ಹಿಂದೂ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್‌: ರಾಜ್ಯ ಸರ್ಕಾರದ ವಿರುದ್ಧ ಸುನಿಲ್‌ ಕುಮಾರ್‌ ಆಕ್ರೋಶ

ಬೆಂಗಳೂರು,ಜುಲೈ 21: ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಭಜರಂಗದಳ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್‌ ನೀಡಿರುವುದಕ್ಕೆ ಮಾಜಿ ಸಚಿವ ಹಾಗೂ ಕಾರ್ಕಳ ಶಾಸಕ ಹಾಗೂ ಮಾಜಿ ಸಚಿವ ವಿ ಸುನೀಲ್‌ ಕುಮಾರ್‌ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾಜಿ ಸಚಿವ ಸುನೀಲ್‌ ಕುಮಾರ್‌ ಟ್ವೀಟರ್‌ ಮಾಡಿದ್ದು, ರಾಜ್ಯದ ಕಾಂಗ್ರೆಸ್‌ ಸರ್ಕಾರ ಕೋಮು ಗಲಭೆ ನಿಯಂತ್ರಣದ ಹೆಸರಿನಲ್ಲಿ ಹಿಂದುಗಳು ಹಾಗೂ ಹಿಂದು ಸಂಘಟನೆಗಳನ್ನು ಗುರಿಯಾಗಿಸಿ ದ್ವೇಷದ ಕ್ರಮ ತೆಗೆದುಕೊಳ್ಳಲು ಮುಂದಾಗಿದೆ ಎಂದು ಕಾಂಗ್ರೆಸ್‌ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದೆ.

BJP Leader V Sunil Kumar Slams Congress Government

ಬಾಲಚಂದ್ರ ಅತ್ತಾವರ, ಗಣೇಶ್ ಅತ್ತಾವರ, ಜಯಪ್ರಶಾಂತ್ ಶಕ್ತಿನಗರ ಇವರಿಗೆ ಮಂಗಳೂರು ಪೊಲೀಸರು ಗಡಿಪಾರು ನೋಟಿಸ್ ನೀಡಿದ್ದಾರೆಂಬ ಮಾಹಿತಿ ಲಭಿಸಿದ್ದು, ಇದು ದ್ವೇಷ ರಾಜಕಾರಣದ ಪರಮಾವಧಿಯಾಗಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಷ್ಟು ದಿನಗಳ ಶಾಂತಿ ನೆಲೆಸಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಧರ್ಮ- ಧರ್ಮಗಳ ಮಧ್ಯೆ ದ್ವೇಷ ಹಚ್ಚಲು ಮುಂದಾಗಿದೆ.

ಮಂಗಳೂರಿನಲ್ಲಿ ಕೋಮು ದ್ವೇಷ ನಿಯಂತ್ರಣ ಘಟಕ ಸ್ಥಾಪನೆ ಮಾಡಿರುವುದೇ ಹಿಂದು ಸಂಘಟನೆಗಳನ್ನು ಹತ್ತಿಕ್ಕುವ ಉದ್ದೇಶದಿಂದ ಕೂಡಿದ್ದು, ಇದರ ವಿರುದ್ಧ ನಾವು ಕಾನೂನು ರೀತ್ಯ ಹೋರಾಟ ನಡೆಸುತ್ತೇವೆ. ಈ ಮೂವರಿಗೆ ಯಾವ ಕಾರಣಕ್ಕೆ ಗಡಿಪಾರು ನೋಟಿಸ್ ನೀಡಲಾಗಿದೆ ಎಂಬ ಬಗ್ಗೆ ಪೊಲೀಸ್ ಆಯುಕ್ತರು ಇದುವರೆಗೆ ಉತ್ತರ ನೀಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಕಣ್ಸನ್ನೆಗೆ ತಕ್ಕಂತೆ ಸ್ಪೀಕರ್ ಯು ಟಿ ಖಾದರ್ ಮಾತ್ರ ಕುಣಿಯುತ್ತಿದ್ದಾರೆ ಎಂದು ನಾವು ಭಾವಿಸಿದ್ದೆವು. ಆದರೆ ಇಡಿ ಪೊಲೀಸ್ ಇಲಾಖೆಯನ್ನು ತಮ್ಮ ಮತ ಬ್ಯಾಂಕ್ ಕ್ರೋಢೀಕರಣಕ್ಕೆ ಮುಂದಾಗಿದ್ದಾರೆ.

ಸಿದ್ದರಾಮಯ್ಯ ಯನವರ ಬೆಂಬಲದಿಂದ ಈ ಹಿಂದೆ ಪಿಎಫ್ಐ ಉಗ್ರರು ಹಿಂದು ಕಾರ್ಯಕರ್ತರ ಬರ್ಭರ ಹತ್ಯೆ ಮಾಡಿರುವುದು ನಮ್ಮ ಕಣ್ಣ ಮುಂದೆ ಇದೆ. ಹಿಂದಿನ ಘಟನೆಯನ್ನು ಸಿದ್ದರಾಮಯ್ಯ ಸರ್ಕಾರ ಮತ್ತೆ ಪುನರಾವರ್ತನೆ ಮಾಡಲು ಹೊರಟಿದೆ. ಕಾಂಗ್ರೆಸ್ ಸರ್ಕಾರದ ಈ ನಡೆಯನ್ನು ತೀವ್ರವಾಗಿ ಖಂಡಿಸುತ್ತೇವೆ. ಮತ್ತು ಹೋರಾಟ ರೂಪಿಸುತ್ತೇವೆ ಎಂದು ಸುನೀಲ್ ಕುಮಾರ್‌ ಟ್ವೀಟ್‌ ಮೂಲಕ ತಮ್ಮ ಆಕ್ರೋಶವನ್ನ ವ್ಯಕ್ತಪಡಿಸಿದ್ದಾರೆ.

ಸರ್ಕಾರದ ವಿರುದ್ದ ಮಾಜಿ ಸಿಎಂ ಬೊಮ್ಮಾಯಿ ವಾಗ್ದಾಳಿ

ಈ ಸರ್ಕಾರ ಬಂದ ಮೇಲೆ ಕರ್ನಾಟಕದ ಜನರ ಬದುಕು ದುಸ್ತರ ಆಗಿದೆ. ರೈತರು ಎರಡು ಬಾರಿ ಬಿತ್ತನೆ ಮಾಡಿದರು ಬೆಳೆ ಬರದೇ ರೈತರು ಸಂಕಷ್ಟಕ್ಕೆ ಸಿಕಿದ್ದಾರೆ. ಸರ್ಕಾರ ಅವರ ರಕ್ಷಣೆಗೆ ಬಂದಿಲ್ಲ. 2013 ರಿಂದ 18ರ ವರೆಗೆ ಅತಿ ಹೆಚ್ಚು ರೈತರು ಸುಮಾರು 4000ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡ ದಾಖಲೆ ಇದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ನಾವು ನಮ್ಮ ಬಜೆಟ್ ನಲ್ಲಿ ಡಿಗ್ರಿವರೆಗೆ ಉಚಿತ ವಿದ್ಯಾಭ್ಯಾಸ ನಿಡುವುದಾಗಿ ಹೇಳಿದ್ದೇವು. ಶಾಲಾ ಮಕ್ಕಳಿಗೆ ಪ್ರತ್ಯೇಕ ಬಸ್ ವ್ಯವಸ್ಥೆ ಮಾಡುವುದಾಗಿ ಹೇಳಿದ್ದೇವು ಇವರು ಅದನ್ನು ಕೈ ಬಿಟ್ಟಿದ್ದಾರೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿಗೆ ಕೊಲೆ ಸುಲಿಗೆ ಹೆಚ್ಚಾಗಿದೆ. ಪೊಲಿಸ್ ಠಾಣೆಯಲ್ಲಿ ಮಾಮೂಲು ಕೇಳುವ ಕೆಲಸ ಶುರುವಾಗಿದೆ.

ವಿದ್ಯಾರ್ಥಿಗಳು, ರೈತರು, ಸರ್ಕಾರಿ ನೌಕರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ದುಡಿಯುವ ಸಾಮಾನ್ಯ ಜನರ ಬದುಕು ಅಸ್ಥಿರಗೊಳಿಸಿದ್ದಾರೆ. ಇವರು ಮಂಡಿಸಿರುವುದು ಜನ ವಿರೋಧಿ ಬಜೆಟ್‌ ಇವರು ಗ್ಯಾರೆಂಟಿ ಗಳಿಗೆ ಹಣ ಹೊಂದಿಸಲು ಪರದಾಡುತ್ತಿದ್ದಾರೆ. ಇವರ ಅವಧಿಯಲ್ಲಿ ಅತಿ ಹೆಚ್ಚು ಸಾಲ ಮಾಡಿದ್ದಾರೆ. ನಿಜಲಿಂಗಪ್ಪ ರಿಂದ ಹಿಡಿದು ಜಗದೀಶದ ಶೆಟ್ಟವರೆಗೆ ಒಂದು ಲಕ್ಷ ಕೋಟಿ ಸಾಲವಾಗಿತ್ತು‌. ಸಿದ್ದರಾಮಯ್ಯ ಅವರ ಅವಧಿಯಲ್ಲಿ ಒಂದು ಲಕ್ಷ ಮೂವತ್ತು ಸಾವಿರ ಕೋಟಿ ಸಾಲ ಮಾಡಿದ್ದಾರೆ‌ ಎಂದು ಬೊಮ್ಮಾಯಿ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+