ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ; ಜುಲೈ 26ರ ಸಭೆ ರದ್ದು!

ಬೆಂಗಳೂರು, ಜುಲೈ 20; ಮಹತ್ವದ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಕರೆದಿದ್ದ ಶಾಸಕಾಂಗ ಪಕ್ಷದ ಸಭೆಯನ್ನು ದಿಢೀರ್ ರದ್ದುಗೊಳಿಸಲಾಗಿದೆ.

ದೆಹಲಿಗೆ ಭೇಟಿ ನೀಡಿದ್ದ ಯಡಿಯೂರಪ್ಪ ಹೈಕಮಾಂಡ್ ನಾಯಕರ ಸೂಚನೆಯಂತೆ ಜುಲೈ 26ರಂದು ಶಾಸಕಾಂಗ ಪಕ್ಷದ ಸಭೆಯನ್ನು ಕರೆದಿದ್ದರು. ಆದರೆ ಮಂಗಳವಾರ ಸಭೆ ರದ್ದುಗೊಂಡಿರುವ ಮಾಹಿತಿ ಬಂದಿದೆ.

ಶಾಸಕಾಂಗ ಪಕ್ಷದ ಸಭೆಯನ್ನು ರದ್ದುಗೊಳಿಸಿ ಶಾಸಕರು, ವಿಧಾನ ಪರಿಷತ್ ಸದಸ್ಯರಿಗೆ ಭೋಜನಕೂಟವನ್ನು ಆಯೋಜನೆ ಮಾಡಲಾಗಿದೆ. ಜುಲೈ 25ರ ರಾತ್ರಿ ಭೋಜನಕೂಟ ನಡೆಯಲಿದೆ.

BJP Legislative Party Meeting On July 26 Cancelled

ಬೆಂಗಳೂರು ನಗರದ ಖಾಸಗಿ ಹೋಟೆಲ್‌ನಲ್ಲಿ ಜುಲೈ 25ರ ಸಂಜೆ 7.30ಕ್ಕೆ ಭೋಜನಕೂಟ ನಡೆಯಲಿದೆ. ಜುಲೈ 26ರಂದು ಯಡಿಯೂರಪ್ಪ ನೇತೃತ್ವದ ಸರ್ಕಾರ 2 ವರ್ಷಗಳನ್ನು ಪೂರೈಸಲಿದೆ.

ಯಡಿಯೂರಪ್ಪ ದಹೆಲಿಯಿಂದ ವಾಪಸ್ ಆದ ಬಳಿಕ ಮುಖ್ಯಮಂತ್ರಿಗಳ ಬದಲಾವಣೆ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಆದ್ದರಿಂದ ಜುಲೈ 26ರಂದು ಕರೆದಿದ್ದ ಸಭೆ ಕುತೂಹಲಕ್ಕೆ ಕಾರಣವಾಗಿತ್ತು.

ಶಾಸಕಾಂಗ ಪಕ್ಷದ ಸಭೆಯನ್ನು ದಿಢೀರ್ ರದ್ದುಗೊಳಿಸಲಾಗಿದ್ದು, ಕರ್ನಾಟಕ ಬಿಜೆಪಿಯಲ್ಲಿನ ಮುಂದಿನ ಬೆಳವಣಿಗೆ ಬಗ್ಗೆ ಹಲವಾರು ವಿಶ್ಲೇಷಣೆಗಳು ನಡೆಯುತ್ತಿವೆ. ನಾಯಕತ್ವ ಬದಲಾವಣೆ ಚರ್ಚೆಗೆ ಸದ್ಯಕ್ಕೆ ಪೂರ್ಣ ವಿರಾಮ ಹಾಕಲಾಗಿದೆಯೇ? ಕಾದು ನೋಡಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+