ಬಿಜೆಪಿ ಪಾಲಿಗೆ ಕಗ್ಗಂಟಾದ ಎಂಟು ಕ್ಷೇತ್ರಗಳು

ಬೆಂಗಳೂರು, ಫೆ.12 : ಲೋಕಸಭೆ ಚುನಾವಣೆಯ ಟಿಕೆಟ್ ಹಂಚಿಕೆ ಗೊಂದಲ ಕರ್ನಾಟಕ ಬಿಜೆಪಿಯಲ್ಲಿ ಮುಂದುವರೆದಿದ್ದು, ಕಗ್ಗಂಟಾಗಿರುವ ಎಂಟು ಕ್ಷೇತ್ರಗಳ ಟಿಕೆಟ್ ಹಂಚಿಕೆ ಕುರಿತು ಆರ್ ಎಸ್ಎಸ್ ನಾಯಕರ ಸಲಹೆಯನ್ನು ಬಿಜೆಪಿ ನಾಯಕರು ಪಡೆದಿದ್ದಾರೆ.

ಮಂಗಳವಾರ ಬೆಂಗಳೂರು ಹೊರವಲದ ಥಣಿಸಂದ್ರದಲ್ಲಿರುವ ರಾಷ್ಟ್ರೋತ್ಥಾನ ಶಾಲೆಯಲ್ಲಿ ಬಿಜೆಪಿ ನಾಯಕರು ಆರ್ ಎಸ್ಎಸ್ ನಾಯಕರನ್ನು ಭೇಟಿ ಮಾಡಿ ಟಿಕೆಟ್ ಹಂಚಿಕೆ ಕುರಿತು ಚರ್ಚೆ ನಡೆಸಿದ್ದಾರೆ. ಈಗಾಗಲೇ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ತಯಾರಿಸಿದ್ದರು, ಎಂಟು ಕ್ಷೇತ್ರಗಳ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು ಕಗ್ಗಂಟಾಗಿದೆ.

Jagadish Shettar

ತೀವ್ರ ಪೈಪೋಟಿಯ ಬೆಂಗಳೂರು ಉತ್ತರ, ಮೈಸೂರು, ಬಳ್ಳಾರಿ, ಚಿತ್ರದುರ್ಗ, ಕೊಪ್ಪಳ, ಉಡುಪಿ-ಚಿಕ್ಕಮಗಳೂರು ಸೇರಿದಂತೆ ಎಂಟು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು ಬಿಜೆಪಿಗೆ ಸವಾಲಾಗಿದೆ. ಆದ್ದರಿಂದ ಆರ್ ಎಸ್ಎಸ್ ನಾಯಕರ ಸಲಹೆ ಪಡೆಯಲು ಅವರನ್ನು ನಾಯಕರು ಭೇಟಿ ಮಾಡಿದ್ದಾರೆ. [ಆರ್ ಅಶೋಕ್ ಶಕ್ತಿ ಪ್ರದರ್ಶನ]

ಆರ್ ಎಸ್ಎಸ್ ರಾಷ್ಟ್ರೀಯ ಪ್ರಮುಖರಾದ ದತ್ತಾತ್ರೇಯ ಹೊಸಬಾಳೆ, ಮೈ.ಚ.ಜಯದೇವ್, ಮುಂಗೇಶ್ ಬಂಡೆ ಸೇರಿದಂತೆ ಇತರ ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು. ಬಿಜೆಪಿ ಪರವಾಗಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಇತರ ಮುಖಂಡರು ಸಭೆಯಲ್ಲಿ ಪಾಲ್ಗೊಂಡು ಚರ್ಚೆ ನಡೆಸಿದ್ದಾರೆ. [ಬಿಜೆಪಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ]

ಆರ್ ಎಸ್ಎಸ್ ನಾಯಕರ ಸಲಹೆಯನ್ನು ಪಡೆದಿರು ಬಿಜೆಪಿ ನಾಯಕರು ಕಗ್ಗಂಟಾಗಿರುವ ಎಂಟು ಕ್ಷೇತ್ರಗಳಿಗೆ ಅಭ್ಯರ್ಥಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಬಳ್ಳಾರಿಯಲ್ಲಿ ಸದ್ಯ ಜೆ.ಶಾಂತಾ ಸಂಸದರಾಗಿದ್ದು, ಅವರು ಬಿಎಸ್ಆರ್ ಕಾಂಗ್ರೆಸ್ ಜೊತೆ ಗುರುತಿಸಿಕೊಂಡಿದ್ದಾರೆ. ಒಂದು ವೇಳೆ ಬಿಎಸ್ಆರ್-ಬಿಜೆಪಿ ವಿಲೀನಗೊಂಡರೆ ಶಾಂತಾ ಅವರಿಗೆ ಟಿಕೆಟ್ ನೀಡುವ ಸಾಧ್ಯತೆ ಇದೆ.

ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಮಾಜಿ ಸಿಎಂ ಡಿವಿ ಸದಾನಂದ ಗೌಡ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಆದರೆ, ಅವರು ಬೆಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ಗಾಗಿ ಪೈಪೋಟಿ ಆರಂಭಿಸಿದ್ದಾರೆ. ಇದರಿಂದಾಗಿ ಯಾರಿಗೆ ಟಿಕೆಟ್ ದೊರೆಯುತ್ತದೆ ಎಂಬುದು ಕಗ್ಗಂಟಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+