ಲೋಕಸಭಾ ಚುನಾವಣೆಗೆ ಜೆಡಿಎಸ್​-ಬಿಜೆಪಿ ಮೈತ್ರಿ! ದೇವೇಗೌಡ್ರು ಬೇಡಿಕೆ ಇಟ್ಟ ಕ್ಷೇತ್ರಗಳು ಯಾವುವು? ಇಲ್ಲಿದೆ ಮಾಹಿತಿ

ಬೆಂಗಳೂರು,ಸೆಪ್ಟೆಂಬರ್‌ 08: 2024ರ ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಪಕ್ಷಗಳ ತಯಾರಿಯೂ ಭರ್ಜರಿ ಜೋರಾಗಿದೆ. ಲೋಕಸಮರದಲ್ಲಿ ಕನಿಷ್ಠ 20 ಸ್ಥಾನಗಳನ್ನ ಗೆಲ್ಲುವ ಟಾರ್ಗೆಟ್‌ ಹಾಕಿಕೊಂಡಿರುವ ಕಾಂಗ್ರೆಸ್‌ ಗೆ ಠಕ್ಕರ್‌ ಕೊಡಲು ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿಗೆ ಮುಂದಾಗಿವೆ.

ಹೌದು, ಈಗಾಗಲೇ ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡ ಅವರು ಮೈತ್ರಿ ವಿಚಾರವಾಗಿ ಪ್ರಧಾನಿ ಮೋದಿ ಜೊತೆಗೆ ಕೆಲ ತಿಂಗಳ ಹಿಂದೆಯೇ ಚರ್ಚೆ ನಡೆಸಿದ್ದು, ಇದೀಗ ಮಂಗಳವಾರ ಸಂಜೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಗೂ ಬಿಜೆಪಿ ರಾಷ್ಟ್ರಧ್ಯಕ್ಷರಾದ ಜೆ ಪಿ ನಡ್ಡಾ ಅವರನ್ನ ಜೆಡಿಎಸ್‌ ವರಿಷ್ಠರಾದ ಹೆಚ್‌ ಡಿ ದೇವೇಗೌಡರು ಭೇಟಿ ಮಾಡಿ ಮೈತ್ರಿ ಬಗ್ಗೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

BJP Making Alliance With JDS In Lok Sabha Election 2024

ಬಿಜೆಪಿ ಮತ್ತು ಜೆಡಿಎಸ್​ ಮೈತ್ರಿ ಮಾಡಿಕೊಂಡು ಒಟ್ಟಿಗೆ ಲೋಕಸಭಾ ಚುನಾವಣೆ ಅಖಾಡಕ್ಕಿಳಿಯಲು ಮುಂದಾಗಿದ್ದು, ಈಗಾಗಲೇ ನಾಯಕರ ನಡುವಿನ ಮಾತುಕತೆ ಯಶಸ್ವಿಯಾಗಿದೆ ಎಂದು ತಿಳಿದು ಬಂದಿದೆ.

ದೇವೇಗೌಡ ಅವರು ಬಿಜೆಪಿ ನಾಯಕರೊಂದಿಗೆ ನಡೆಸಿದ್ದ ಮಾತುಕತೆ ಯಶಸ್ವಿಯಾಗಿದ್ದಲ್ಲದೇ ಕ್ಷೇತ್ರ ಹಂಚಿಕೆ ಬಗ್ಗೆ ಒಪ್ಪಂದ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೂಲಗಳ ಪ್ರಕಾರ ದೇವೇಗೌಡ ಅವರು ಐದು ಲೋಕಸಭಾ ಕ್ಷೇತ್ರಗಳನ್ನು ತಮಗೆ ಬಿಟ್ಟುಕೊಡುವಂತೆ ದೇವೇಗೌಡ್ರು ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿದುಬಂದಿದೆ. ನಮಗೆ ಐದು ಸ್ಥಾನಗಳನ್ನ ಬಿಟ್ಟುಕೊಂಡಿ ಎಂದು ಕೆಲ ಕ್ಷೇತ್ರಗಳ ಬಗ್ಗೆಯೂ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಬಹುತೇಕ ಹಳೇ ಮೈಸೂರು ಭಾಗದ ಕ್ಷೇತ್ರಗಳನ್ನೇ ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠರಾದ ಹೆಚ್‌ ಡಿ ದೇವೇಗೌಡ್ರು ಹೇಳಿದ್ದಾರೆ ಎನ್ನಲಾಗಿದೆ. ಈ ಹಿಂದೆ ಜೆಡಿಎಸ್‌ ಭದ್ರಕೋಟೆಯಾಪಗಿದ್ದ ಕ್ಷೇತ್ರಗಳಾದ ಹಾಸನ, ಮಂಡ್ಯ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ತುಮಕೂರು ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳನ್ನು ತಮಗೆ ಕೊಡಿ ಎಂದು ದೇವೇಗೌಡ್ರು ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಆದರೆ, ಇದಕ್ಕೆ ಕೇಂದ್ರ ಸಚಿವ ಅಮಿತ್‌ ಶಾ ಸದ್ಯಕ್ಕೆ ನಾಲ್ಕು ಲೋಕಸಭಾ ಕ್ಷೇತ್ರಗಳನ್ನು ಜೆಡಿಎಸ್‌ಗೆ ಬಿಟ್ಟುಕೊಡುವುದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

ಮಂಡ್ಯ ಕ್ಷೇತ್ರವನ್ನು ಬಿಟ್ಟುಕೊಡುವಂತೆ ದೇವೇಗೌಡರು ಬೇಡಿಕೆ ಇಟ್ಟಿದ್ದಾರೆ, ಆದರೆ, ಮಂಡ್ಯವನ್ನು ಬಿಟ್ಟು ಇನ್ನುಳಿದ ನಾಲ್ಕು ಕ್ಷೇತ್ರಗಳನ್ನು ನೀಡಲು ಅಮಿತ್‌ ಶಾ ಗ್ರೀನ್​ ಸಿಗ್ನಲ್​ ನೀಡಿದ್ದು, ಇನ್ನೊಂದು ಸೀಟಿನ ಬಗ್ಗೆ ಮುಂದಿನ ದಿನಗಳಲ್ಲಿ ತೀರ್ಮಾನಿಸೋಣ ಎಂದಿದ್ದಾರೆ ಎನ್ನಲಾಗಿದೆ. ಒಟ್ನಲಿ ಮೈತ್ರಿ ವಿಚಾರದಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ನಿಲುವು ಸ್ಪಷ್ಟವಾಗಿದ್ದು, ಸೀಟು ಹಂಚಿಕೆಯಲ್ಲಿ ಇನ್ನೂ ಫೈನಲ್‌ ಆಗಿಲ್ಲ ಎಂಬುದು ತಿಳಿದು ಬಂದಿದೆ.

ದೇವೇಗೌಡ್ರು ಕೇಳಿದ 5 ಕ್ಷೇತ್ರಗಳ ಪೈಕಿ 4 ಕ್ಷೇತ್ರಗಳಲ್ಲಿ ಬಿಜೆಪಿಯ ಹಾಲಿ ಸಂಸದರ ಕ್ಷೇತ್ರಗಳಾದ ತುಮಕೂರು ಕ್ಷೇತ್ರದ ಬಿಜೆಪಿ ಸಂಸದ ಜಿ ಎಸ್‌ ಬಸವರಾಜು, ಸುಮಲತಾ ಕ್ಷೇತ್ರ ಇರುವ ಮಂಡ್ಯ, ಮುನಿಸ್ವಾಮಿ ಕ್ಷೇತ್ರವಾದ ಕೋಲಾರ, ಜಿ ಎಸ್‌ ಬಚ್ಚೇಗೌಡ ಕ್ಷೇತ್ರವಾದ ಚಿಕ್ಕಬಳ್ಳಾಪುರ, ಹಾಗೂ ಪ್ರಜ್ವಲ್‌ ರೇವಣ್ಣ ಕ್ಷೇತ್ರವಾದ ಹಾಸನ ಕ್ಷೇತ್ರವನ್ನ ಕೇಳಿದ್ದಾರೆ. ಈ ಕ್ಷೇತ್ರಗಳ ಮೈತ್ರಿ ಮಂಡ್ಯ ಕ್ಷೇತ್ರವನ್ನ ಬಿಜೆಪಿ ತನ್ನ ಬಳಿಯೇ ಉಳಿಸಿಕೊಳ್ಳಲು ನಿರ್ಧಾರಿಸಿದ್ದಾರೆ ಎನ್ನಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+