ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಂಗಳೂರಿನಲ್ಲಿ ಕುಕ್ಕರ್ ಬ್ಲ್ಯಾಸ್ಟ್ ಮೂಲಕ ಓಟರ್ ಲಿಸ್ಟ್ ಪ್ರಕರಣ ಡೈವರ್ಟ್: ಡಿಕೆಶಿ ಗಂಭೀರ ಆರೋಪ

|
Google Oneindia Kannada News

ಬೆಂಗಳೂರು, ಡಿಸೆಂಬರ್ 16: ಚಿಲುಮೆ ಸಂಸ್ಥೆ ನಡೆಸಿದ ಮತದಾರರ ಮಾಹಿತಿ ಕಳವು ಆರೋಪವನ್ನು ಡೈವರ್ಟ್ ಮಾಡಲು ಬಿಜೆಪಿ ಸರ್ಕಾರ ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಬ್ಯಾಸ್ಟ್ ಮಾಡಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

ಕುಕ್ಕರ್ ಬ್ಕಾಸ್ಟ್ ಅಂತೆ. ಕುಕ್ಕರ್ ಬ್ಲಾಸ್ಟ್ ಮೂಲಕ ಭ್ರಷ್ಟಾಚಾರ, ಮತದಾರರ ಮಾಹಿತಿ ಕಳ್ಳತನದ ಆರೋಪವನ್ನು ಡೈವರ್ಟ್ ಮಾಡಲು ಹೊರಟಿದ್ದೀರಾ? ಭಯೋತ್ಪಾದಕ‌ ಎಲ್ಲಿಂದ ಬಂದ? ಘಟನೆ ಆದ ಬೆನ್ನಲ್ಲೇ ಡಿಜಿಪಿ ಅವರು ಸ್ಫೋಟದ ಬಗ್ಗೆ ಟ್ವೀಟ್ ಮಾಡುತ್ತಾರೆ. ಬಿಜೆಪಿ ಸರ್ಕಾರ ದಿಕ್ಕು ತಪ್ಪಿಸಲು ಈ ರೀತಿ ಮಾಡುತ್ತಿದ್ದಾರೆ ಎಂದು ಸರ್ಕಾರದ ವಿರುದ್ದ ಗಂಭೀರವಾಗಿ ಆರೋಪಿಸಿದರು. ಮಂಗಳೂರಿನಲ್ಲಿ ನಡೆದ ಬಾಂಬ್ ಸ್ಫೋಟದ ತನಿಖೆ ಮಾಡದೆ‌ ಇದನ್ನು ಭಯೋತ್ಪಾದಕ ದಾಳಿ ಎಂದಿದ್ದಾರೆ. ಅದು ಹೇಗೆ ಸಾಧ್ಯ? ಇಲ್ಲಿ ದಿಲ್ಲಿ, ಮುಂಬೈ, ಜಮ್ಮು ಕಾಶ್ಮೀರ ಹಾಗೂ ಪುಲ್ವಾಮಾ ರೀತಿಯಲ್ಲಿ ದಾಳಿ ಆಗಿಲ್ಲ‌. ಆ ರೀತಿಯ ಉಗ್ರರ ದಾಳಿ ಮಂಗಳೂರಿನಲ್ಲಿ ಮಾಡಿದ್ದಾರಾ? ಎಂದು ಪ್ರಶ್ನಿಸಿದರು. ಮಂಗಳೂರಿನಲ್ಲಿ ರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಶಾರೀಕ್ ಎಂಬಾತ ಈ ಕೃತ್ಯ ಎಸಗಿದ್ದು ಸದ್ಯ ಪೊಲೀಸರ ವಶದಲ್ಲಿದ್ದಾನೆ. ಈತ ಮಂಗಳೂರಿನಲ್ಲಿ ದೊಡ್ಡ ಮಟ್ಟದಲ್ಲಿ ಸ್ಫೋಟ ಮಾಡುವ ಸಂಚು ರೂಪಿಸಿದ್ದ ಎಂದು ಹೇಳಲಾಗಿತ್ತು. ಆದರೆ ಇದೀಗ ಈ ಬಾಂಬ್ ಸ್ಫೋಟ ಬಿಜೆಪಿ ಪ್ರಾಯೋಜಿತ ಎಂದು ಡಿಕೆಶಿ ಗಂಭೀರವಾದ ಆರೋಪ ಮಾಡಿದ್ದಾರೆ.

ಉಗ್ರ ಕೃತ್ಯ ಎಸಗುವವರನ್ನೆಲ್ಲ

ಉಗ್ರ ಕೃತ್ಯ ಎಸಗುವವರನ್ನೆಲ್ಲ " ದೇ ಆರ್ ಮೈ ಬ್ರದರ್ಸ್ " ಎಂದು ಹೇಳಿ‌ಬಿಡಿ: ಸುನೀಲ್ ಕುಮಾರ್

ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಆರೋಪಿಗಳ ಬಗ್ಗೆ ಅನುಕಂಪ ವ್ಯಕ್ತಪಡಿಸುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಾಷ್ಟ್ರೀಯ ಭದ್ರತೆಗೆ ಅಪಾಯಕಾರಿಯಾಗಿ ಪರಿಣಮಿಸಿದ್ದಾರೆ ಎಂದು ಇಂಧನ ಹಾಗೂ ಕನ್ನಡ ಸಂಸ್ಕ್ರತಿ ಸಚಿವ ವಿ ಸುನಿಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅವರು, ಮತರಾಜಕಾರಣಕ್ಕಾಗಿ ಇಂಥ ಹೇಳಿಕೆ ನೀಡಿರುವುದು ಖಂಡನೀಯ. ಈ ರೀತಿ ಸುತ್ತಿ ಬಳಸಿ ಮಾತನಾಡುವ ಬದಲು ಉಗ್ರ ಕೃತ್ಯ ಎಸಗುವವರನ್ನೆಲ್ಲ " ದೇ ಆರ್ ಮೈ ಬ್ರದರ್ಸ್ " ಎಂದು ಹೇಳಿ‌ಬಿಡಿ ಎಂದು ಟೀಕಿಸಿದ್ದಾರೆ. ರಾಜ್ಯದ ಪೊಲೀಸ್ ಮಹಾನಿರ್ದೇಶಕರ ಟ್ವೀಟ್ ಬಗ್ಗೆಯೂ ಶಿವಕುಮಾರ್ ಅನುಮಾನ ವ್ಯಕ್ತಪಡಿಸಿದ್ದಾರೆ. ಎನ್ ಐಎ ತನಿಖೆ ಬಗ್ಗೆ ಗುಮಾನಿಯ ಮಾತನಾಡಿದ್ದಾರೆ. ಹಾಗಾದರೆ ಸ್ಫೋಟ ಪ್ರಕರಣದ ತನಿಖೆಯನ್ನು ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಮೂಲಕ ಮಾಡಿಸಬೇಕೆ ? ಎಂದು ಪ್ರಶ್ನಿಸಿದ್ದಾರೆ.
ಈ ಹಿಂದೆ ಡಿಜೆಹಳ್ಳಿ, ಕೆಜೆಹಳ್ಳಿ ಘಟನೆ ನಡೆದಾಗಲೂ ಶಿವಕುಮಾರ್ ಇದೇ ರೀತಿ ಮಾತನಾಡಿದ್ದರು. ಪೊಲೀಸ್ ಠಾಣೆಗೆ ಬೆಂಕಿ ಇಟ್ಟ ದುಷ್ಕರ್ಮಿಗಳನ್ನು ನನ್ನ ಸೋದರರು ಎಂದು ಕರೆದುಕೊಂಡಿದ್ದರು. ಈಗ‌ ಮಂಗಳೂರು ಬ್ಲಾಸ್ಟ್ ಪ್ರಕರಣದ ಆರೋಪಿಗಳ ಬಗ್ಗೆಯೂ ಸಹಾನುಭೂತಿ ವ್ಯಕ್ತಪಡಿಸುತ್ತಿದ್ದಾರೆ. ಚುನಾವಣೆಯ ಹೊಸ್ತಿಲಲ್ಲಿ ಉಗ್ರರೆಲ್ಲ ನಿಮ್ಮ ಬಂಧುಗಳಾಗುತ್ತಾರೆಯೇ ? ಎಂದು ಪ್ರಶ್ನಿಸಿದ್ದಾರೆ.

ಡಿ.ಕೆ.ಶಿವಕುಮಾರ್ ರಾಜ್ಯದ ಜನರಿಗೆ ಕ್ಷೆಮೆ ಕೇಳಬೇಕು : ಆರ್. ಅಶೋಕ್

ಡಿ.ಕೆ.ಶಿವಕುಮಾರ್ ರಾಜ್ಯದ ಜನರಿಗೆ ಕ್ಷೆಮೆ ಕೇಳಬೇಕು : ಆರ್. ಅಶೋಕ್

ವೋಟರ್ ಐಡಿ ಹಗರಣ ಹೊರಬರುತ್ತಿದ್ದಂತೆ ಕುಕ್ಕರ್ ಬ್ಲಾಸ್ಟ್ ಷಡ್ಯಂತ್ರ ನಡೆಯಿತು ಎಂದು ಆರೋಪಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಕಂದಾಯ ಸಚಿವ ಆರ್.ಅಶೊಕ್ ಕಿಡಿಕಾರಿದರು. ಉಗ್ರರಿಗೆ ಕನಿಕರ ತೋರಿಸುವ ಕೆಲಸವನ್ನ ಕಾಂಗ್ರೆಸ್ ಮಾಡುತ್ತಿದ. ತಮ್ಮ ಹೇಳಿಕೆಯನ್ನ ಡಿಕೆ ಶಿವಕುಮಾರ್ ಹಿಂಪಡೆಯಬೇಕು. ಕ್ಷಮಾಪಣೆ ಕೇಳಬೇಕು ಎಂದು ಆಗ್ರಹಿಸಿದರು. ಕಾಂಗ್ರೆಸ್ ನವರು ಉಗ್ರರನ್ನ ದೇವಲೋಕದವರಂತೆ ನೋಡುತ್ತಾರೆ. ಮುಸ್ಲೀಂ ಟಾರ್ಗೆಟ್ ಆದಾಗ ಕಾಂಗ್ರೆಸ್ ಗೆ ಎಲ್ಲಿಲ್ಲದ ಉರಿ. ಕಸಬ್ ಗೆ ಬಿರ್ಯಾನಿ ತಿನ್ನಿಸಿ ಸಾಕಿಕೊಂಡಿದ್ದರು. ಭಯೋತ್ಪಾದನೆಗೆ ಕುಮ್ಮಕ್ಕು ನೀಡುವೋದನ್ನ ಮೊದಲು ಬಿಡಿ ಎಂದು ಆರ್.ಅಶೋಕ್ ವಾಗ್ದಾಳಿ ನಡೆಸಿದರು.

ನಾಲ್ಕು ಮತಗಳಿಗಾಗಿ ಉಗ್ರನನ್ನೇ‌ ಉಗ್ರನಲ್ಲ ಎನ್ನುವ ಹಂತದಲ್ಲಿ ಕಾಂಗ್ರೆಸ್ ‌ಇದೆ : ಬಿಜೆಪಿ

ನಾಲ್ಕು ಮತಗಳಿಗಾಗಿ ಉಗ್ರನನ್ನೇ‌ ಉಗ್ರನಲ್ಲ ಎನ್ನುವ ಹಂತದಲ್ಲಿ ಕಾಂಗ್ರೆಸ್ ‌ಇದೆ : ಬಿಜೆಪಿ

ಕುಕ್ಕರ್ ಸ್ಫೋಟದ ಭಯೋತ್ಪಾದಕ ಪ್ರಕರಣವನ್ನು "ಭಯೋತ್ಪಾದಕ ಕೃತ್ಯ" ಎಂದು ಡಿಜಿಪಿಯವರು ತನಿಖೆಯ ಆಧಾರದಲ್ಲಿ ಘೋಷಿಸಿದರೆ, ಡಿ.ಕೆ ಶಿವಕುಮಾರ್ ಕೆಂಡಾಮಂಡಲವಾಗಿದ್ದಾರೆ ಎಂದು ಬಿಜೆಪಿ ಕಿಡಿಕಾರಿದೆ. ಇನ್ನೂ ಉಗ್ರನನ್ನು ಉಗ್ರ ಎನ್ನದೇ ಡಿಕೆಶಿಯವರ ಹಾಗೆ "ನಮ್ಮ ಬ್ರದರ್ಸ್" ಎನ್ನಬೇಕಿತ್ತೇನು? ದೇಶದ ಭದ್ರತೆಯ ವಿಚಾರದಲ್ಲಿ ಕಾಂಗ್ರೆಸ್ ಉಗ್ರರ ಪರ ನಿಲ್ಲುತ್ತಿದೆ ಎಂದು ವಾಗ್ದಾಳಿ ನಡೆಸಿದೆ.

ಕುಕ್ಕರ್ ಸ್ಫೋಟದ ಬಳಿಕ ಎನ್ ಐ ಎ ಪ್ರಕರಣವನ್ನು ತೀವ್ರಗತಿಯಲ್ಲಿ ಪರಿಗಣಿಸಿ ಡಿಕೆಶಿ 'ಬ್ರದರ್'‌ನನ್ನು ಬಂಧಿಸಿದ ನಂತರ ಉಗ್ರಗಾಮಿ ಸಂಘಟನೆಗಳು ನೇರವಾಗಿ ಬೆಂಬಲ ಘೋಷಿಸಿದ್ದೂ ಅಲ್ಲದೇ 'ನಮ್ಮ ಹುಡುಗ ಯಶಸ್ವಿಯಾಗಿದ್ದಾನೆ' ಎಂದು ಹೇಳಿಕೆ‌ ನೀಡಿತ್ತು. ಹಾಗಾದರದೂ ಉಗ್ರವಾದವಲ್ಲವೇ? ಎಂದು ಪ್ರಶ್ನಿಸಿದೆ.

ಡಿ.ಕೆ ಶಿವಕುಮಾರ್ ಒಪ್ಪಿಕೊಳ್ಳದಿರುವುದು ಯಾಕಾಗಿ? ಒಂದು ಸಮುದಾಯದಿಂದ ಸಿಗೋ ನಾಲ್ಕು ಮತಗಳಿಗಾಗಿ ಉಗ್ರನನ್ನೇ‌ ಉಗ್ರನಲ್ಲ ಎನ್ನುವ ಹಂತದಲ್ಲಿ ಕಾಂಗ್ರೆಸ್ ‌ಇದೆ ಎಂದರೆ,‌ ಇವರಿಗೆ ಅಧಿಕಾರ ಕೊಟ್ಟರೆ ಉಗ್ರರ ಟೆಕ್ ಪಾರ್ಕ್‌ನ್ನೇ ನಿರ್ಮಿಸಿದರೂ ಅಚ್ಚರಿಯಿಲ್ಲ.ಕಾಂಗ್ರೆಸ್ ಇಷ್ಟು ವರ್ಷ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಮಾಡಿದ್ದೆಲ್ಲವೂ ಇಂಥದ್ದೇ. ನಿಜವಾದ ಉಗ್ರರನ್ನು ಬಚ್ಚಿಟ್ಟು, ಹಿಂದೂಗಳ ಮೇಲೆಯೇ ಉಗ್ರರು ಎಂದು ಸುಳ್ಳು ಕೇಸ್ ಹಾಕುತ್ತಾ ಕುಳಿತಿದ್ದಕ್ಕೇ ಅಲ್ಲವೇ ಮುಂಬೈ ತಾಜ್ ಮೇಲೆ‌ ಉಗ್ರರ ದಾಳಿಯಾಗಿದ್ದು? ಕಾಶ್ಮೀರ ಕಣಿವೆಯಲ್ಲಿ ಉಗ್ರರ ಅಟ್ಟಹಾಸವಿದ್ದಿದ್ದು? ಎಂದು ಟ್ವೀಟ್ ಮಾಡಿದೆ.

ಕಾಂಗ್ರೆಸ್ ಗೆ ರಾಜ್ಯದ ಜನತೆಯೇ ತಕ್ಕ ಉತ್ತರ ಕೊಡಲಿದ್ದಾರೆ: ಶ್ರೀರಾಮುಲು

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರೇ ಶೇ 10 ರಷ್ಟು ಮತ ಪಡೆಯಲು ಭಯೋತ್ಪಾದಕ ಚಟುವಟಿಕೆ ನಡೆಸುವ ದೇಶದ್ರೋಹಿಗಳಿಗೆ ಅನುಕಂಪ ತೋರಿದರೆ ಶೇ 90 ರಷ್ಟು ಮತಗಳನ್ನು ಕಳೆದುಕೊಳ್ಳಬೇಕಾಗುತ್ತದೆ ಎಂಬುದನ್ನ ಮರೆಯಬೇಡಿ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ

ಮಂಗಳೂರು ಕುಕ್ಕರ್ ಬಾಂಬ್ ಬ್ಲ್ಯಾಸ್ಟ್ ಪ್ರಕರಣದ ಆರೋಪಿಯಾದ ಶಾರೀಕ್ ಈ ಹಿಂದೆ ಹಲವಾರ ದೇಶ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ, ನಿಮ್ಮ ಪಾಲಿಗೆ ಅವನೊಬ್ಬ ದೇಶ ಪ್ರೇಮಿ ಆಗಿದ್ದರೆ ಆಶ್ಚರ್ಯ ಪಡುವಂತಹದ್ದು ಏನಿಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಇನ್ನೂ ಇಂತಹ ದೇಶದ್ರೋಹಿಗಳನ್ನು ಓಲೈಕೆ ಮಾಡಿದ ಪರಿಣಾಮದಿಂದಲೇ ಕಾಂಗ್ರೆಸ್ ಇಂದು ಅಸ್ಥಿತ್ವ ಕಳೆದುಕೊಳ್ಳುವ ಹಂತಕ್ಕೆ ಬಂದಿದೆ. ಈಗಲಾದರೂ ಎಚ್ಚೆತ್ತುಕೊಳ್ಳದಿದ್ದರೆ, ಕರ್ನಾಟಕದ ಜನತೆಯೇ ತಕ್ಕ ಉತ್ತರ ಕೊಡಲಿದ್ದಾರೆ ಎಂದಿದ್ದಾರೆ.

English summary
d k shivakumar said BJP govt diverted voter list scam through cooker blast in Mangalore,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X