ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿ ಟಿಕೆಟ್ ಹಂಚಿಕೆ ಕಸರತ್ತು, ಯಲಹಂಕದಲ್ಲಿ ವರಿಷ್ಠರ ಸಭೆ

By Manjunatha
|
Google Oneindia Kannada News

ಬೆಂಗಳೂರು, ಏಪ್ರಿಲ್ 07: ಬಿಜೆಪಿ ಟಿಕೆಟ್ ಹಂಚಿಕೆ ಯಡಿಯೂರಪ್ಪ ಸೇರಿದಂತೆ ಪಕ್ಷದ ವರಿಷ್ಠರಿಗೆ ತಲೆನೋವಾಗಿ ಪರಿಣಮಿಸಿದ್ದು, ಇಂದು ಟಿಕೆಟ್ ಹಂಚಿಕೆ ಸಂಬಂಧ ಚರ್ಚೆಗೆಂದು ಯಲಹಂಕದಲ್ಲಿ ಸಭೆ ಸೇರಲಾಗಿದೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | 2018ರ ನಿಮ್ಮ ಕನಸಿನ ಸಂಪುಟವನ್ನು ಆಯ್ಕೆ ಮಾಡಿ

ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ರಾಜ್ಯ ಬಿಜೆಪಿ ವರಿಷ್ಠರಾದ ಅರವಿಂದ ಲಿಂಬಾವಳಿ, ಸಂತೋಶ್ ಜೀ, ಉಸ್ತುರವಾರಿಯಾದ ಮುರಳಿ ಮನೋಹರ ಜೋಷಿ ಹಾಗೂ ಇನ್ನೂ ಹಲವು ರಾಜ್ಯ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದಾರೆ.

ನಿರೀಕ್ಷಿಸಿ! ಬಿಜೆಪಿಯ ಮೊದಲ ಪಟ್ಟಿಯಲ್ಲಿ ಅಚ್ಚರಿಯ ಹೆಸರುನಿರೀಕ್ಷಿಸಿ! ಬಿಜೆಪಿಯ ಮೊದಲ ಪಟ್ಟಿಯಲ್ಲಿ ಅಚ್ಚರಿಯ ಹೆಸರು

ಶಿವಮೊಗ್ಗ ಸೇರಿದಂತೆ, ಕರಾವಳಿ ಹಾಗೂ ಉತ್ತರ ಕರ್ನಾಟಕದ ಹಲವು ಕ್ಷೇತ್ರಗಳಲ್ಲಿ ಟಿಕೆಟ್ ವಿತರಣೆ ಕಗ್ಗಂಟಾಗಿದ್ದು, ಇಂದು ಟಿಕೆಟ್ ನ ಮೊದಲ ಪಟ್ಟಿ ಅಂತಿಮ ಮಾಡಿಕೊಂಡು ನಾಳೆ ಅಥವಾ ನಾಡಿದ್ದು ಯಡಿಯೂರಪ್ಪ ಅವರು ದೆಹಲಿಗೆ ತೆರಳಿ ಟಿಕೆಟ್ ಪಟ್ಟಿಗೆ ರಾಷ್ಟ್ರ ಬಿಜೆಪಿ ಅಧ್ಯಕ್ಷ ಅಮಿತ್‌ ಶಾರ ಒಪ್ಪಿಗೆ ಪಡೆಯಲಿದ್ದಾರೆ.

ನಾಳೆ ಸಂಜೆ ಅಥವಾ ಸೋಮವಾರದಂದು ಬಿಜೆಪಿಯು ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡುವ ಸಧ್ಯತೆ ಇದೆ.

ಬೋಗಸ್ ಸಮೀಕ್ಷೆ ನಂಬಿ ಟಿಕೆಟ್ ನೀಡಲು ಹಿಂಜರಿಯುತ್ತಿದ್ದಾರೆ: ಹಾಲಪ್ಪ ಬೋಗಸ್ ಸಮೀಕ್ಷೆ ನಂಬಿ ಟಿಕೆಟ್ ನೀಡಲು ಹಿಂಜರಿಯುತ್ತಿದ್ದಾರೆ: ಹಾಲಪ್ಪ

ಇಂದು ಯಲಹಂಕದ ಖಾಸಗಿ ರೆಸಾರ್ಟ್‌ನಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಉತ್ತರ ಕರ್ನಾಟಕ, ಕರಾವಳಿ ಕರ್ನಾಟಕ, ಮಧ್ಯ ಕರ್ನಾಟಕ, ದಕ್ಷಿಣ ಕರ್ನಾಟಕ ಭಾಗಗಳ ಬಿಜೆಪಿ ಮುಖಂಡರು ಭಾಗವಹಿಸಿದ್ದರು.

ಚುನಾವಣೆ 2018 : ಬಿಜೆಪಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಚುನಾವಣೆ 2018 : ಬಿಜೆಪಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ

ಹಲವು ಕ್ಷೇತ್ರಗಳಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಗಳು ಹೆಚ್ಚಾಗಿದ್ದು, ಜೊತೆಗೆ ಪಕ್ಷಾಂತರಿಗಳು ಕೂಡಾ ಟಿಕೆಟ್‌ಗಾಗಿ ಬೇಡಿಕೆ ಇಟ್ಟಿರುವುದು ಬಿಜೆಪಿಗೆ ತಲೆನೋವು ಹೆಚ್ಚಿಸಿದೆ.

English summary
BJP leaders attend meeting in Yelahanka resort to finalize BJP candidates list for assembly elections 2018. Yeddyurappa is the head of the meeting and many party leaders and district presidents were participated in the meeting.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X