ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವ ಸ್ಥಾನಗಳ ಕುರಿತು ಚರ್ಚೆ: ಬಿಜೆಪಿಯ ಲೆಕ್ಕಾಚಾರವೆಷ್ಟು?

ಬೆಂಗಳೂರು, ಡಿಸೆಂಬರ್‌ 29: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡ ರಾಜ್ಯ ಬಿಜೆಪಿ ಲೋಕಸಮರಕ್ಕೆ ಬರದ ಸಿದ್ದತೆ ನಡೆಸುತ್ತಿದೆ. 20 ಕ್ಷೇತ್ರಗಳನ್ನ ಗೆಲ್ಲುವ ಗುರಿಯನ್ನ ಆಡಳಿತರೂಢ ಕಾಂಗ್ರೆಸ್‌ ಹಾಕಿಕೊಂಡಿದ್ರೆ, ಇತ್ತ ಕಮಲ ಪಡೆಯಲ್ಲಿ ಕಳೆದ ಬಾರೀ ಗೆದ್ದ ಸ್ಥಾನಗಳಿಗಿಂತ ಹೆಚ್ಚು ಸ್ಥಾನ ಗೆಲ್ಲಬೇಕು ಎಂಬ ಪ್ಲಾನ್‌ ಹಾಕಿಕೊಂಡಿದೆ.

ಲೋಕಸಭಾ ಚುನಾವಣೆಗೆ ಕೆಲ ತಿಂಗಳು ಮಾತ್ರ ಬಾಕಿ ಉಳಿದಿದ್ದು, 2024 ರ ಲೋಕಸಮರವನ್ನ ಗಂಭೀರವಾಗಿ ತೆಗೆದುಕೊಂಡಿರುವ ಬಿಜೆಪಿ ಚುನಾವಣಾ ತಂತ್ರಗಾರಕೆ ಕುರಿತು ಸಭೆ ನಡೆಸಿದೆ. ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು, ಸದಾನಂದಗೌಡರು, ಈಶ್ವರಪ್ಪನವರು, ಸಿ.ಟಿ.ರವಿಯವರು, ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ವಿರೋಧ ಪಕ್ಷದ ನಾಯಕರ ಆರ್‌ ಅಶೋಕ್‌ ಅವರು ಸೇರಿ ಅನೇಕ ಹಿರಿಯರು ಸಭೆಯಲ್ಲಿ ಚರ್ಚೆ ನಡೆಸಿದ್ದಾರೆ.

BJP LTaders Discussed The Seats To Be Won In the Lok Sabha Elections

ಲೋಕಸಭಾ ಚುನಾವಣೆಯಲ್ಲಿ ಎಲ್ಲ ಸ್ಥಾನ ಗೆಲ್ಲಲು ನಮ್ಮ ರಣತಂತ್ರ ಏನಿರಬೇಕು ಎಂಬುದರ ಬಗ್ಗೆ ಸಮಾಲೋಚನೆ ನಡೆಸಿದ್ದೇವೆ. ರಾಜ್ಯ ಮತ್ತು ದೇಶದ ಜನರು ನರೇಂದ್ರ ಮೋದಿಯವರು ಮತ್ತೆ ಪ್ರಧಾನಮಂತ್ರಿ ಆಗಬೇಕೆಂದು ಬಯಸುತ್ತಿದ್ದಾರೆ. ಅದಕ್ಕಾಗಿ ನಾವೆಲ್ಲ ಶ್ರಮಿಸಬೇಕು ಎಂದು ಬಿಜೆಪಿ ಹಿರಿಯ ನಾಯಕರು ಸಭೆ ನಡೆಸಿದ್ದಾರೆ. ಸಭೆಯಲ್ಲಿ 28 ಲೋಕಸಭಾ ಕ್ಷೇತ್ರಗಳ ಪೈಕಿ 28 ಕ್ಷೇತ್ರಗಳನ್ನ ಗೆಲ್ಲುವ ನಿಟ್ಟಿನಲ್ಲಿ ಕಾರ್ಯತಂತ್ರವನ್ನ ರೂಪಿಸಿ, 28 ಕ್ಷೇತ್ರಗಳನ್ನ ಗೆಲ್ಲುವ ಮೂಲಕ ಕಾಂಗ್ರೆಸ್‌ ಗೆ ಠಕ್ಕರ್‌ ಕೊಡಬೇಕು ಎಂಬುದು ಬಿಜೆಪಿ ನಾಯಕರ ಲೆಕ್ಕಾಚಾರ ಹಾಕಿಕೊಂಡಿದ್ದಾರೆ.

ಸಭೆಯ ಬಳಿಕ ಮಾಜಿ ಸಚಿವ ಕೆ ಎಸ್‌ ಈಶ್ವರಪ್ಪ ಮಾತನಾಡಿ, ರಾಜ್ಯದ ಎಲ್ಲ 28 ಲೋಕಸಭಾ ಕ್ಷೇತ್ರಗಳಲ್ಲಿ ಗೆದ್ದೇಗೆಲ್ಲುವ ಕುರಿತು ಇಂದಿನ ಸಭೆಯು ಚರ್ಚಿಸಿದೆ ಎಂದು ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ರಾಜ್ಯದ ಪ್ರಮುಖ ನಾಯಕರ ವಿಶೇಷ ಸಭೆಯನ್ನು ಇವತ್ತು ನಡೆಸಲಾಗಿದೆ. ನಮ್ಮ ನಾಯಕರಾದ ಯಡಿಯೂರಪ್ಪನವರು, ಬಸವರಾಜ ಬೊಮ್ಮಾಯಿಯವರು, ಸದಾನಂದಗೌಡರು, ಗೋವಿಂದ ಕಾರಜೋಳರವರು ಸೇರಿ ಅನೇಕ ಪ್ರಮುಖರು ಭಾಗವಹಿಸಿದ್ದರು ಎಂದರು.

ಲೋಕಸಭೆ, ವಿಧಾನಪರಿಷತ್ ಚುನಾವಣೆಯನ್ನು ಕೂಡ ಬಿಜೆಪಿ- ಜೆಡಿಎಸ್ ಎರಡೂ ಸೇರಿ ಗೆಲ್ಲಬೇಕು ಎಂದು ತೀರ್ಮಾನ ಮಾಡಲಾಗಿದೆ. ರಾಜ್ಯಾಧ್ಯಕ್ಷ ವಿಜಯೇಂದ್ರರವರ ನೇತೃತ್ವದಲ್ಲಿ ರಾಜ್ಯ ಸರಕಾರದ ವೈಫಲ್ಯಗಳ ವಿರುದ್ಧ ಹೋರಾಟ ಮಾಡಲು ನಿರ್ಧರಿಸಲಾಗಿದೆ ಎಂದು ಕೆ ಎಸ್‌ ಈಶ್ವರಪ್ಪ ಹೇಳಿದರು.
ಈ ವೇಳೆ ಮಾಜಿ ಸಚಿವ ಸಿ ಟಿ ರವಿ ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಎಲ್ಲ ಸ್ಥಾನ ಗೆಲ್ಲಲು ನಮ್ಮ ರಣತಂತ್ರ ಏನಿರಬೇಕು ಎಂಬುದರ ಬಗ್ಗೆ ಸಮಾಲೋಚನೆ ನಡೆಸಿದ್ದೇವೆ. ರಾಜ್ಯ ಮತ್ತು ದೇಶದ ಜನರು ನರೇಂದ್ರ ಮೋದಿಯವರು ಮತ್ತೆ ಪ್ರಧಾನಮಂತ್ರಿ ಆಗಬೇಕೆಂದು ಬಯಸುತ್ತಿದ್ದಾರೆ ಎಂದುಮಾಜಿ ಸಚಿವ ಸಿ.ಟಿ.ರವಿ ಅವರು ತಿಳಿಸಿದರು.

BJP LTaders Discussed The Seats To Be Won In the Lok Sabha Elections

ಜನರು ನಮ್ಮನ್ನು ಬಯಸುತ್ತಿದ್ದಾರೆ. ನಾವು ವಿಶೇಷ ಪ್ರಯತ್ನ ಮಾಡಿದರೆ, ಒಂದಾಗಿ ಹೋದರೆ 28ಕ್ಕೆ 28 ಲೋಕಸಭಾ ಕ್ಷೇತ್ರ ಗೆಲ್ಲುವ ವಿಶ್ವಾಸ ನಮಗಿದೆ. ರಾಜ್ಯಾಧ್ಯಕ್ಷ ವಿಜಯೇಂದ್ರರವರ ನೇತೃತ್ವದಲ್ಲಿ ಪ್ರಮುಖರ ವಿಶೇóಷ ಸಮಾಲೋಚನಾ ಸಭೆ ನಡೆಸಲಾಗಿದೆ. ಲೋಕಸಭಾ ಚುನಾವಣೆಯಲ್ಲಿ 28ರಲ್ಲಿ 28 ಸ್ಥಾನಗಳನ್ನೂ ಗೆಲ್ಲುವ ಕುರಿತು ಯಾವ ರೀತಿ ಕಾರ್ಯಯೋಜನೆ ರೂಪಿಸಬೇಕು.

ಜೆಡಿಎಸ್ ಜೊತೆ ಸಮನ್ವಯ ಸಾಧಿಸಿ ಹೇಗೆ ಒಟ್ಟಾಗಿ ಕೆಲಸ ಮಾಡಬೇಕು ಎಂಬ ವಿಷಯ ಚರ್ಚಿಸಲಾಗಿದೆ. ರಣತಂತ್ರದ ಮಾರ್ಗಸೂಚಿಯ ಚರ್ಚೆ ನಡೆದಿದೆ. 2 ಪದವೀಧರ, 4 ಶಿಕ್ಷಕರ ಕ್ಷೇತ್ರ ಸೇರಿ ವಿಧಾನಪರಿಷತ್ತಿನ 6 ಕ್ಷೇತ್ರಗಳ ಚುನಾವಣೆಯೂ ಬರುತ್ತಿದೆ. ಈ ಚುನಾವಣಾ ದೃಷ್ಟಿಯಿಂದಲೂ ಚರ್ಚೆ ನಡೆದಿದೆ. ಬಿಜೆಪಿಯನ್ನು ಮತ್ತೆ ಸಂಘಟಿಸುವುದೇ ನಮ್ಮ ಗುರಿ ಎಂದು ವಿವರಿಸಿದರು. ವಿಧಾನಸಭಾ ಚುನಾವಣೆಯ ಸೋಲಿನ ಸೇಡನ್ನು ತೀರಿಸಿಕೊಳ್ಳಲು ಎಲ್ಲ 28 ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲುವ ಗುರಿ ನಮ್ಮದು. ಅದಕ್ಕಾಗಿ ಎಲ್ಲ ಪ್ರಯತ್ನ ಮಾಡುತ್ತೇವೆ ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+