ಬಿಜೆಪಿ ನವಕರ್ನಾಟಕ ಪರಿವರ್ತನಾ ಯಾತ್ರೆಗೆ ಗುದ್ದಲಿ ಪೂಜೆ
ಬೆಂಗಳೂರು, ಅಕ್ಟೋಬರ್ 22: ಬಿಜೆಪಿಯ ನವಕರ್ನಾಟಕ ಪರಿವರ್ತನಾ ಯಾತ್ರೆಯ ಶುಭಾರಂಭಕ್ಕೆ ಇಂದು ಗುದ್ದಲಿಪೂಜೆ ನೆರವೇರಿಸಲಾಯಿತು. ತುಮಕೂರು ರಸ್ತೆಯ ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ಈ ಕಾರ್ಯಕ್ರಮ ನಡೆಯಿತು.
ನವೆಂಬರ್ 2ರಿಂದ ನವಕರ್ನಾಟಕ ಪರಿವರ್ತನಾ ಯಾತ್ರೆ ನಡೆಯಲಿದ್ದು ಯಾತ್ರೆಗೆ ಅಂತರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ಚಾಲನೆ ನೀಡಲಾಗುತ್ತದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಯಾತ್ರೆಗೆ ಚಾಲನೆ ನೀಡಲಿದ್ದಾರೆ.

ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ ರಾವ್, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಆರ್.ಅಶೋಕ್, ಶೋಭಾ ಕರಂದ್ಲಾಜೆ, ಪಿ.ಸಿ.ಮೋಹನ್, ವಿ.ಸೋಮಣ್ಣ ಉಪಸ್ಥಿತರಿದ್ದರು.

ಗುದ್ದಲಿಪೂಜೆ ನಂತರ ಮಾತನಾಡಿದ ಮುರಳೀಧರ್ ರಾವ್, 'ರಾಜ್ಯಾಧ್ಯಕ್ಷ ಯಡಿಯೂರಪ್ಪ ಸೇರಿದಂತೆ ಎಲ್ಲಾ ನಾಯಕರು ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ' ಎಂದು ಹೇಳಿದರು. ಯಾತ್ರೆಯ ಚಾಲನೆ ಕಾರ್ಯಕ್ರಮದಲ್ಲಿ ಮೂರು ಲಕ್ಷಕ್ಕೂ ಹೆಚ್ಚು ಜನ ಭಾಗವಹಿಸುವ ನಿರೀಕ್ಷೆ ಇದೆ.












Click it and Unblock the Notifications