ಪಿಎಸ್ಐ ಪರೀಕ್ಷೆಯನ್ನು ಮುಂದೂಡಿ: ಪರಮೇಶ್ವರ್‌ಗೆ ಮನವಿ ಸಲ್ಲಿಸಿದ ಬಿಜೆಪಿ ನಿಯೋಗ
ಬೆಂಗಳೂರು, ಸೆಪ್ಟೆಂಬರ್ 10: ಪಿಎಸ್‍ಐ ಪರೀಕ್ಷೆಯನ್ನು ಮುಂದೂಡಲು ಒತ್ತಾಯಿಸಿದ್ದು, ಪರೀಕ್ಷಾರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಕ್ರಮ ವಹಿಸುವ ಪ್ರಯತ್ನ ಮಾಡುವುದಾಗಿ ಗೃಹ ಸಚಿವರು ತಿಳಿಸಿದ್ದಾಗಿ ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ್ ಅವರು ತಿಳಿಸಿದರು.
ಬಿಜೆಪಿ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ಶಾಸಕ ಧೀರಜ್ ಮುನಿರಾಜು ಹಾಗೂ ಪರೀಕ್ಷಾರ್ಥಿಗಳು ಇಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಬೆಂಗಳೂರಿನ ಸದಾಶಿವನಗರದ ಸರಕಾರಿ ನಿವಾಸಕ್ಕೆ ಭೇಟಿ ನೀಡಿ ಪಿಎಸ್‍ಐ ಪರೀಕ್ಷೆಯನ್ನು ಮುಂದೂಡಬೇಕೆಂದು ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, ಪರೀಕ್ಷೆ ಮುಂದೂಡುವ ವಿಶ್ವಾಸವಿದೆ ಎಂದ ಅವರು, 402 ಹುದ್ದೆ ಪೈಕಿ 102 ಜನರು ಹಾಲ್ ಟಿಕೆಟ್ ಹೊಂದಿದವರು ಯುಪಿಎಸ್ಸಿ ಮೈನ್ಸ್ ಗೆ ಆಯ್ಕೆಯಾಗಿದ್ದಾರೆ. ಈ ಸಂಖ್ಯೆ ಇನ್ನೂ ಹೆಚ್ಚಾಗಿರುವ ಸಾಧ್ಯತೆ ಇದೆ. ಯುಪಿಎಸ್ಸಿ ಮೈನ್ಸ್ ಗೆ ಆಯ್ಕೆಯಾದವರು ಪಿಎಸ್‍ಐ ಪರೀಕ್ಷೆಯಲ್ಲಿ 100ಕ್ಕೆ ನೂರು ಆಯ್ಕೆ ಆಗಿಯೇ ಆಗುತ್ತಾರೆ. ಅವರಿಗೆ ಅನ್ಯಾಯ ಆಗಬಾರದು ಎಂದು ತಿಳಿಸಿದರು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ನಿರ್ಲಕ್ಷ್ಯದಿಂದ, ಬೇಜವಾಬ್ದಾರಿಯಿಂದ ಒಂದೇ ದಿನಾಂಕವನ್ನು ನಿಗದಿ ಮಾಡಿದ್ದಾರೆ. ಇದನ್ನು ತಕ್ಷಣ ಸರಿಪಡಿಸಲು ಗೃಹ ಸಚಿವರಲ್ಲಿ ಕೋರಿದ್ದೇವೆ. ನ್ಯಾಯಬದ್ಧ ಕೋರಿಕೆಯನ್ನು ಗೃಹ ಸಚಿವರು ಈಡೇರಿಸುವ ವಿಶ್ವಾಸವನ್ನು ಹೊಂದಿರುವುದಾಗಿ ಪ್ರಶ್ನೆಗೆ ಉತ್ತರಿಸಿದರು.
ಇ.ಡಿ.ಯವರು ವಾಲ್ಮೀಕಿ ನಿಗಮದ ಹಗರಣದಲ್ಲಿ ನಾಗೇಂದ್ರ ಅವರೇ ಸೂತ್ರಧಾರಿ ಎಂದು ದೋಷಾರೋಪ ಪಟ್ಟಿ ಸಲ್ಲಿಸಿದ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಚಂದ್ರಶೇಖರ್ ಅವರು ತಮ್ಮ ಡೆತ್ ನೋಟಿನಲ್ಲಿ ಈ ಕುರಿತು ಸ್ಪಷ್ಟವಾಗಿ ತಿಳಿಸಿದ್ದರು. ಅಂದಿನ ಸಚಿವ ನಾಗೇಂದ್ರರ ಮಾರ್ಗದರ್ಶನ ಮತ್ತು ನಿರ್ಣಯದ ಪ್ರಕಾರ ಹಣ ವರ್ಗಾವಣೆ ನಡೆದಿರುವುದು, ಬೇರೆ ಬೇರೆ ಖಾತೆಗೆ ವರ್ಗಾಯಿಸಿದ್ದು ಮತ್ತು ತೆಲಂಗಾಣ, ಬಳ್ಳಾರಿ ಲೋಕಸಭಾ ಚುನಾವಣೆಗೆ ಬಳಸಿದ್ದು ಸ್ಪಷ್ಟವಾಗಿ ಗೊತ್ತಾಗಿದೆ. ಅವರ ಜೊತೆ ಸಹಚರರೂ ಭಾಗಿಯಾಗಿದ್ದಾರೆ ಎಂದು ತಿಳಿಸಿದರು.
ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೊಣೆ ಹೊರಬೇಕೆಂಬ ವಿಚಾರದಲ್ಲಿ ಅನುಮಾನವೇ ಇಲ್ಲ. ಖಜಾನೆಯಿಂದ ನೇರವಾಗಿ ಹಣ ವರ್ಗಾವಣೆ ಆಗಿದೆ. ಹಣಕಾಸು ಇಲಾಖೆ ಸಹಕಾರ ಇಲ್ಲದೇ ಇದು ಆಗಿಲ್ಲ ಎಂದು ತಿಳಿಸಿದರು.
ಬಿಜೆಪಿ ಕಚೇರಿಯನ್ನು ಭಯೋತ್ಪಾದಕರು ಟಾರ್ಗೆಟ್ ಮಾಡಿದ್ದ ಬಗೆಗಿನ ಪ್ರಶ್ನೆಗೆ ಉತ್ತರ ಕೊಟ್ಟ ಅವರು, ಕಾಂಗ್ರೆಸ್ ಸರಕಾರ ಭಯೋತ್ಪಾದಕರನ್ನು ಸದೆಬಡಿಯಬೇಕು. ಇವರ ಕುರಿತು ಮೃದು ಧೋರಣೆ ತೋರಿಸಬಾರದು; ತುಷ್ಟೀಕರಣ ಮಾಡದಿರಿ ಎಂದು ಒತ್ತಾಯಿಸಿದರು.
ಬಿಜೆಪಿ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ಶಾಸಕ ಧೀರಜ್ ಮುನಿರಾಜು ಅವರು ಮಾತನಾಡಿ, ಪಿಎಸ್‍ಐ ಪರೀಕ್ಷೆಯನ್ನು ಒಂದು ವಾರ ಮುಂದೂಡುವಂತೆ ಕೋರಲಾಗಿದೆ. ಕೆಇಎ ವತಿಯಿಂದ ಪಿಎಸ್‍ಐ ಪರೀಕ್ಷೆ ನಡೆಸಲಿದ್ದಾರೆ. ಪರೀಕ್ಷಾ ಹಾಲ್ ಟಿಕೆಟ್ ದಾಖಲೆ ನೀಡಿದ್ದೇವೆ. ಯುಪಿಎಸ್ಸಿ ಮೇನ್ಸ್ ಪರೀಕ್ಷೆ ಬರೆಯುವವರು, ಪಿಎಸ್‍ಐ ಪರೀಕ್ಷೆ ಪಾಸ್ ಆಗುತ್ತಾರೆ. ಅವರಿಗೆ ಅನಾನುಕೂಲ ಆಗಬಾರದು ಎಂದು ಹೇಳಿದ್ದಾರೆ.
ಬಿಜೆಪಿ ಇವರ ಹೋರಾಟಕ್ಕೆ ಬೆಂಬಲ ನೀಡಲಿದೆ. ಬಿಜೆಪಿ ಯುವಮೋರ್ಚಾ ತಂಡ ಗೃಹಸಚಿವರಿಗೆ ಮನವಿ ಮಾಡಿದೆ ಎಂದಿರುವ ಅವರು, ನಮ್ಮ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಬರಬೇಕಿತ್ತು. ಆದರೆ, ಅವರು ದೆಹಲಿಗೆ ತೆರಳಿದ ಹಿನ್ನೆಲೆಯಿಂದ ನಾವು ಬಂದಿದ್ದೇವೆ ಎಂದು ವಿವರಿಸಿದ್ದಾರೆ. ಒಂದು ವಾರ ಮುಂದೆ ಹಾಕಿ ಅಂತ ಅಭ್ಯರ್ಥಿಗಳು ಕೇಳಿದ್ದಾರೆ. ಕೆಇಎ ದಿನಾಂಕ ನಿಗದಿ ಮಾಡಿರುವುದು ಸರಿಯಲ್ಲ. ಸಮಸ್ಯೆ ಸರಿಪಡಿಸುವಂತೆ ಮನವಿ ಮಾಡಿದ್ದೇವೆ ಎಂದು ಹೇಳಿದ್ದಾರೆ.
-
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್












Click it and Unblock the Notifications