ್ಕೆ ಮತಿಭ್ರಮಣೆ ಆಗಿದೆ. ಹಿಂದೂ ವಿದ್ಯಾರ್ಥಿನಿ ಭಯಪಟ್ಟು ಕಾಲೇಜಿಗೆ ಹೋಗುತ್ತಿಲ್ಲ, ಸರಕಾರದ ಯೂನಿಫಾರ್ಮ್ ಹಾಕುವುದಿಲ್ಲ ಎಂದು ಹಿಜಾಬ್ ಹೋರಾಟ ಆಗಿತ್ತು. ಯಾರೂ ಮುಖ ನೋಡಬಾರದೆಂಬ ಸಂಪ್ರದಾಯಕ್ಕೆ ಸೇರಿದ ಧರ್ಮ ತಮ್ಮದು ಎಂದಿದ್ದರು. ಹಿಂದೂ ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಣದ ಬಗ್ಗೆ ಸರಕಾರ ಏನು ಹೇಳುತ್ತದೆ ಹಾಗೂ ಏನು ಕ್ರಮ ನಿಮ್ಮದು ಎಂದು ಪ್ರಶ್ನಿಸಿದರು.
ಹಿಂದೂಗಳಿಗೆ ಒಂದು ನ್ಯಾಯ, ಮುಸ್ಲಿಮರಿಗೆ ಇನ್ನೊಂದು ನ್ಯಾಯವೇ? ಎಂದು ಪ್ರಶ್ನಿಸಿದ ಅವರು, ರಶ್ಮಿ ಸಾಮಂತ್ ಅವರಿಗೆ ರಕ್ಷಣೆ ಕೊಡಿ. ಈ ವಿಚಾರವಾಗಿ ಸಭೆ ನಡೆಸಿದ ಗೃಹ ಸಚಿವ ಡಾ.ಪರಮೇಶ್ವರ್ ಅವರು ಏನೂ ಕ್ರಮ ಕೈಗೊಂಡಿಲ್ಲ. ವಿಡಿಯೋವನ್ನು ಹರಿಬಿಡದಂತೆ ಸೂಚಿಸಿದ್ದಾರಷ್ಟೇ ಎಂದು ತಿಳಿಸಿದರು.
ಇನ್ನೂ ಈ ಕುರಿತು ವಿಧಾನಪರಿಷತ್ ಸದಸ್ಯೆ ಶ್ರೀಮತಿ ತೇಜಸ್ವಿನಿ ಗೌಡ ಮಾತನಾಡಿ, ಮಾನಹಾನಿ ಮಾಡುವ, ಕೆಟ್ಟ ಆಲೋಚನೆಯ ದುರುದ್ದೇಶದ ವಿಡಿಯೋ ಚಿತ್ರೀಕರಣಕ್ಕೆ ಮರಣದಂಡನೆ ವಿಧಿಸುವುದು ಸೂಕ್ತ ಎಂದು ತಿಳಿಸಿದರು.
ಹೊಸ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ನಾಡು ಬೆಚ್ಚಿಬೀಳುವ, ಭಯಾನಕ ವಾತಾವರಣಕ್ಕೆ ಸಾಕ್ಷಿ ಎನಿಸುವ ಘಟನಾವಳಿಗಳು ನಡೆಯುತ್ತಿವೆ. ಉಡುಪಿ ಕಾಲೇಜಿನಲ್ಲಿ ಶೌಚಾಲಯದಲ್ಲಿ ಹಿಡನ್ ಕ್ಯಾಮೆರಾ ಇಡುವ ಮೂಲಕ ನಗ್ನಚಿತ್ರ ಚಿತ್ರೀಕರಿಸಿ ಒಂದು ಗುಂಪಿಗೆ ಕಳುಹಿಸಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಪ್ರತಿಷ್ಠಿತ ಆಕ್ಸ್‍ಫರ್ಡ್ ವಿವಿಯ ವಿದ್ಯಾರ್ಥಿನಿ ರಶ್ಮಿ ಸಾಮಂತ್ ಅವರ ಟ್ವೀಟ್ ಮೂಲಕ ಇದು ಬೆಳಕಿಗೆ ಬಂದಿದೆ. ಕಾಲೇಜಿನವರು ಆ 3 ಮುಸ್ಲಿಂ ಹೆಣ್ಮಕ್ಕಳನ್ನು ಕಾಲೇಜಿನಿಂದ ಅಮಾನತು ಮಾಡಿದ್ದಾರೆ. ಈ ಸಂಬಂಧ ಅನೇಕ ಹೆಣ್ಮಕ್ಕಳು ಶಾಸಕರಿಗೆ ದೂರು ನೀಡಿದ್ದಾರೆ. ಈ ವಿಡಿಯೋ ಚಿತ್ರೀಕರಣ ವಿಕೃತ ಮಾತ್ರವಲ್ಲ, ವಿಧ್ವಂಸಕ ಚಟುವಟಿಕೆ ಎಂದು ತಿಳಿಸಿದರು.












Click it and Unblock the Notifications