ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಲ್ಲಾ ಹಾಲಿ ಸಂಸದರಿಗೂ ಟಿಕೆಟ್ ಕಷ್ಟ : ಜೋಶಿ

|
Google Oneindia Kannada News

Prahlad Joshi
ಬೆಂಗಳೂರು, ಡಿ. 26 : ಬಿ.ಎಸ್.ಯಡಿಯೂರಪ್ಪ ಪಕ್ಷಕ್ಕೆ ಮರು ಸೇರ್ಪಡೆಗೊಳ್ಳುವುದು ಖಚಿತವಾದಂತೆ ರಾಜ್ಯ ಬಿಜೆಪಿ ಘಟಕ ಲೋಕಸಭೆ ಚುನಾವಣೆ ಸಿದ್ಧತೆಗಳತ್ತ ಗಮನ ಹರಿಸಿದೆ. ಗುರುವಾರ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಅಭ್ಯರ್ಥಿಗಳ ಪಟ್ಟಿ, ನರೇಂದ್ರ ಮೋದಿ ಸಮಾವೇಶ ಏರ್ಪಡಿಸುವುದು ಮುಂತಾದ ವಿಚಾರಗಳ ಕುರಿತು ಚರ್ಚೆ ನಡೆಯಲಿದೆ.

ಲೋಕಸಭೆ ಚುನಾವಣೆ ಸಿದ್ಧತೆಗಳ ಕುರಿತು ಮಾಹಿತಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ, ಜನವರಿ 20ರೊಳಗೆ ಲೋಕಸಭೆ ಅಭ್ಯರ್ಥಿಗಳ ಮೊದಲ ಪಟ್ಟಿ ತಯಾರಿಸಲಾಗುವುದು ಎಂದರು. ಗುರುವಾರ ನಡೆಯಲಿರುವ ಸಭೆಯಲ್ಲಿ ಚುನಾವಣಾ ಸಿದ್ಧತೆ, ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.

ಜನವರಿ ಮತ್ತು ಫೆಬ್ರವರಿಯಲ್ಲಿ ಪಕ್ಷದ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ಸಮಾವೇಶಗಳನ್ನು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆಯೋಜಿಸುವ ಕುರಿತು ಗುರುವಾರದ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ ಎಂದು ಪ್ರಹ್ಲಾದ್ ಜೋಶಿ ಹೇಳಿದರು. ಚುನಾವಣಾ ಪ್ರಚಾರ ತಂತ್ರದ ಕುರಿತು ಸಭೆಯಲ್ಲಿ ಯೋಜನೆ ತಯಾರಿಸಲಾಗುತ್ತದೆ ಎಂದರು. [ಕರ್ನಾಟಕದ 8 ಜಿಲ್ಲೆಗಳಲ್ಲಿ ಮೋದಿ ಸಮಾವೇಶ]

ಎಲ್ಲಾ ಹಾಲಿ ಸಂಸದರಿಗೂ ಟಿಕೆಟ್ ದೊರೆಯುವ ಸಾಧ್ಯತೆ ಕಡಿಮೆ ಎಂದು ಮಾಹಿತಿ ನೀಡಿದ ಪ್ರಹ್ಲಾದ್ ಜೋಶಿ, ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಹೈ ಕಮಾಂಡ್ ನಾಯಕರ ತೀರ್ಮಾನವೇ ಅಂತಿಮ ಎಂದರು. ಅಭ್ಯರ್ಥಿಗಳ ಆಯ್ಕೆಗೆ ಕೆಲವು ಮಾನದಂಡಗಳನ್ನು ನಿಗದಿಪಡಿಸಲಾಗಿದ್ದು, ಅದರಂತೆ ಆಯ್ಕೆ ನಡೆಯಲಿದೆ ಎಂದು ಹೇಳಿದರು. [ಬಿಜೆಪಿ ಸೇರ್ಪಡೆ ಸನ್ನಿಹಿತ, ಯಡಿಯೂರಪ್ಪ ಫುಲ್ ಖುಷ್]

ಬಿ.ಎಸ್.ಯಡಿಯೂರಪ್ಪ ಅವರನ್ನು ಪಕ್ಷಕ್ಕೆ ಮರಳಿ ಕರೆತರುವ ಬಗ್ಗೆ ಪಕ್ಷದ ರಾಷ್ಟ್ರಾಧ್ಯಕ್ಷ ರಾಜನಾಥ್ ಸಿಂಗ್ ಮತ್ತು ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಉತ್ತಮ ಪ್ರತಿಕ್ರಿಯೆ ನೀಡಿದ್ದು, ಸಂಕ್ರಾತಿ ನಂತರ ಅವರು ಪಕ್ಷಕ್ಕೆ ಮರಳುವ ಸಾಧ್ಯತೆ ಇದೆ ಎಂದು ತಿಳಿಸಿದರು.

ಎಲ್ಲಾ ಅಡ್ಡಿ ನಿವಾರಣೆ : ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಬಿಎಸ್ಆರ್ ಕಾಂಗ್ರೆಸ್ ಅಧ್ಯಕ್ಷ ಬಿ.ಶ್ರೀರಾಮುಲು ಬಿಜೆಪಿಗೆ ಮರಳಲು ಇದ್ದ ಎಲ್ಲಾ ಅಡೆತಡೆಗಳು ನಿವಾರಣೆಯಾಗಿದ್ದು, ಶೀಘ್ರವೇ ಅವರು ಬಿಜೆಪಿಗೆ ಮರಳಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದರು. ರೈತರ ಕಣ್ಣೀರಿನಲ್ಲಿ ಸಿದ್ದರಾಮಯ್ಯ ಕೈ ತೊಳೆಯುತ್ತಿದ್ದಾರೆ. 8 ತಿಂಗಳ ಆಡಳಿತದಲ್ಲಿ ಸಿದ್ದರಾಮಯ್ಯ 8 ತಪ್ಪುಗಳನ್ನು ಮಾಡಿದ್ದಾರೆ ಎಂದು ಸದಾನಂದ ಗೌಡರು ವ್ಯಂಗ್ಯವಾಡಿದರು.

English summary
Racing against time in its preparations for the Lok Sabha elections, state BJP is set to finalize its first list of candidates for the polls by January 20. Party office-bearers meeting to be held in Bangalore on Thursday is set for a day-long deliberations on poll preparations. We will finalize the first list of candidates by January 20,” state BJP president Prahlad Josh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X