ಬಜರಂಗದಳ ಬ್ಯಾನ್ ಗೆ ಭರವಸೆ ಕೊಟ್ಟ ಕೈ ವಿರುದ್ಧ ಕಿಡಿ! ಬಿಜೆಪಿ ನಾಯಕರಿಂದ 'ನಾನೂ ಬಜರಂಗಿ' ಅಭಿಯಾನ
ಬೆಂಗಳೂರು,ಮೇ3: ರಾಜ್ಯ ವಿಧಾನಸಭಾ ಚುನಾವಣಾ ರಣಕಣ ರಂಗೇರಿದೆ. ಚುನಾವಣೆಯಲ್ಲಿ ಗೆಲುವು ಸಾಧಿಸಲು ಹಲವು ತಂತ್ರ ಪ್ರತಿತಂತ್ರಗಳನ್ನ ನಡೆಸುತ್ತಿದ್ದು, ಕಾಂಗ್ರೆಸ್ ಮಂಗಳವಾರ ಬಿಡುಗಡೆ ಮಾಡಿದ ಪ್ರಣಾಳಿಕೆಯಿಂದಾಗಿ ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಕಿಡಿ ಹೊತ್ತಿದಂತಾಗಿದೆ.
ಹೌದು, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಅವರು ಮಂಗಳವಾರ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯನ್ನ ಬಿಡುಗಡೆ ಮಾಡಿದ್ದ, ಪ್ರಣಾಳಿಕೆಯಲ್ಲಿ ಬಜರಂಗದಳ ಹಾಗೂ ಪಿ ಎಫ್ ಐ ಬ್ಯಾನ್ ಮಾಡುವುದಾಗಿ ಭರವಸೆಯನ್ನ ನೀಡಿದ್ದು, ಬಿಜೆಪಿ ಹಾಗೂ ಹಿಂದೂ ನಾಯಕರು ಕಾಂಗ್ರೆಸ್ ವಿರುದ್ದ ಕಿಡಿಕಾರಿದ್ದಾರೆ.

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ಸೇರಿದಂತೆ ಭಯೋತ್ವಾದನಾ ಚಟುವಟಿಕೆಗಳಿಗೆ ಬೆಂಬಲ ನೀಡುವ ಎಲ್ಲಾ ಸಂಘಟನೆಗಳನ್ನು ನಿಷೇಧಿಸಲಾಗುವುದು ಎಂದು ತಿಳಿಸಿದ್ದು, ಬಿಜೆಪಿ ನಾಯಕರು ಹಾಗೂ ಹಿಂದೂ ಕಾರ್ಯಕರ್ತರು ಆಕ್ರೋಶಕ್ಕೆ ಕಾರಣವಾಗಿದೆ.
ಇನ್ನೂ ಕಾಂಗ್ರೆಸ್ ಬಜರಂಗದಳ ಬ್ಯಾನ್ ಕುರಿತು ಭರವಸೆಕೊಟ್ಟಿದ್ದು, ಸಾಮಾಜಿಕ ಜಾಲತಾಣದಲ್ಲಿ ನಾನು ಬಜರಂಗಿ ಎಂದು ಟ್ರೆಂಡ್ ಮಾಡುವ ಮೂಲಕ ಕಾಂಗ್ರೆಸ್ ಪಕ್ಷದ ವಿರುದ್ಧ ಅಭಿಯಾನ ಮಾಡುತ್ತಿದ್ದಾರೆ. ಇತ್ತ ತಕಾತ್ ಇದರೆ ಬಜರಂಗ ದಳ ನಿಷೇಧ ಮಾಡಲಿ ಎಂದು ಬಿಜೆಪಿ ನಾಯಕರು ಕಾಂಗ್ರೆಸ್ ನಾಯಕರ ವಿರುದ್ದ ಸವಾಲು ಹಾಕಿದ್ದಾರೆ.
ಇತ್ತ ಕಾಂಗ್ರೆಸ್ ಬಜರಂಗದಳ ಬ್ಯಾನ್ ಕುರಿತು ಈಗಾಗಲೇ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆರ್ಎಸ್ ಮುಖಂಡ ಸಂತೋಷ್ ಬಿಎಲ್ ಹಾಗೂ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸೇರಿದಂತೆ ಹಲವು ಬಿಜೆಪಿ ಮುಖಂಡರು ಹಾಗೂ ಹಿಂದೂ ಕಾರ್ಯಕರ್ತರು ಕಾಂಗ್ರೆಸ್ ವಿರುದ್ಧ ಕೆಂಡಮಂಡಲರಾಗಿದ್ದಾರೆ.

ಕಾಂಗ್ರೆಸ್ ಬಜರಂಗದಳ ಬ್ಯಾನ್ ವಿರೋಧಿಸಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್, ಮೈಸೂರು ಸಂಸದ ಪ್ರತಾಪ್ ಸಿಂಹ, ಬೆಂಗಳೂರು ದಕ್ಷಿಣ ಸಂಸದ ಹಾಗೂ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಸೇರಿದಂತೆ ಅನೇಕರು ನಾನೊಬ್ಬ ಬಜರಂಗಿ ಎಂಬ ಅಭಿಯಾನ ಆರಂಭಿಸಿದ್ದಾರೆ. ಇವರೆಲ್ಲರೂ ಸಾಮಾಜಿಕ ಜಾಲತಾಣದಲ್ಲಿ " ನಾನೊಬ್ಬ ಕನ್ನಡಿಗ, ನನ್ನ ನಾಡು ಹನುಮ ಜನಿಸಿದ ನಾಡು, ನಾನು ಬಜರಂಗಿ ಎಂದು ಬರೆದುಕೊಂಡಿದ್ದಾರೆ. ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ನಾನೊಬ್ಬ ಬಜರಂಗಿ ಎಂಬ ಪೋಸ್ಟರ್ ಗಳು ವೈರಲ್ ಆಗುತ್ತಿದೆ.
ಇನ್ನೂ ಬಿಜೆಪಿ ನಾಯಕರಾದ ಪ್ರತಾಪ್ ಸಿಂಹ, ತೇಜಸ್ವಿ ಸೂರ್ಯ, ಕೆಜಿ ಬೋಪಯ್ಯ ಸೇರಿದಂತೆ ಹಲವಾರು ನಾಯಕರು ತಮ್ಮ ಫೇಸ್ಬುಕ್ ಪ್ರೊಫೈಲ್ ಫೋಟೋ ದಲ್ಲಿ ನಾನೊಬ್ಬ ಬಜರಂಗಿ ಆಗಿ ಮಾಡಿಕೊಂಡಿದ್ದಾರೆ. ಇತ್ತ ಬಜರಂಗದಳ ಕಾರ್ಯಕರ್ತರು ಕೂಡ ನಾನೊಬ್ಬ ಬಜರಂಗಿ ಎಂಬ ಪೋಸ್ಟ್ ಗಳನ್ನು ಶೇರ್ ಮಾಡುವ ಮೂಲಕ ಕಾಂಗ್ರೆಸ್ ಭರವಸೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ಬ್ಯಾನ್ ಬಗ್ಗೆ ಹೇಳಿದ್ದೇನು?
ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ಸಮಾಜದಲ್ಲಿ ದ್ವೇಷವನ್ನು ಚಿತ್ತಿ ವಿಭಜನೆಗೆ ಕಾರಣವಾಗುವ, ವ್ಯಕ್ತಿಗಳು ಮತ್ತು ಸಂಘಟನೆಗಳ ವಿರುದ್ಧ ಕಠಿಣ ಮತ್ತು ನಿರ್ಣಾಯಕ ಕಾನೂನು ಕ್ರಮವನ್ನು ತೆಗೆದುಕೊಳ್ಳಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ. ಸಂವಿಧಾನವೇ ಪವಿತ್ರ ಎಂದು ನಂಬಿರುವ ನಾವು ಯಾವುದೇ ವ್ಯಕ್ತಿಗಳಾಗ ಭಜರಂಗದಳ ಮತ್ತು ಪಿ.ಎಫ್.ಐಗಳು ಸೇರಿದಂತೆ ಬಹುಸಂಖ್ಯಾತ ಅಥವಾ ಅಲ್ಪಸಂಖ್ಯಾತ ಇತರರಾಗ ಸಂವಿಧಾನದ ವಿಧಿಗಳನ್ನು ಉಲ್ಲಂಘಿಸುವುದನ್ನು ಸಹಿಸುವುದಿಲ್ಲ ಆದ ಕಾರಣ ಇಂತಹ ವ್ಯಕ್ತಿಗಳು ಮತ್ತು ಸಂಘಟನೆಗಳ ನಿಷೇಧವೂ ಸೇರಿದಂತೆ ಬಲವಾದ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು.












Click it and Unblock the Notifications