ಬೇಳೂರು ಗೋಪಾಲಕೃಷ್ಣ ಉದ್ಧಟತನ ಹೇಳಿಕೆ: ಬಿಜೆಪಿಗರ ಉಗ್ರ ಪ್ರತ್ಯುತ್ತರ
Recommended Video

ಬೆಂಗಳೂರು, ಮಾರ್ಚ್ 05: ಕಾಂಗ್ರೆಸ್ ಮುಖಂಡ ಬೇಳೂರು ಗೋಪಾಲ್ ಕೃಷ್ಣ ಅವರು ಮೋದಿಗೆ ಗುಂಡಿಕ್ಕಿ ಎಂದು ಉದ್ಧಟತನದ ಹೇಳಿಕೆ ನೀಡಿರುವುದು ರಾಜ್ಯದಾದ್ಯಂತ ಬಿಜೆಪಿ ಕಾರ್ಯಕರ್ತರು ಮುಖಂಡರಲ್ಲಿ ಆಕ್ರೋಶ ಕೆರಳಿಸಿದೆ.
ಬಿಜೆಪಿಯಲ್ಲಿದ್ದು ಕಾಂಗ್ರೆಸ್‌ಗೆ ಪಕ್ಷಾಂತರ ಮಾಡಿರುವ ಬೇಳೂರು ಗೋಪಾಲಕೃಷ್ಣ ಅವರು ಕಾರ್ಯಕ್ರಮವೊಂದರಲ್ಲಿ ಪ್ರಧಾನಿ ಮೋದಿಗೆ ಗುಂಡು ಹೊಡೆಯಿರಿ ಎಂದು ಹೇಳಿದ್ದರು. ಈ ವಿಡಿಯೋವನ್ನು ಕರ್ನಾಟಕ ಬಿಜೆಪಿ ಟ್ವಿಟ್ಟರ್‌ನಲ್ಲಿ ಇಂದು ಹಾಕಿದೆ.
ವಿಡಿಯೋ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಬೇಳೂರು ಗೋಪಾಲಕೃಷ್ಣ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಬಿಜೆಪಿಯ ಮುಖ್ಯ ಟ್ವಿಟ್ಟರ್ ಖಾತೆಯಲ್ಲಿ ಸಹ ವಿಡಿಯೋವನ್ನು ಹಾಕಲಾಗಿದ್ದು, ಬೇಳೂರ ಗೋಪಾಲಕೃಷ್ಣ ವಿರುದ್ಧ ಕ್ರಮಕ್ಕೆ ಒತ್ತಾಯಿಸಲಾಗಿದೆ.
ರಾಜ್ಯ ಬಿಜೆಪಿ ಮುಖಂಡರು ಬೇಳೂರು ಗೋಪಾಲಕೃಷ್ಣ ಅವರ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಹಲವರು ಈ ಕುರಿತು ಹೇಳಿಕೆಗಳನ್ನು ನೀಡಿದ್ದಾರೆ.

ಆಘಾತಕಾರಿ ಹೇಳಿಕೆ: ಶೋಭಾ
ಕಾಂಗ್ರೆಸ್ ಮುಖಂಡ ಬೇಳೂರು ಗೋಪಾಲಕೃಷ್ಣ ಅವರು ಆಘಾತಕಾರಿ ಹೇಳಿಕೆ ನೀಡಿದ್ದಾರೆ. ಸಮಾಜದ ಒಂದು ವಿಭಾಗವನ್ನು ಸಂತುಷ್ಟಿಗೊಳಿಸಲೆಂದು ಮೋದಿಯನ್ನು ಕೊಲ್ಲಿ ಎಂದು ಅವರು ಹೇಳಿದ್ದಾರೆ. ಈ ಕೂಡಲೇ ಪರಮೇಶ್ವರ್ ಹಾಗೂ ಕುಮಾರಸ್ವಾಮಿ ಅವರು ಬೇಳೂರು ಗೋಪಾಲಕೃಷ್ಣ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದು ಶೋಭಾ ಒತ್ತಾಯಿಸಿದ್ದಾರೆ.

'ಪಾಕಿಸ್ತಾನದ ಭಾಷೆ ಮಾತನಾಡುತ್ತಿದ್ದಾರೆ'
ಬಿಜೆಪಿ ಮುಖಂಡ ಸಿಟಿ ರವಿ ಅವರು ಟ್ವೀಟ್ ಮಾಡಿ, ಕಾಂಗ್ರೆಸ್ ಪಕ್ಷದ ಮುಖಂಡರು ಪಾಕಿಸ್ತಾನದ ಭಾಷೆ ಮಾತನಾಡುತ್ತಿದ್ದಾರೆ. ಪ್ರಜೆಗಳಿಂದ ಆಯ್ಕೆಯಾದ ಮೋದಿ ಅವರನ್ನು ಕೊಲ್ಲುವಂತೆ ಹೇಳುತ್ತಿದ್ದಾರೆ. ಇದೇನು ಪ್ರಜಾಪ್ರಭುತ್ವವೇ ಎಂದು ಸಿಟಿ.ರವಿ, ರಾಹುಲ್ ಗಾಂಧಿ ಅವರನ್ನು ಪ್ರಶ್ನಿಸಿದ್ದಾರೆ. ಕೂಡಲೇ ಬೇಳೂರು ಅವರನ್ನು ಬಂಧಿಸಬೇಕೆಂದು ರವಿ ಒತ್ತಾಯಿಸಿದ್ದಾರೆ.

'ಕಾಂಗ್ರೆಸ್ ಮನಸ್ಥಿತಿಯನ್ನು ತೋರುತ್ತದೆ'
ಬಿಎಸ್ ಯಡಿಯೂರಪ್ಪ ಪುತ್ರ ವಿಜಯೇಂದ್ರ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದು, ಈ ಹೇಳಿಕೆ ಕಾಂಗ್ರೆಸ್ ಪಕ್ಷದ ಮನಸ್ಥಿತಿಯನ್ನು ತೋರುತ್ತದೆ. ಕಾಂಗ್ರೆಸ್ ಪಕ್ಷ ಅತ್ಯಂತ ಕೀಳುಮಟ್ಟಕ್ಕೆ ಇಳಿಯುತ್ತಿದೆ ಎಂದು ಹೇಳಿದ್ದಾರೆ.

ಕೂಡಲೇ ಬಂಧಿಸಿ
ಕರ್ನಾಟಕ ಬಿಜೆಪಿ ಸಹ ಇದನ್ನು ಟ್ವೀಟ್ ಮಾಡಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಯ ಮೂಲಕ ಆಯ್ಕೆ ಆಗಿರುವ ಪ್ರಧಾನಿ ಅವರನ್ನು ಹತ್ಯೆ ಮಾಡಿ ಎಂದು ಕಾಂಗ್ರೆಸ್‌ನ ಮುಖಂಡ ಹೇಳಿದ್ದಾರೆ. ಇದು ರಾಷ್ಟ್ರೀಯ ಭದ್ರತೆಯ ವಿಷಯವೆಂದು ಪರಿಗಣಿಸಬೇಕು. ಕೂಡಲೇ ಬೇಳೂರು ಗೋಪಾಲಕೃಷ್ಣ ಅವರನ್ನು ಬಂಧಿಸಬೇಕು ಎಂದು ಬಿಜೆಪಿ ಟ್ವೀಟ್ ಮಾಡಿದೆ.
-
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಬಿ.ಎಸ್.ಯಡಿಯೂರಪ್ಪ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ












Click it and Unblock the Notifications