ಮೋದಿ ಭೇಟಿಗೆ ಸಿಗದ ಅವಕಾಶ; ಬ್ಯಾರಿಕೇಡ್ ಆಚೆ ನಿಂತು ಕೈಬೀಸಿದ ಬಿಜೆಪಿ ನಾಯಕರ ಫೋಟೋ ವೈರಲ್!
ಬೆಂಗಳೂರು, ಆಗಸ್ಟ್ 26: ಚಂದ್ರಯಾನ 3 ಯಶಸ್ಸಿನ ಹಿನ್ನೆಲೆಯಲ್ಲಿ ಇಸ್ರೋ ವಿಜ್ಞಾನಿಗಳ ಅಭಿನಂದಿಸಲು ಪ್ರಧಾನಿ ಮೋದಿ ಶನಿವಾರ ಭೇಟಿ ನೀಡಿದ್ದು, ಈ ವೇಳೆ ಮೋದಿ ಭೇಟಿಗೆ ಅವಕಾಶ ಸಿಗದೇ ಹಿನ್ನೆಲೆಯಲ್ಲಿ ಬ್ಯಾರಿಕೇಡ್ ಹೊರಗಡೆ ಸಾರ್ವಜನಿಕರಂತೆ ನಿಂತು ಬಿಜೆಪಿ ನಾಯಕರು ಮೋದಿಗೆ ಕೈಬೀಸಿದ ಫೋಟೋವೊಂದು ವೈರಲ್ ಆಗುತ್ತಿದೆ.
ಆ ಫೋಟೋದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಚಿವರಾದ ಮುನಿರತ್ನ, ಕೆ. ಗೋಪಾಲಯ್ಯ , ಆರ್ ಅಶೋಕ್ ಕಾಣಿಸಿಕೊಂಡಿದ್ದಾರೆ. ನಾಲ್ವರು ಮುಖಂಡರು ಬ್ಯಾರಿಕೇಡ್ ಆಚೆ ನಿಂತು ಪ್ರಧಾನಿ ಮೋದಿಗೆ ಕೈ ಬೀಸಿದ್ದಾರೆ. ಅದರಲ್ಲೂ ಮುನಿರತ್ನ ಬ್ಯಾರಿಕೇಡ್ ಮೇಲೆ ಹೆಜ್ಜೆ ಇಟ್ಟು ಪ್ರಧಾನಿಗೆ ಕೈ ಬೀಸಿದ್ದಾರೆ. ಈ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಹಂಚಿಕೊಂಡಿದ್ದಾರೆ.

ಇನ್ನೂ ಈ ಕುರಿತು ಸಚಿವ ದಿನೇಶ್ ಗುಂಡೂವಾರ್ ಟ್ವೀಟ್ ಮಾಡಿದ್ದು, ISRO ವಿಜ್ಞಾನಿಗಳನ್ನು ಅಭಿನಂದಿಸಲು ಆಗಮಿಸಿದ್ದ ಮೋದಿಯವರನ್ನು ಸ್ವಾಗತಿಸಲು ಸ್ವತಃ ರಾಜ್ಯ BJP ನಾಯಕರಿಗೂ ಅವಕಾಶ ಕೊಟ್ಟಿಲ್ಲ. ರಾಜ್ಯಾಧ್ಯಕ್ಷ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬೊಮ್ಮಾಯಿಯವರನ್ನು ಕೂಡ ಹತ್ತಿರಕ್ಕೆ ಬಿಟ್ಟು ಕೊಳ್ಳಲಿಲ್ಲ. ರಾಜ್ಯ BJP ನಾಯಕರಿಗೆ ಇದಕ್ಕಿಂತ ಅಪಮಾನವುಂಟೆ?
BJP ನಾಯಕರಿಗೆ ಕಿಂಚಿತ್ತಾದರೂ ಆತ್ಮಗೌರವ ಬೇಡವೆ? ಎಂದು ಹೇಳಿದರು.
3
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) August 26, 2023
ಮೋದಿಯವರ ಸರ್ವಾಧಿಕಾರಿ ಮನಃಸ್ಥಿತಿಯ ಬಗ್ಗೆ ಸತ್ಯ ಹೇಳಿದಾಗಲೆಲ್ಲಾ @BJP4Karnataka ಯವರು ಎಗರೆಗರಿ ಬೀಳುತ್ತಿದ್ದರು.
ಬಹುಶಃ ರಾಜ್ಯ BJP ನಾಯಕರಿಗೆ ಇಂದು ಮೋದಿಯವರ ಸರ್ವಾಧಿಕಾರಿ ಮನೋಭಾವದ ಸತ್ಯದರ್ಶನವಾಗಿರಬಹುದು.
BJP ನಾಯಕರೆ, ಇನ್ನೆಷ್ಟು ದಿನ ಆತ್ಮಗೌರವ, ಸ್ವಾಭಿಮಾನ ಕಳೆದುಕೊಂಡು ಇರುತ್ತೀರಿ?
ಆತ್ಮವಿಮರ್ಶೆ ಮಾಡಿಕೊಳ್ಳಿ
ರಾಜ್ಯ ಬಿಜೆಪಿ ನಾಯಕರನ್ನು ಅವರ ಪಕ್ಷದ ವರಿಷ್ಟರು ಕಾಲಕಸಕ್ಕಿಂತ ಕಡೆಯಾಗಿ ನೋಡುತ್ತಾರೆ ಎಂಬುದಕ್ಕೆ ಮೋದಿಯವರ ಇಂದಿನ ವರ್ತನೆಯೇ ಸಾಕ್ಷಿ.ಬಿಜೆಪಿ ನಾಯಕರು ಇಂದು ಮೋದಿಯವರ ಮುಂದೆ ಹಲ್ಲುಗಿಂಜಿ ಜೀ ಹುಜೂರು ಎಂದು ಮಂಡಿಯೂರಿ ನಿಂತರೂ, ಮೋದಿಯವರು ಕಣ್ಣೆತ್ತಿಯೂ ನೋಡಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.
ಮೋದಿಯವರ ಸರ್ವಾಧಿಕಾರಿ ಮನಃಸ್ಥಿತಿಯ ಬಗ್ಗೆ ಸತ್ಯ ಹೇಳಿದಾಗಲೆಲ್ಲಾ ಬಿಜೆಪಿ ಯವರು ಎಗರೆಗರಿ ಬೀಳುತ್ತಿದ್ದರು. ಬಹುಶಃ ರಾಜ್ಯ BJP ನಾಯಕರಿಗೆ ಇಂದು ಮೋದಿಯವರ ಸರ್ವಾಧಿಕಾರಿ ಮನೋಭಾವದ ಸತ್ಯದರ್ಶನವಾಗಿರಬಹುದು. ಬಿಜೆಪಿ ನಾಯಕರೆ, ಇನ್ನೆಷ್ಟು ದಿನ ಆತ್ಮಗೌರವ, ಸ್ವಾಭಿಮಾನ ಕಳೆದುಕೊಂಡು ಇರುತ್ತೀರಿ? ಆತ್ಮವಿಮರ್ಶೆ ಮಾಡಿಕೊಳ್ಳಿ ಎಂದು ಕಿಡಿಕಾರಿದರು.
ಇನ್ನೂ ಈ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿದ್ದು, ರಾಜಕೀಯವಾಗಿ, ಸೈದ್ದಂತಿಕವಾಗಿ ವಿರೋಧಿಗಳಾಗಿದ್ದರೂ ಬಿಜೆಪಿ ನಾಯಕರ ದುರಾವಸ್ಥೆ ನೋಡಿ ಕರುಣೆ ಹುಟ್ಟುತ್ತಿದೆ! ಪ್ರಧಾನಿ ಮುಂದೆ ಬ್ಯಾರಿಕೆಡ್ ಬಂಧಿಗಳಾಗಿ ಗಮನ ಸೆಳೆಯಲು ಹರಸಾಹಸ ಮಾಡುತ್ತಿರುವ ಬಿಜೆಪಿ ನಾಯಕರು ಸ್ವಾಭಿಮಾನ, ಆತ್ಮಗೌರವವನ್ನು ಬೀದಿಪಾಲು ಮಾಡಿಕೊಂಡಿದ್ದು ಕರುಣಾಜನಕವಾಗಿದೆ ಎಂದು ಹೇಳಿದರು.
ಹೈಕಮಾಂಡ್‌ನಿಂದ ಇಷ್ಟೊಂದು ತಿರಸ್ಕಾರಕ್ಕೆ ಒಳಪಟ್ಟಿರುವಾಗ "ವಿರೋಧ ಪಕ್ಷದ ನಾಯಕ"ನ ಆಯ್ಕೆ ಸಾಧ್ಯವಾಗುವುದೇ? "ಈಗ ಸ್ವತಃ ಬಿಜೆಪಿಗರೂ ಸರ್ವಾಧಿಕಾರದ ಸಂತ್ರಸ್ತರಾಗಿದ್ದಾರೆ. ಬೀದಿಯಲ್ಲಿ ನಿಂತ ಬಿಜೆಪಿ ನಾಯಕರು ತಮ್ಮನ್ನು ತಾವೇ ಅವಮಾನಿಸಿಕೊಂಡಿದ್ದಲ್ಲ, ಇದು ಮತ ನೀಡಿದ ಮತದಾರರಿಗೆ ಅವಮಾನ, ಕನ್ನಡಿಗರಿಗೆ ಅವಮಾನ, ಕಾರ್ಯಕರ್ತರಿಗೆ ಅವಮಾನ ಎಂದು ಕಿಡಿಕಾರಿದರು.












Click it and Unblock the Notifications