DK Shivakumar: ಡಿಕೆ ಶಿವಕುಮಾರ್ ಬಾಯಲ್ಲಿ ಸಂವಿಧಾನ ಬದಲಾವಣೆ ಮಾತು: ಕಾಂಗ್ರೆಸ್‌ನ ಅಜೆಂಡಾ ಎಂದ ಬಿಜೆಪಿ
ಬಿಜೆಪಿಯು ಸಂವಿಧಾನದ ಬದಲಾವಣೆಗೆ ಮುಂದಾಗಿದೆ ಎಂದು ಕಾಂಗ್ರೆಸ್ ಪಕ್ಷವು ಮೊದಲಿನಿಂದಲೂ ಆರೋಪಿಸುತ್ತಾ ಬಂದಿದೆ. ಕೆಲ ಬಿಜೆಪಿ ನಾಯಕರ ಹೇಳಿಕೆಗಳ ವಿರುದ್ಧವೂ ಸಿಡಿಯುತ್ತಿತ್ತು. ಆದರೆ, ಇದೀಗ ಕಾಂಗ್ರೆಸ್ ಪಕ್ಷದ ಕರ್ನಾಟಕದ ಟ್ರಬಲ್ ಶೂಟರ್ ಎಂದೇ ಕರೆಸಿಕೊಂಡಿರುವ ಡಿ.ಕೆ.ಶಿವಕುಮಾರ್ ಅವರ ಬಾಯಲ್ಲಿ ಸಂವಿಧಾನ ಬದಲಾಯಿಸುವ ಮಾತು ಕೇಳಿಬಂದಿದೆ ಎಂದು ಬಿಜೆಪಿ ನಾಯಕರು ಗಂಭೀರ ಆರೋಪ ಮಾಡಿದ್ದಾರೆ. ಇದಕ್ಕೆ ಪುಷ್ಟಿ ನೀಡುವಂತೆ ಅವರು ಸಂದರ್ಶನವೊಂದರಲ್ಲಿ ಮಾತನಾಡಿರುವ ವಿಡಿಯೋ ಅನ್ನು ಕೂಡ ಬಿಜೆಪಿ ನಾಯಕರು ಹಂಚಿಕೊಂಡಿದ್ದಾರೆ.
ಖಾಸಗಿ ವಾಹಿನಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಭಾಗವಹಿಸಿದ್ದರು. ಈ ವೇಳೆ ಸಂವಿಧಾನ ಬದಲಾಯಿಸುವ ಬಗ್ಗೆ ಹೇಳಿಕೆ ನೀಡಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ದೂರಿದ್ದಾರೆ.

ಒಳ್ಳೆಯ ದಿನಗಳಿಗೆ ಕಾಯಬೇಕು. ಹಲವು ಬದಲಾವಣೆಗಳು ಆಗಬೇಕಿದೆ. ಸಂವಿಧಾನ ಕೂಡ ಬದಲಾಗುತ್ತಿದೆ ಎಂದು ಡಿಕೆ ಶಿವಕುಮಾರ್ ಅವರು ಹೇಳಿರುವುದು ವೈರಲ್ ವಿಡಿಯೋದಲ್ಲಿದೆ. ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಬಿಜೆಪಿ ನಾಯಕ ಆರ್.ಅಶೋಕ್, ಕಾಂಗ್ರೆಸ್ ಕರ್ನಾಟಕದ ಸಂವಿಧಾನವಾದಿಗಳು ಮತ್ತು ಅಂಬೇಡ್ಕರ್‌ವಾದಿಗಳು ಎಂದು ಕರೆಯಲ್ಪಡುವವರು ಎಲ್ಲಿ ಅಡಗಿದ್ದಾರೆ? ಎಂದು ಕಿಡಿಕಾರಿದ್ದಾರೆ.
ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ಅವರು "ಸಂವಿಧಾನ ಬದಲಾಗುತ್ತದೆ" ಎಂದು ಹೇಳುತ್ತಾರೆ. ಕಾಂಗ್ರೆಸ್ ತನ್ನ 55 ವರ್ಷಗಳ ಆಳ್ವಿಕೆಯಲ್ಲಿ, ತುರ್ತು ಪರಿಸ್ಥಿತಿಯ ಸಮಯದಲ್ಲಿ 4 ತಿದ್ದುಪಡಿಗಳು ಮತ್ತು 1952ರಲ್ಲಿ ಮೊದಲ ಸಾರ್ವತ್ರಿಕ ಚುನಾವಣೆಗಳು ನಡೆಯುವ ಮೊದಲೇ ಜವಾಹರಲಾಲ್ ನೆಹರು ತಂದ ಮೊದಲ ತಿದ್ದುಪಡಿ ಸೇರಿದಂತೆ ನಮ್ಮ ಸಂವಿಧಾನಕ್ಕೆ 77 ತಿದ್ದುಪಡಿಗಳನ್ನು ಮಾಡಿದೆ. ಕಾಂಗ್ರೆಸ್ ಮತ್ತು ಸಂವಿಧಾನದ ಮೇಲಿನ ಅದರ ಬೂಟಾಟಿಕೆಗೆ ನಾಚಿಕೆಗೇಡು ಎಂದು ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್‌ನ ಅಜೆಂಡಾ ಬಹಿರಂಗ: ವಿಜಯೇಂದ್ರ
ಭಾರತದ ಪ್ರಜಾತಂತ್ರ ವ್ಯವಸ್ಥೆಯ ಸಾರ್ವಭೌಮ ಎಂದು ಗೌರವಿಸುವ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವನ್ನೇ ತಿದ್ದುಪಡಿ ಮಾಡಿದರೂ ಸರಿ ಮುಸ್ಲಿಮರಿಗೆ ಮೀಸಲಾತಿ ನೀಡುವುದೇ ನಮ್ಮ ಪ್ರಥಮ ಆದ್ಯತೆ, ದೇಶ, ಸಂವಿಧಾನಕ್ಕಿಂತ ಮುಸ್ಲಿಮರಿಗೆ ಮೀಸಲಾತಿ ಕೊಡುವುದು ನಮ್ಮ ಕರ್ತವ್ಯ" ಎಂಬ ಅರ್ಥದಲ್ಲಿ ರಾಷ್ಟ್ರೀಯ ವಾಹಿನಿಯೊಂದರ ಸಂದರ್ಶನದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಾಂಗ್ರೆಸ್‌ನ ಮುಖ್ಯ ಅಜೆಂಡಾ ಏನು ಎಂಬುದನ್ನು ಬಹಿರಂಗಪಡಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕೂಡ ಖಂಡನೆ ವ್ಯಕ್ತಪಡಿಸಿದ್ದಾರೆ.
ಕಳೆದ ಚುನಾವಣೆಗಳಲ್ಲಿ ಭಾರತೀಯ ಜನತಾ ಪಾರ್ಟಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಸಂವಿಧಾನ ಬದಲಾಯಿಸುತ್ತಾರೆ ಎಂಬ ವ್ಯವಸ್ಥಿತ ಅಪಪ್ರಚಾರ ನಡೆಸಿ, ಶೋಷಿತ ಸಮುದಾಯಗಳಲ್ಲಿ ಗೊಂದಲವೆಬ್ಬಿಸಿ, ಅಧಿಕಾರ ಕಬಳಿಸಲು ಕಸರತ್ತು ನಡೆಸಿದ್ದ ಕಾಂಗ್ರೆಸ್‌ನ0 ಅಸಲಿ ಮುಖವಾಡ ಏನು ಎಂಬುದನ್ನು ಇಂದು ರಾಜ್ಯ ಹಾಗೂ ದೇಶದ ಜನತೆ ಅರ್ಥ ಮಾಡಿಕೊಳ್ಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ವಿಶೇಷವಾಗಿ ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ಸಮುದಾಯಗಳು "ಕಾಂಗ್ರೆಸ್ ಇರುವುದು ಮುಸ್ಲಿಮರ ಹಿತಕಾಯಲು ಮಾತ್ರ" ಎಂಬ ವಾಸ್ತವ ಸ್ಥಿತಿಯನ್ನು ಅರಿಯಬೇಕಿದೆ. ಈಗಾಗಲೇ ಪರಿಶಿಷ್ಟರ ಕಲ್ಯಾಣ ಕಾರ್ಯಕ್ಕಾಗಿ ನಿಗದಿಯಾಗಿದ್ದ ಎಸ್‌ಸಿಪಿ-ಟಿಎಸ್‌ಪಿ ಹಣವನ್ನು ಕಾಂಗ್ರೆಸ್ ತನ್ನ ಬಿಟ್ಟಿ ಭಾಗ್ಯಗಳ ಯೋಜನೆಗೆ ಬಳಸಿಕೊಂಡು, ಬ್ಯಾಂಕ್‌ನಲ್ಲಿ ಠೇವಣಿ ಇಟ್ಟಿದ್ದ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣಕ್ಕೂ ಕನ್ನ ಹಾಕಿದೆ. ಹಿಂದುಳಿದ ವರ್ಗಗಳ ನಿಗಮಗಳಿಗೆ ಕನಿಷ್ಠ ಮಟ್ಟದ ಅನುದಾನವನ್ನೂ ಬಿಡುಗಡೆ ಮಾಡದೆ ತಾನು "ಹಿಂದು" ವಿರೋಧಿ ಎನ್ನುವುದನ್ನ ಸಾಬೀತು ಮಾಡಿದೆ ಎಂದು ದೂರಿದೆ.
ಇದೀಗ ಮುಸ್ಲಿಮರಿಗೆ ಮೀಸಲಾತಿ ಕೊಡಲು ಸಂವಿಧಾನದ ಆಶಯಗಳನ್ನು ಮೂಲೆಗೆ ಸರಿಸಿ, ಸಂವಿಧಾನವನ್ನೇ ಬುಡಮೇಲು ಮಾಡಲು ಸಿದ್ಧ ಎಂಬಂತೆ ಕಾಂಗ್ರೆಸ್ಸಿಗರು ನಡೆದುಕೊಳ್ಳುತ್ತಿದ್ದಾರೆ, ಸಂವಿಧಾನ ವಿರೋಧಿಗಳ್ಯಾರು? ಸಂವಿಧಾನವನ್ನು ಬದಲಾಯಿಸುವವರು ಯಾರು? ಸಂವಿಧಾನವನ್ನು ಇದುವರೆಗೆ ಅತಿ ಹೆಚ್ಚು ಬಾರಿ ತಿದ್ದುಪಡಿ ಮಾಡಿದವರು ಯಾರು? ಎಂಬ ಪ್ರಶ್ನೆಗಳಿಗೆ ನಿಶ್ಚಿತವಾಗಿಯೂ ಕಾಂಗ್ರೆಸ್ ಎಂದು ಉತ್ತರ ಹೇಳಲೇಬೇಕಾಗಿದೆ ಎಂದು ಆರೋಪಿಸಿದ್ದಾರೆ.
ಅಂಬೇಡ್ಕರ್ ಅವರ ಸಿದ್ದಾಂತವಾದಿಗಳು ಎಂಬ ಮುಖವಾಡ ತೊಟ್ಟ ಕೆಲವರು, ಹಿಂದುಳಿದ ಹಾಗೂ ಶೋಷಿತ ಸಮುದಾಯಗಳನ್ನು ದಿಕ್ಕು ತಪ್ಪಿಸಲು ಈವರೆಗೂ ಬಿಜೆಪಿ ವಿರುದ್ಧ ಅಪಪ್ರಚಾರದಲ್ಲಿ ನಿರತರಾಗಿದ್ದರು. ಇದೀಗ ಸ್ವತಃ ಡಿಕೆ ಶಿವಕುಮಾರ್ ಅವರೇ ಸಂವಿಧಾನ ತಿದ್ದುಪಡಿ ಮಾಡಿಯಾದರೂ ಮುಸ್ಲಿಮರಿಗೆ ಮೀಸಲಾತಿ ಕೊಡುತ್ತೇನೆ ಎಂದು ಹೇಳುವ ಮೂಲಕ ಸಂವಿಧಾನಕ್ಕೇ ಸವಾಲೊಡ್ಡುವ ಮಾತನಾಡಿದ್ದಾರೆ. ಇದಕ್ಕೆ ಪ್ರಗತಿಪರ ಹಾಗೂ ದಲಿತಪರ ಎಂದು ಹೇಳಿಕೊಳ್ಳುವ ಬುದ್ದಿಜೀವಿಗಳೆನಿಸಿಕೊಂಡವರು ಏನು ಹೇಳುತ್ತಾರೆ? ಎಂದು ಗುಡುಗಿದ್ದಾರೆ.
ಭಾರತೀಯ ಜನತಾ ಪಾರ್ಟಿಯ ಹೋರಾಟ ಈ ದೇಶದ ಪರಂಪರೆ, ಸಂಸ್ಕೃತಿ ರಕ್ಷಿಸಿ ಸಂವಿಧಾನದ ಆಶಯಗಳನ್ನು ಚಾಚೂ ತಪ್ಪದೇ ಜನರತ್ತ ಕೊಂಡೊಯ್ಯುವುದೇ ಆಗಿದೆ. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಪ್ರತಿಯೊಂದು ಕಾರ್ಯಕ್ರಮಗಳು, ಯೋಜನೆಗಳೂ ದೇಶದ ಒಟ್ಟು ಅಭಿವೃದ್ಧಿ, ಜನಕಲ್ಯಾಣವನ್ನು ಕೇಂದ್ರೀಕರಿಸಿ ದೇಶದ ಜನರ ಹೃದಯಗೆದ್ದಿದೆ ಎಂದಿದ್ದಾರೆ.
ಕೇವಲ ಮುಸ್ಲಿಮರ ಕಲ್ಯಾಣವನ್ನು ಮಾತ್ರ ಕೇಂದ್ರೀಕರಿಸಿರುವ ಕಾಂಗ್ರೆಸ್ ವಿರುದ್ಧ ಪಾಠ ಕಲಿಸಲು ಜನತೆ ಬೀದಿಗಿಳಿದು ಹೋರಾಡಬೇಕಾದ ಅನಿವಾರ್ಯ ಸ್ಥಿತಿ ಬಂದಿದೆ. ಇಲ್ಲದಿದ್ದರೆ ಭಾರತೀಯತೆ ಹಾಗೂ ಸಂವಿಧಾನ ಎರಡಕ್ಕೂ ಅಪಾಯ ತಂದೊಡ್ಡುವಲ್ಲಿ ಮುಂದಾಗಿರುವ ಕಾಂಗ್ರೆಸ್‌ಗೆ ಈಗಲೇ ಅಂಕುಶ ಹಾಕದಿದ್ದರೆ ಮುಂದೊಂದು ದಿನ ದೇಶಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ ಎನ್ನುವುದನ್ನು ಜನತೆ ಅರಿಯಬೇಕಿದೆ ಎಂದು ವಿಜಯೇಂದ್ರ ಎಚ್ಚರಿಸಿದ್ದಾರೆ.
ಕಾಂಗ್ರೆಸ್ ಏನು ಎಂಬುದನ್ನು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಅವರು ಕಾನೂನುಬಾಹಿರ ಧರ್ಮ ಆಧಾರಿತ ಮೀಸಲಾತಿಗಳನ್ನು ತಳ್ಳಲು ಮತ್ತು ಕೇವಲ ಒಂದು ಸಮುದಾಯದ ಹಿತಾಸಕ್ತಿಗಳನ್ನು ರಕ್ಷಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವ ಹಂತಕ್ಕೆ ತಲುಪಲು ಸಿದ್ಧರಿದ್ದಾರೆ. ಇದು ಸಾಮಾಜಿಕ ನ್ಯಾಯವಲ್ಲ. ಇದು ಬಾಬಾಸಾಹೇಬ್ ಅಂಬೇಡ್ಕರ್ ರಚಿಸಿದ ಸಂವಿಧಾನದ ಮೂಲತತ್ವವನ್ನು ಹೊಡೆಯುವ ಸ್ಪಷ್ಟ ಮತ್ತು ಕ್ಷಮಿಸದ ಅಪರಾಧ.
ಸಂವಿಧಾನದೊಂದಿಗೆ ಕಾಂಗ್ರೆಸ್‌ನ ನಿಜವಾದ ಉದ್ದೇಶವನ್ನು ಬಹಿರಂಗಪಡಿಸಿದೆ. ಸಮಾನತೆ ಮತ್ತು ನ್ಯಾಯದ ಪ್ರತಿಯೊಂದು ತತ್ವವನ್ನು ತ್ಯಜಿಸುವುದಾದರೂ ಸಹ, ತಮ್ಮ ಮತಬ್ಯಾಂಕ್‌ಗೆ ಸೇವೆ ಸಲ್ಲಿಸಲು ಅವರು ನೆಲದ ಕಾನೂನನ್ನು ಪುನಃ ಬರೆಯಲು ಸಿದ್ಧರಾಗಿದ್ದಾರೆ. ರಾಹುಲ್ ಗಾಂಧಿ ಅವರೇ ಕರ್ನಾಟಕದಲ್ಲಿರುವ ನಿಮ್ಮ ಸರ್ಕಾರಕ್ಕೆ ಸಂವಿಧಾನದ ಪ್ರತಿಯನ್ನು ನೀಡಲು ಕಾಳಜಿ ವಹಿಸುತ್ತೀರಾ? ಎಂದು ವಿಜಯೇಂದ್ರ ಕೇಳಿದ್ದಾರೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ












Click it and Unblock the Notifications