Get Updates
Get notified of breaking news, exclusive insights, and must-see stories!

Renukacharya: ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ಕಾಂಗ್ರೆಸ್‌ ಸೇರ್ಪಡೆ?

ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಶಾಸಕರಿಗೆ ಆಯೋಜಿಸಿದ್ದ ಔತಣಕೂಟದಲ್ಲಿ ಬಿಜೆಪಿ ಶಾಸಕರು ಕೂಡ ಕಾಣಿಸಿಕೊಂಡಿದ್ದು ಅಚ್ಚರಿ ಮೂಡಿಸಿದೆ. ಇದರ ನಡುವೆ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಬಣದಲ್ಲಿ ಗುರುತಿಸಿಕೊಂಡಿರುವ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಅವರು ಕಾಂಗ್ರೆಸ್‌ ಸೇರಿಕೊಳ್ಳುತ್ತಿದ್ದಾರಾ ಎಂಬ ಚರ್ಚೆಗಳು ಜೋರಾಗಿವೆ. ರೇಣುಕಾಚಾರ್ಯ ಅವರು ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿಯಾಗಿರುವುದು ಇದಕ್ಕೆ ಪುಷ್ಟಿ ನೀಡುತ್ತಿದೆ.

ಈ ಫೋಟೋ ಅನ್ನು ಡಿ.ಕೆ.ಶಿವಕುಮಾರ್ ಅವರೇ ಪೋಸ್ಟ್‌ ಮಾಡಿಕೊಂಡಿರುವುದು ಕುತೂಹಲ ಅಚ್ಚರಿ ಮೂಡಿಸಿದೆ. ಸದಾ ಕಾಂಗ್ರೆಸ್‌ ವಿರುದ್ಧ ಆರೋಪಗಳನ್ನು ಮಾಡುತ್ತಿದ್ದ ಎಂಪಿ ರೇಣುಕಾಚಾರ್ಯ ಅವರು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿಯಾಗಿರುವುದು ಹಲವು ಪ್ರಶ್ನೆಗಳನ್ನು ಮುಂದಿಟ್ಟಿದೆ. ರೇಣುಕಾಚಾರ್ಯ ಅವರು ಬಿಜೆಪಿ ತೊರೆದು, ಕಾಂಗ್ರೆಸ್‌ ಸೇರಿಕೊಳ್ಳುತ್ತಿದ್ದಾರೆ ಎಂದೂ ರಾಜಕೀಯ ವಲಯದಲ್ಲಿ ಗುಸುಗುಸು ಕೇಳಿಬರುತ್ತಿದೆ. ಆದರೆ, ಮಾಜಿ ಸಚಿವರಾದ ಎಂಪಿ ರೇಣುಕಾಚಾರ್ಯ ಅವರು ಇಂದು ನನ್ನನ್ನು ಭೇಟಿಯಾಗಿ ಶುಭ ಹಾರೈಸಿದರು ಎಂದು ಡಿ.ಕೆ ಶಿವಕುಮಾರ್‌ ಫೋಟೋ ಹಂಚಿಕೊಂಡಿರುವುದು ಚರ್ಚೆಗೆ ಗ್ರಾಸವಾಗಿದೆ.

BJP Leader Renukacharya Meets DK Shivakumar Sparks Congress Joining Speculation

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್‌ ಅವರು ಐದು ವರ್ಷ ಪೂರೈಸುತ್ತಿರುವ ಹಿನ್ನೆಲೆ ಕಾಂಗ್ರೆಸ್‌ ನಾಯಕರೆಲ್ಲರೂ ಇವರನ್ನು ಅಭಿನಂದಿಸಿದ್ದರು. ಆದರೆ, ಬಿಜೆಪಿ ನಾಯಕರಾದ ರೇಣುಕಾಚಾರ್ಯ ದಿಢೀರನೆ ಡಿಕೆ ಶಿವಕುಮಾರ್‌ ಅವರನ್ನು ಭೇಟಿಯಾಗಿರುವುದು ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ. ಸದ್ದಿಲ್ಲದೆ ಕಾಂಗ್ರೆಸ್‌ ಸೇರಲು ರೇಣುಕಾಚಾರ್ಯ ನಿರ್ಧರಿಸಿದ್ದು, ಕೆಪಿಸಿಸಿ ಅಧ್ಯಕ್ಷರನ್ನು ಅಭಿನಂದಿಸುವ ನೆಪದಲ್ಲಿ ಮಹತ್ವದ ಚರ್ಚೆ ನಡೆಸಿದ್ದಾರೆ. ಕಾಂಗ್ರೆಸ್‌ ಸೇರುವ ಬಗ್ಗೆಯೂ ಡಿಕೆಶಿ ಜೊತೆ ಮಾತನಾಡಿದ್ದಾರೆ ಎಂದು ಹೇಳಲಾಗುತ್ತಿದೆ.

ಅಚ್ಚರಿಯೆಂದರೆ ರೇಣುಕಾಚಾರ್ಯ ಅವರು ಇಂದು ಕಾಂಗ್ರೆಸ್‌ ಸರ್ಕಾರವನ್ನು ಟೀಕಿಸಿದ್ದಾರೆ. ರಾಜ್ಯವನ್ನು ದಿವಾಳಿ ಮಾಡಿರುವುದರ ಜೊತೆಗೆ ಸಾಲದ ಹೊರೆಯನ್ನು ಹೊರಿಸುತ್ತಿರುವ ಕಾಂಗ್ರೆಸ್ ಸರ್ಕಾರ ಸಿದ್ದರಾಮಯ್ಯ ಸರ್ಕಾರ ಮಾಡಿರುವ ಸಾಲದಿಂದ ರಾಜ್ಯದ ಪ್ರತಿ ಜನರ ತಲೆಯ ಮೇಲೆ ₹1 ಲಕ್ಷ ಸಾಲದ ಹೊರೆ ಹೊರಿಸಿದ್ದು ಕಾಂಗ್ರೆಸ್ಸಿನ ಮುಂದುವರೆದ ಗ್ಯಾರಂಟಿಯಾಗಿದೆ ಎಂದು ವಾಗ್ದಾಳಿಯೂ ನಡೆಸಿದ್ದು, ಇದರ ನಡುವೆಯೇ ಅವರು ಕಾಂಗ್ರೆಸ್‌ ಅಧ್ಯಕ್ಷರನ್ನು ಭೇಟಿಯಾಗಿರುವುದು ಕುತೂಹಲ ಮೂಡಿಸಿದೆ.

BJP Leader Renukacharya Meets DK Shivakumar Sparks Congress Joining Speculation

ಕಾಂಗ್ರೆಸ್‌ ಕೂಡ ತಮ್ಮ ಪಕ್ಷಕ್ಕೆ ಯಾರಾದರೂ ಬರಬಹುದು ಎಂದು ಓಪನ್‌ ಆಫರ್‌ ಕೊಟ್ಟಿದೆ. ಹಾಗಾಗಿ ಬೇರೆ ಪಕ್ಷಗಳಿಂದ ಕಾಂಗ್ರೆಸ್‌ಗೆ ಬಂದ ಕೆಲವರ ಬದುಕು ಕೂಡ ಬದಲಾಗಿದೆ. ಅಲ್ಲದೆ ಬಿಜೆಪಿ ಶಾಸಕರಾದ ಶಿವರಾಂ ಹೆಬ್ಬಾರ್‌, ಎಸ್.ಟಿ.ಸೋಮಶೇಖರ್‌ ಅವರು ಬಿಜೆಪಿಯಲ್ಲಿದ್ದುಕೊಂಡೇ ಕಾಂಗ್ರೆಸ್‌ ಪರ ಬ್ಯಾಟಿಂಗ್‌ ಬೀಸುತ್ತಿದ್ದಾರೆ. ಪರೋಕ್ಷವಾಗಿ ಕಾಂಗ್ರೆಸ್‌ ಸೇರುವ ಸುಳಿವನ್ನು ನೀಡುತ್ತಲೇ ಇದ್ದಾರೆ. ಡಿಕೆಶಿ ಔತಣಕೂಟದಲ್ಲೂ ಇವರು ಕಾಣಿಸಿಕೊಂಡಿದ್ದರು. ಇದರ ಬೆನ್ನಲ್ಲೇ ರೇಣುಕಾಚಾರ್ಯ ಅವರು ಭೇಟಿಯ ವಿಚಾರವಾಗಿ ಚರ್ಚೆಗಳು ಜೋರಾಗಿವೆ.

ವಿಜಯೇಂದ್ರ ಅವರ ಬಣದಲ್ಲಿ ಗುರುತಿಸಿಕೊಂಡಿರುವ ಎಂಪಿ ರೇಣುಕಾಚಾರ್ಯ ಅವರು ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಚಿವರೂ ಆಗಿದ್ದರು. ಈಗ ಬಿಜೆಪಿಯಲ್ಲಿ ಯತ್ನಾಳ್‌ ಬಣಕ್ಕೆ ಸೆಡ್ಡು ಹೊಡೆಯಲು ಲಿಂಗಾಯತರ ನಾಯಕ ಸಭೆಗಳನ್ನು ಆಯೋಜಿಸುವ ಮೂಲಕ ರೇಣುಕಾಚಾರ್ಯ ಟಕ್ಕರ್‌ ಕೊಟ್ಟಿದ್ದರು. ರಾಜ್ಯದಲ್ಲಿ ಮತ್ತೆ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರುವುದು ನಮ್ಮ ಗುರಿ ಎಂದು ಹೇಳಿದ್ದ ರೇಣುಕಾಚಾರ್ಯ ಅವರು ಸದ್ದಿಲ್ಲದೆ ಕಾಂಗ್ರೆಸ್‌ ಕಡೆಗೆ ಮುಖ ಮಾಡಿದ್ದಾರಾ? ಎಂಬ ಮಾತುಗಳು ಕೇಳಿಬರುತ್ತಿವೆ.

BJP Leader Renukacharya Meets DK Shivakumar Sparks Congress Joining Speculation
More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+