ಅಂಬಿಕಾಪತಿ ಮನೆಯಲ್ಲಿ 42 ಕೋಟಿ ಕಮಿಷನ್ ಹಣ ಪತ್ತೆ ; ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ

ಬೆಂಗಳೂರು, ಅಕ್ಟೋಬರ್‌ 14: ಕಾಂಗ್ರೆಸ್ ಮಾಜಿ ಕಾರ್ಪೋರೇಟರ್‌ ಅಶ್ವಥಮ್ಮ ಮತ್ತು ಗುತ್ತಿಗೆದಾರ ಅಂಬಿಕಾಪತಿ ಮನೆ ಮೇಲೆ ಐಟಿ ದಾಳಿ ನಡೆದು ಬರೋಬ್ಬರಿ 42 ಕೋಟಿ ಹಣ ಪತ್ತೆಯಾಗಿದ್ದು, ರಾಜ್ಯ ಬಿಜೆಪಿ ನಾಯಕರು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಗುಡುಗಿದ್ದಾರೆ.

ಹೌದು, ತೆಲಂಗಾಣ ಚುನಾವಣೆಗೋಸ್ಕರವೇ ಬೆಂಗಳೂರಿನಿಂದ ಹಣ ಸಂಗ್ರಹಿಸಲಾಗುತ್ತಿದೆ ಎಂದು ರಾಜ್ಯ ಬಿಜೆಪಿ ನಾಯಕರು ಆರೋಪವನ್ನ ನಡೆಸಿದ್ದು, ಈಗಾಗಲೇ ಪಂಚರಾಜ್ಯಗಳ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಹೀಗಾಗಿ ಪಂಚರಾಜ್ಯಗಳ ಚುನಾವಣೆಗಾಗಿ ಬೆಂಗಳೂರಿನಿಂದ ಕಮಿಷನ್‌ ಹಣ ಹೋಗುತ್ತಿದೆ ಎಂದು ರಾಜ್ಯ ಬಿಜೆಪಿ ನಾಯಕರು ಸರಣೊ ಆರೋಪಗಳನ್ನ ನಡೆಸಿದ್ದಾರೆ.

BJP Leader N Ravikumar Demands Resignation Of CM Siddaramaiah

ಇನ್ನೂ ಈ ಕುರಿತು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್ ರವಿಕುಮಾರ್ ಮಾತನಾಡಿ, ಗುತ್ತಿಗೆದಾರರಿಗೆ ಸರಕಾರ ಬಿಡುಗಡೆ ಮಾಡಿದ 650 ಕೋಟಿ ಹಣದಲ್ಲಿ ಬಂದಿರುವ ಕಮಿಷನ್ ಹಣವೇ 42 ಕೋಟಿ. ಅದು ಆದಾಯ ತೆರಿಗೆ ಇಲಾಖೆ ದಾಳಿಯ ವೇಳೆ ಸಿಕ್ಕಿದೆ. ಈ ಹಣಕ್ಕೆ ಸಂಬಂಧಿಸಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರರು ನೈತಿಕ ಹೊಣೆ ಹೊರಬೇಕು ಮತ್ತು ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದ್ದಾರೆ.

ರಾಜ್ಯ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ ಅವರು, 42 ಕೋಟಿ ಹಣದ ಹಿಂದಿನ ಪ್ರಮುಖ ಉದ್ದೇಶದ ಕುರಿತು ಸಂಪೂರ್ಣ ತನಿಖೆಯಾಗಬೇಕು. ಇದು ಕಾಂಗ್ರೆಸ್ಸಿನ ಹಣವೆನ್ನಲು ಬಿಜೆಪಿಯವರ ಬಳಿ ಏನು ಸಾಕ್ಷ್ಯವಿದೆ ಎಂದು ಎಂ.ಬಿ.ಪಾಟೀಲರು ಪ್ರಶ್ನೆ ಮಾಡಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರರನ್ನು ಭೇಟಿ ಮಾಡಿ, ಮಾತುಕತೆ ನಡೆಸಿ ಒಪ್ಪಂದ ಆದ ಬಳಿಕ 650 ಕೋಟಿ ಬಿಡುಗಡೆಯಾಗಿದೆ ಎಂದು ಹೇಳಿದರು.

BJP Leader N Ravikumar Demands Resignation Of CM Siddaramaiah

ಮಾಜಿ ಕಾರ್ಪೊರೇಟರ್ ಮನೆಯಲ್ಲೂ ಎಷ್ಟೋ ಹಣ ಸಿಕ್ಕಿದೆ ಎನ್ನುತ್ತಾರೆ. ಇದಕ್ಕಿಂತ ಪ್ರೂಫ್ ಬೇಕೇ? ಇವರೆಲ್ಲರೂ ಕಾಂಗ್ರೆಸ್ ನಾಯಕರ ಜೊತೆಗೇ ಒಡನಾಟ ಇಟ್ಟುಕೊಂಡಿದ್ದರು. ಇದೊಂದು ಎಟಿಎಂ ಸರಕಾರ, ಲೂಟಿಕೋರ ಸರಕಾರ, ಕಲೆಕ್ಷನ್ ಸರಕಾರ ಎನ್ನಲು ಇದಕ್ಕಿಂತ ಬೇರೇನು ಸಾಕ್ಷಿ ಬೇಕು ಎಂದು ಪ್ರಶ್ನಿಸಿದರು. ಈ ಸರಕಾರದಡಿ ಹಣ ಇಲ್ಲದೆ ವರ್ಗಾವಣೆ ಆಗುತ್ತಿಲ್ಲ. ಈ ಸರಕಾರ ಕಲೆಕ್ಷನ್ ದಂಧೆಯಲ್ಲಿ ಮುಳುಗಿದೆ. ಇದೊಂದು ಎಟಿಎಂ ಸರ್ಕಾರ ಎಂದು ತೀವ್ರ ವಾಗ್ದಾಳಿ ನಡೆಸಿದರು.

ಗುತ್ತಿಗೆದಾರ ಅಂಬಿಕಾಪತಿ ಅವರ ಮನೆಯಲ್ಲಿ 23 ಪೆಟ್ಟಿಗೆಗಳಲ್ಲಿ 42 ಕೋಟಿ ಹಣ ಸಿಕ್ಕಿದೆ. ಮಾಜಿ ಕಾರ್ಪೊರೇಟರ್ ಅಶ್ವತ್ಥ್ ಅವರ ಮನೆಯ ಮೇಲೂ ದಾಳಿ ಆಗಿದೆ. ಇನ್ನೂ ಅನೇಕರ ಮನೆಗಳ ಮೇಲೆ ದಾಳಿ ಆಗಿದ್ದು, ವಿವರ ಲಭಿಸಿಲ್ಲ. ಈ ಹಣವನ್ನು ತೆಲಂಗಾಣ ಚುನಾವಣೆಗೋಸ್ಕರವೇ ಸಂಗ್ರಹಿಸಿದ್ದು ಎಂದು ಬೆಂಗಳೂರಿನಾದ್ಯಂತ ಮಾತನಾಡುತ್ತಿರುವುದು ಕೇಳಿಸುತ್ತಿದೆ. ಇದು ನಮ್ಮ ಹಣವಲ್ಲ ಎಂದು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರರು ಹೇಳಿದ್ದಾರೆ. ಇದು ನಿಮ್ಮದೇ ಹಣ ಎಂದು ಬಿಜೆಪಿ ಹೇಳುತ್ತದೆ ಎಂದು ತಿಳಿಸಿದರು.

ಅನೇಕ ಗುತ್ತಿಗೆದಾರರು ಡಿ.ಕೆ.ಶಿವಕುಮಾರರನ್ನು ಭೇಟಿ ಮಾಡಿದ್ದರು. ತಮಗೆ ಬರಬೇಕಾದ ಹಣ ಬಿಡುಗಡೆಗೆ ಒತ್ತಾಯಿಸಿದ್ದರು. ಡಿ.ಕೆ.ಶಿವಕುಮಾರರ ಜೊತೆ ಎರಡು ಮೂರು ಬಾರಿ ಭೇಟಿ, ಇಂತಿಷ್ಟು ಶೇಕಡಾ ಎಂದು ಮಾತುಕತೆಯ ಬಳಿಕ ಸರಕಾರ 650 ಕೋಟಿ ಹಣವನ್ನು ಬಿಡುಗಡೆ ಮಾಡಿತ್ತು ಎಂದು ಅವರು ಆರೋಪಿಸಿದರು. ಗುತ್ತಿಗೆದಾರರ ಪೈಕಿ ಹೇಮಂತ್, ಪ್ರದೀಪ್ ಮತ್ತು ಪ್ರಮೋದರನ್ನು ಬಂಧಿಸಿದ್ದಾರೆ. ಈ ಮೂರು ಜನರು ಪದೇಪದೇ ಡಿ.ಕೆ.ಶಿವಕುಮಾರರನ್ನು ಭೇಟಿ ಮಾಡಿದ್ದರು ಎಂದು ಆರೋಪಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+