ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅತಿ ಮಹತ್ವದ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಆರಂಭ, ಕೆಲ ಕ್ಷಣಗಳಲ್ಲಿ ನೂತನ ಸಿಎಂ ಆಯ್ಕೆ!

|
Google Oneindia Kannada News

ಬೆಂಗಳೂರು, ಜು. 27: ಅತಿ ಮಹತ್ವದ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಆರಂಭವಾಗಿದ್ದು, ಕೆಲ ಹೊತ್ತಿನಲ್ಲಿಯೇ ರಾಜ್ಯ ಬಿಜೆಪಿಗೆ ನೂತನ ನಾಯಕನನ್ನು ಬಿಜೆಪಿ ಹೈಕಮಾಂಡ್ ಸೂಚಿಸಲಿದೆ. ಈಗಾಗಲೇ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಆರಂಭವಾಗಿದ್ದು, ವೀಕ್ಷಕರಾಗಿ ಆಗಮಿಸಿರುವ ಕೇಂದ್ರ ಸಚಿವರಾದ ಧರ್ಮೆಂದ್ರ ಪ್ರಧಾನ ಹಾಗೂ ಜಿ. ಕಿಶನ್ ರೆಡ್ಡಿ ಅವರು ಸಭೆಯಲ್ಲಿ ಭಾಗವಹಿಸಿದ್ದಾರೆ. ಜೊತೆಗೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರೂ ಕೂಡ ಸಭೆಯಲ್ಲಿ ಭಾಗವಹಿಸಿದ್ದಾರೆ.

ಹಂಗಾಮಿ ಮುಖ್ಯಮಂತ್ರಿ ಯಡಿಯೂರಪ್ಪ ಅವರೂ ಕೂಡ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸಿದ್ದು ಎಲ್ಲ ಕುತೂಹಲಗಳಿಗೆ ತಾತ್ಕಾಲಿಕವಾಗಿ ತೆರೆ ಎಳೆದಿದ್ದಾರೆ. ಹಂಗಾಮಿ ಸಿಎಂ ಯಡಿಯೂರಪ್ಪ ಅವರು ಸಭೆಯಲ್ಲಿ ಭಾಗವಹಿಸದೇ ಇದ್ದಲ್ಲಿ ಬೇರೆಯದ್ದೆ ಸಂದೇಶ ಹೋಗುತ್ತದೆ ಎನ್ನಲಾಗಿತ್ತು. ಹೀಗಾಗಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸುವಂತೆ ಹೈಕಮಾಂಡ್ ಕೂಡ ಯಡಿಯೂರಪ್ಪ ಅವರನ್ನು ಕೇಳಿಕೊಂಡಿತ್ತು.

ಇನ್ನು ಬೇರೆ ಪಕ್ಷಗಳಿಂದ ಬಂದು ಶಾಸಕರಾದವರೂ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸಿದ್ದಾರೆ. ಎಲ್ಲರೂ ಬಹುತೇಕ ಒಟ್ಟಾಗಿಯೆ ಸಭೆಯಲ್ಲಿ ಭಾಗವಹಿಸಲು ಆಗಮಿಸಿರುವುದು ಅವರ ಮುಂದಿನ ಸ್ಪಷ್ಟ ನಡೆಯನ್ನು ಸೂಚಿಸಿದಂತಾಗಿದೆ. ಈಗಾಗಲೇ ವಲಸೆ ಶಾಸಕರೆಲ್ಲರಿಗೂ ಸಚಿವ ಸ್ಥಾನ ಕೊಡುವ ಭರವಸೆ ಹೈಕಮಾಂಡ್‌ನಿಂದಲೇ ಸಿಕ್ಕಿದೆ ಎನ್ನಲಾಗಿದೆ.

BJP legislative part meeting started; new cm selection soon

Recommended Video

Shivaram Hebbar : ವಿಶ್ವಾಸ ಕಳೆದುಕೊಳ್ಳೋ ಪ್ರಶ್ನೆ ಜೀವನದಲ್ಲೇ ಬಂದಿಲ್ಲ! | Oneindia Kannada

ಜೊತೆಗೆ ನಾಯಕತ್ವ ಬದಲಾವಣೆಗೆ ಆಗ್ರಹಿಸಿದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಭೆಯಲ್ಲಿ ಭಾಗವಹಿಸಿದ್ದಾರೆ. ಒಟ್ಟಾರೆ ಅತಿ ಮಹತ್ವದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಯಾರು ಬಿಜೆಪಿಯ ಮುಂದಿನ ನಾಯಕರಾಗಿ ಆಯ್ಕೆಯಾಗುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.

English summary
important BJP legislative party meeting started. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X