ಲೋಕಸಭಾ ಚುನಾವಣೆಗೆ ಟಿಕೆಟ್‌ ಮಿಸ್!?; ಡಿ.ವಿ.ಸದಾನಂದಗೌಡರ ಕ್ಷೇತ್ರದ ಟಿಕೆಟ್‌ಗೆ ನಡೆದಿದೆ ಭಾರೀ ಪೈಪೋಟಿ!

ಬೆಂಗಳೂರು, ಜೂನ್‌ 05: 2024 ರ ಲೋಕಸಭಾ ಚುನಾವಣೆಯಲ್ಲಿ ಈ ಬಾರೀ ಹಲವು ಬಿಜೆಪಿ ನಾಯಕರಿಗೆ ಟಿಕೆಟ್‌ ಕೈ ತಪ್ಪಿಲಿದೆ ಎನ್ನುವ ಚರ್ಚೆ ಬಿಜೆಪಿ ಪಾಳಯದಲ್ಲಿ ಜೋರಾಗಿದೆ. 2024 ರ ಲೋಕಸಭಾ ಚುನಾವಣೆಯಲ್ಲಿ 12 ಜನ ಹಾಲಿ ಸಂಸದರಿಗೆ ಟಿಕೆಟ್ ಇಲ್ಲ ಎಂಬ ವರದಿಯಾಗಿದೆ.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸದಸ್ಯ ಡಿ.ವಿ.ಸದಾನಂದಗೌಡ ಅವರಿಗೂ ಸಹ ಟಿಕೆಟ್ ಇಲ್ಲ ಎಂಬ ವರದಿ ಇದೆ.‌ ಹೀಗಾಗಿ ಲೋಕಸಭಾ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇರುವಾಗಲೇ ಬಿಜೆಪಿ ಪಾಳೆಯದಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಟಿಕೆಟ್‌ ಗಾಗಿ ಬೇಡಿಕೆ ಹೆಚ್ಚಾಗಿದೆ.

BJP Leaders Lobby For Bengaluru North Constituency

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಹಾಲಿ ಕ್ಷೇತ್ರದ ಸದಸ್ಯರು ಹಾಗೂ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡಗೆ ಮುಂದಿನ ಬಾರಿ ಟಿಕೆಟ್‌ ನೀಡುವುದಿಲ್ಲ ಎಂಬ ವದಂತಿ ದಟ್ಟವಾಗಿ ಹಬ್ಬಿರುವ ಬೆನ್ನಲ್ಲೇ ಪಕ್ಷದ ಹಲವು ಜನ ನಾಯಕರು ಹಾಗೂ ವಿಧಾನಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಿರುವ ಮಾಜಿ ಸಚಿವರುಗಳು ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸಲು ಈಗಿನಿಂದಲೇ ತೆರೆಮರೆಯ ಲಾಬಿ ಆರಂಭಿಸಿದ್ದಾರೆ.

ಇನ್ನೂ ಉತ್ತರ ಲೋಕಸಭಾ ಕ್ಷೇತ್ರದ ಟಿಕೆಟ್‌ ಗಾಗಿ ಒಬ್ಬ ಕೇಂದ್ರದ ಸಚಿವರೂ ಸೇರಿದಂತೆ ಮೂವರು ಹಾಲಿ ಲೋಕಸಭಾ ಸದಸ್ಯರು ಹಾಗೂ ರಾಜ್ಯದ ಒಬ್ಬ ಮಾಜಿ ಸಚಿವರು ಈ ಕ್ಷೇತ್ರದ ಮೇಲೆ ಕಣ್ಣೀಟ್ಟಿದ್ದಾರೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಅನುಕೂಲಕರ ವಾತಾವರಣವಿದೆ ಎಂಬುದು ಇದಕ್ಕೆ ಪ್ರಮುಖ ಕಾರಣವೆಂದು ಹಲವು ನಾಯಕರು ಕಣ್ಣೀಟ್ಟಿದ್ದಾರೆ. ಅಲ್ಲದೇ ಹಲವು ಜನ ಒಕ್ಕಲಿಗ ನಾಯಕರು ಸಹ ಈ ಕ್ಷೇತ್ರದ ಟಿಕೆಟ್‌ ಗಾಗಿ ಕಣ್ಣೀಟಿದ್ದಾರೆ ಎನ್ನಲಾಗಿದೆ.

BJP Leaders Lobby For Bengaluru North Constituency

2004ರಿಂದಉತ್ತರ ಲೋಕಸಭಾ ಕ್ಷೇತ್ರ ಬಿಜೆಪಿ ವಶದಲ್ಲಿದೆ. 2009ರ ಚುನಾವಣೆಯಲ್ಲಿ ಡಿ.ಬಿ.ಚಂದ್ರೇಗೌಡ ಅವರು ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಭೇರಿ ಬಾರಿಸಿದರು. ನಂತರ 2014ರಲ್ಲಿ ಚಂದ್ರೇಗೌಡರಿಗೆ ವಯಸ್ಸಿನ ಕಾರಣಕ್ಕೆ ಟಿಕೆಟ್‌ ನಿರಾಕರಿಸಿ ಮಾಜಿ ಮುಖ್ಯಮಂತ್ರಿ ಸದಾನಂದಗೌಡರನ್ನು ಕಣಕ್ಕಿಳಿಸಲಾಯಿತು. ಸುಲಭವಾಗಿ ಗೆಲುವು ಸಾಧಿಸಿದ್ದಲ್ಲದೆ, 2019ರಲ್ಲೂ ಬಿಜೆಪಿ ಗೆಲುವು ಸಾಧಿಸಿತ್ತು. ಹೀಗಾಗಿ ಸುಲಭವಾಗಿ ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಗೆಲ್ಲುಬಹುದು ಎಂದು ಈ ಕ್ಷೇತ್ರದಿಂದ ಟಿಕೆಟ್‌ಗಾಗಿ ಪ್ರಯತ್ನ ನಡೆಸಿದ್ದಾರೆ.

ಈಗಾಗಲೇ ವಿಧಾನಸಭೆಯಲ್ಲಿ ಸೋಲು ಅನುಭವಿಸಿರುವ ಬಿಜೆಪಿ ಲೋಕಸಭಾ ಚುನಾವಣೆಗಾಗಿ ಈಗಿನಿಂದಲೇ ತಯಾರಿ ನಡೆಸುತ್ತಿದ್ದು, ಮುಂಬರುವ ಲೋಕಸಭಾ ಚುನಾವಣೆ ಸಂಬಂಧ ಬಿಜೆಪಿ ಪಾಳೆಯದಲ್ಲಿ ಗಂಭೀರ ಸಿದ್ಧತೆ ನಡೆಯುತ್ತಿದೆ ಎನ್ನಲಾಗಿದೆ. ಅಲ್ಲದೇ ಕ್ಷೇತ್ರಗಳ ಲೆಕ್ಕಾಚಾರ ಸದ್ದಿಲ್ಲದೇ ನಡೆದಿದೆ. ಆದರೆ, ಅಂತಿಮವಾಗಿ ಹೈಕಮಾಂಡ್‌ ಈ ಬಾರಿ ಯಾರಿಗೆ ಟಿಕೆಟ್‌ ನೀಡಲಿದೆ ಎಂಬುದಕ್ಕೆ ಕಾಲವೇ ಉತ್ತರ ನೀಡಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+