ಬಿಎಸ್‌ವೈ ಫೋನ್ ರಿಸೀವ್ ಮಾಡದ ಸೋಮಣ್ಣ, ಯತ್ನಾಳ್‌ಗಿದೆಯಂತೆ ಸಿದ್ದು ಬೆಂಬಲ- ಬಿಜೆಪಿಯನ್ನು ಸುಡುತ್ತಲೇ ಇದೆ ಗುಪ್ತ ಬೆಂಕಿ
ಬೆಂಗಳೂರು, ನವೆಂಬರ್ 25: ಮೇ ತಿಂಗಳಲ್ಲಿ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯು ಬಿಜೆಪಿಗೆ ಬಹುದೊಡ್ಡ ಆಘಾತವನ್ನೇ ನೀಡಿದೆ. ಚುನಾವಣೆ ಮುಗಿದು ಏಳು ತಿಂಗಳು ಕಳೆದರೂ ರಾಜ್ಯ ಬಿಜೆಪಿಯ ಆಂತರಿಕ ಕಲಹ ಮುಗಿಯುವ ಲಕ್ಷಣಗಳು ಕಂಡುಬರುತ್ತಿಲ್ಲ. ಕರ್ನಾಟಕದ ರಾಜ್ಯ ಘಟಕಕ್ಕೆ ಬಿಎಸ್ ವಿಜಯೇಂದ್ರ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿದ ನಂತರ ಹಲವು ನಾಯಕರು ಅಸಮಧಾನದ ಬೆಂಕಿಯನ್ನೇ ಉಗುಳುತ್ತಿದ್ದಾರೆ.
ಲಿಂಗಾಯತ ನಾಯಕರಾದ ಮಾಜಿ ಸಚಿವ ವಿ ಸೋಮಣ್ಣ, ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹಾಗೂ ಮಾಜಿ ಶಾಸಕ ಸಿಟಿ ರವಿ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸೋಮಣ್ಣ ಹಾಗೂ ಸಿಟಿ ರವಿ ಅವರು ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕಾಗಿ ಪೈಪೋಟಿ ನಡೆಸಿದ್ದರು. ಯತ್ನಾಳ್ ಅವರು ವಿರೋಧ ಪಕ್ಷದ ನಾಯಕನ ಸ್ಥಾನಕ್ಕಾಗಿ ಬೇಡಿಕೆ ಇಟ್ಟಿದ್ದರು. ಇವರೆಲ್ಲರ ಆಕಾಂಕ್ಷೆಗಳು ಈಡೇರದ ಕಾರಣ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ ಎನ್ನಲಾಗುತ್ತಿದೆ.

ಬಿಎಸ್‌ವೈ ಫೋನ್ ರಿಸೀವ್ ಮಾಡದ ಸೋಮಣ್ಣ
ವಿಧಾನಸಭೆ ಚುನಾವಣೆಯಲ್ಲಿ ವಿ ಸೋಮಣ್ಣನವರನ್ನು ಚಾಮರಾಜನಗರ ಹಾಗೂ ವರುಣಾ ಕ್ಷೇತ್ರದಿಂದ ಕಣಕ್ಕಿಳಿಸಲಾಗಿತ್ತು. ಅವರು ಪ್ರತಿನಿಧಿಸುತ್ತಿದ್ದ ಗೋವಿಂದರಾಜನಗರ ಕ್ಷೇತ್ರದ ಟಿಕೆಟ್ ಅನ್ನು ಸೋಮಣ್ಣನವರಿಗೆ ನೀಡಿರಲಿಲ್ಲ. ಹಿರಿಯ ಲಿಂಗಾಯತ ನಾಯಕನನ್ನು ಹರಕೆಯ ಕುರಿಯನ್ನಾಗಿ ಮಾಡಲಾಗಿತ್ತು ಎಂಬ ಮಾತುಗಳು ಕೇಳಿಬಂದಿದ್ದವು. ಈ ವಿಚಾರವನ್ನು ಸೋಮಣ್ಣನವರೇ ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೇಳಿದ್ದರಿಂದ ನಾನು ಒಪ್ಪಿಕೊಂಡೆ ಎಂಬುದಾಗಿ ಸೋಮಣ್ಣ ತಿಳಿಸಿದ್ದಾರೆ.
ಈಗ ಬಿಜೆಪಿ ವಿರುದ್ಧ ಮುನಿಸಿಕೊಂಡಿರುವ ಸೋಮಣ್ಣ ಕಾಂಗ್ರೆಸ್ ಸೇರಬಹುದೆಂಬ ಮಾತುಗಳು ಕೇಳಿಬಂದಿವೆ. ಈ ಕುರಿತ ತೀರ್ಮಾನವನ್ನು ಡಿಸೆಂಬರ್ 6 ರಂದು ತಿಳಿಸುವುದಾಗಿ ಹೇಳಿದ್ದಾರೆ. ಒಂದು ಕಾಲದಲ್ಲಿ ಬಿಎಸ್‌ವೈ ಶಿಷ್ಯರೆಂದೇ ಗುರುತಿಸಿಕೊಂಡಿದ್ದ ಸೋಮಣ್ಣನವರು ಮಾಜಿ ಸಿಎಂ ಕುಟುಂಬದ ವಿರುದ್ಧ ಹರಿಹಾಯ್ದಿದ್ದಾರೆ. ಸೋಮಣ್ಣನವರನ್ನು ಮನವೊಲಿಸಲು ಬಿಜೆಪಿ ನಾಯಕರು ಪ್ರಯತ್ನಿಸುತ್ತಿದ್ದಾರೆ. ದುರಂತವೆಂದರೆ, ತಾವು ಕರೆ ಮಾಡಿದರೂ ಸೋಮಣ್ಣ ಕರೆಯನ್ನು ಸ್ವೀಕರಿಸುತ್ತಿಲ್ಲ ಎಂದು ಬಿಎಸ್‌ವೈ ಹೇಳಿದ್ದಾರೆ.

ಸಿದ್ದರಾಮಯ್ಯ ಸಪೋರ್ಟ್ ಮಾಡ್ತಾರೆ ಎಂದ ಯತ್ನಾಳ್
ಬಿಎಸ್‌ವೈ ಕುಟುಂಬದ ಕಟುಟೀಕಾಕಾರರಾಗಿರುವ ಯತ್ನಾಳ್ ವಿಜಯೇಂದ್ರ ಆಯ್ಕೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಜಯೇಂದ್ರ ಅವರು ಬ್ಲ್ಯಾಕ್‌ಮೇಲ್ ಮಾಡಿ ಅಧ್ಯಕ್ಷರಾಗಿದ್ದಾರೆ ಎಂದು ಆರೋಪಿಸಿದ್ದಾರೆ. ವಿಜಯೇಂದ್ರ ನನ್ನ ಮನೆಗೆ ಬರುವುದೂ ಬೇಡವೆಂದು ಹೇಳಿದ್ದಾರೆ. ಇದೇ ಸಂದರ್ಭದಲ್ಲಿ, ಗೋಕಾಕ ಶಾಸಕ ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇದು ರಾಜ್ಯ ಬಿಜೆಪಿಯಲ್ಲಿ ತಲ್ಲಣವನ್ನೇ ಸೃಷ್ಟಿ ಮಾಡಿದೆ.
ಇಂದು ನಡೆದ ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡಿರುವ ಯತ್ನಾಳ್, ಮುಖ್ಯಮಂತ್ರಿ ಸಿದ್ದರಾಮಯ್ಯನವರು ನನಗೆ ಸಪೋರ್ಟ್ ಮಾಡ್ತಾರೆ. ನನ್ನ ನೇರ ನುಡಿ ಅವರಿಗೆ ಇಷ್ಟ. ನಾವೇನು ಇಂಡಿಯಾ-ಪಾಕಿಸ್ತಾನದವರಲ್ಲ. ನಮ್ಮ ನಡುವೆ ಉತ್ತಮ ಬಾಂದವ್ಯವಿದೆ ಎಂದು ಯತ್ನಾಳ್ ಹೇಳಿದ್ದಾರೆ. ಇದು ರಾಜಕೀಯವಾಗಿ ಮಹತ್ವವನ್ನು ಪಡೆದುಕೊಂಡಿದದೆ.
ಬಿಜೆಪಿಯನ್ನು ಸುಡುತ್ತಲೇ ಇದೆ ಗುಪ್ತ ಬೆಂಕಿ
ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ಬೆಂಕಿ ಹೊತ್ತಿಕೊಳ್ಳುತ್ತಲೇ ಇದೆ. ವಿಜಯೇಂದ್ರ ಅಧ್ಯಕ್ಷರಾದ ನಂತರ ಬಂಡಾಯ ಮತ್ತಷ್ಟು ಉಲ್ಬಣಗೊಂಡಿದೆ. ಸೋಮಣ್ಣ, ಸಿಟಿ ರವಿ, ಯತ್ನಾಳ್ ಸೇರಿದಂತೆ ಕೆಲ ನಾಯಕರು ಪಕ್ಷದ ನಿರ್ಧಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಉತ್ತರ ಲೋಕಸಭಾ ಸದಸ್ಯರಾದ ಸದಾನಂದಗೌಡ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಬಚ್ಚೇಗೌಡ ಹಾಗೂ ಚಾಮರಾಜನಗರ ಕ್ಷೇತ್ರದ ಸಂಸದರಾದ ಶ್ರೀನಿವಾಸ ಪ್ರಸಾದ್ ಅವರು ಸಕ್ರಿಯ ರಾಜಕಾರಣದಿಂದ ನಿವೃತ್ತಿ ಹೊಂದುವುದಾಗಿ ಹೇಳಿದ್ದಾರೆ. ಲೋಕಸಭೆ ಚುನಾವಣೆಗೆ ಕೆಲ ತಿಂಗಳು ಬಾಕಿ ಇರುವಾಗಲೇ ರಾಜ್ಯ ಬಿಜೆಪಿಯಲ್ಲಿ ಭಯಂಕರ ಬಂಡಾಯ ಕಾಣಿಸಿಕೊಂಡಿರುವುದು ಪಕ್ಷಕ್ಕೆ ನಷ್ಟವನ್ನಂತೂ ಮಾಡಲಿದೆ.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications