BJP Manifesto 2023: ಲಾಜಿಸ್ಟಿಕ್ ಹಬ್, ಸ್ಪೈಸ್ ಪಾರ್ಕ್ ಸೇರಿದಂತೆ ಕಿತ್ತೂರು ಕರ್ನಾಟಕಕ್ಕೆ ಹಲವು ಭರವಸೆಗಳು
ಬೆಂಗಳೂರು, ಮೇ, 01: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರುವಾಗುತ್ತಿರುವ ಹಿನ್ನೆಲೆ ಬಿಜೆಪಿ ಚುನಾವಣಾ ಪ್ರಣಾಳಿಕೆಯನ್ನು ಸೋಮವಾರ (ಮೇ 01) ಬಿಡುಗಡೆ ಮಾಡಿದೆ. ಬೆಂಗಳೂರಿನ ಶಾಂಗ್ರಿ ಲಾ ಹೋಟೆಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಹಾಗಾದರೆ ಪ್ರಣಾಳಿಕೆಯಲ್ಲಿ ಕಿತ್ತೂರು ಕರ್ನಾಟಕಕ್ಕೆ ಏನು ಭರವಸೆ ನೀಡಿದ್ದಾರೆ ಅನ್ನುವ ವಿವರವನ್ನು ಇಲ್ಲಿ ತಿಳಿಯಿರಿ.
1. ಬೆಳಗಾವಿಯನ್ನು ಮುಂಬೈ, ಬೆಂಗಳೂರು, ಚೆನ್ನೈ ಮತ್ತು ಇತರ ಪ್ರಮುಖ ಮೆಟ್ರೋಪಾಲಿಟಿನ್ ಪ್ರದೇಶಗಳೊಂದಿಗೆ ಸಂಪರ್ಕ ಕಲ್ಪಿಸುವ ಮೂಲಕ ಕಿತ್ತೂರು ಕರ್ನಾಟಕವನ್ನು "ಲಾಜಿಸ್ಟಿಕ್ ಮತ್ತು ಹಬ್" ಆಗಿ ರೂಪಿಸಲಾಗುತ್ತದೆ.
2. ಬ್ಯಾಡಗಿಯಲ್ಲಿ "ಸ್ಟೈಸ್ ಪಾರ್ಕ್" ಕಾರ್ಯವನ್ನು ತ್ವರಿತಗೊಳಿಸುತ್ತೇವೆ. ಹಾಗೆಯೆ ಈ ಪ್ರದೇಶದಲ್ಲಿ ಮಸಾಲೆ ಪದಾರ್ಥಗಳ ಮಾರುಕಟ್ಟೆ ಸೌಲಭ್ಯ ಸುಧಾರಿಸುತ್ತೇವೆ ಎನ್ನುವ ಭರವಸೆಯನ್ನು ನೀಡಿದ್ದಾರೆ.

3. ಇನ್ನು ಶಾಲಾ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶವನ್ನು ಸುಧಾರಿಸಲು ವಲಯದ ಪ್ರತಿ ತಾಲೂಕಿನಲ್ಲೂ 2 "ಪಿಎಂ ಶ್ರೀ ಶಾಲೆಗಳನ್ನು ಸ್ಥಾಪಿಸಲಾಗುತ್ತದೆ.
4. ಬಬಲೇಶ್ವರ, ವಿಜಯಪುರ ಸೇರಿದಂತೆ ಈ ಭಾಗದ ಇನ್ನಿತರ ಪ್ರದೇಶಗಳಲ್ಲಿ ನೀರಾವರಿ ಮತ್ತು ಕುಡಿಯುವ ನೀರಿನ ಸೌಲಭ್ಯ ಒದಗಿಸುವ ಉದ್ದೇಶಕ್ಕಾಗಿ "ಕೃತಕ ಕೆರೆ"ಗಳನ್ನು ನಿರ್ಮಿಸಲು 100 ಕೋಟಿ ರೂ. ಮಂಜೂರು ಮಾಡಲಾಗುತ್ತದೆ.
5. ಅಲ್ಲದೆ ಮಿಷನ್ ಕನೆಕ್ಟ್ ಕರ್ನಾಟಕದ ಅಡಿಯಲ್ಲಿ ಪ್ರಾದೇಶಿಕ ವಾಯುಮಾನ ಸಂಪರ್ಕವನ್ನು ಸುಧಾರಿಸಲು ಉಡಾನ್ ಯೋಜನೆಯಡಿ ಬಾಗಲಕೋಟೆಯಲ್ಲಿ "ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣ"ವನ್ನು ಸ್ಥಾಪಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ.
ಇನ್ನು ಪ್ರಣಾಳಿಕೆ ಬಿಡುಗಡೆ ಸಮಯದಲ್ಲಿ ಮಾತನಾಡಿದ ಜೆ.ಪಿ.ನಡ್ಡಾ, ರಾಜ್ಯದ 224 ಕ್ಷೇತ್ರಗಳ ಜನತೆ, ತಜ್ಞರ ಅಭಿಪ್ರಾಯ ಪಡೆದ ಪ್ರಣಾಳಿಕೆಯನ್ನು ಸಿದ್ಧಪಡಿಸಲಾಗಿದೆ. ಬಿಜೆಪಿಯದ್ದು ಜನಪರ ಪ್ರಣಾಳಿಕೆ ಆಗಿದೆ. ಜನರಿಗೆ ಏನೆಲ್ಲಾ ಒಳ್ಳೆಯದನ್ನು ಮಾಡಲು ಸಾಧ್ಯವಿದೆ, ಅದನ್ನು ಮಾಡಲು ಪ್ರಯತ್ನ ಮಾಡುತ್ತಿದ್ದೇವೆ ಎಂದು ಹೇಳಿದರು.
16 ಪ್ರಮುಖ ಭರವಸೆಗಳ ವಿವರ ಇಲ್ಲಿದೆ
1. ಯುಗಾದಿ, ಗಣೇಶ ಚತುರ್ಥು ಮತ್ತು ದೀಪಾವಳಿ ತಿಂಗಳಲ್ಲಿ ಬಿಪಿಎಲ್ ಕುಟುಂಬಗಳಿಗೆ ಮೂರು ಎಲ್‌ಪಿಜಿ ಸಿಲಿಂಡರ್‌ಗಳನ್ನು ಉಚಿತವಾಗಿ ನೀಡಲಾಗುವುದು.
2. ಉನ್ನತ ಮಟ್ಟದ ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಕರ್ನಾಟಕದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೊಳಿಸಲಾಗುವುದು.
3- ರಾಜ್ಯದಾದ್ಯಂತ ಕೈಗೆಟುಕುವ ಮತ್ತು ಗುಣಮಟ್ಟದ ಆಹಾರವನ್ನು ಒದಗಿಸಲು ಪ್ರತಿ ಮುನ್ಸಿಪಲ್ ಕಾರ್ಪೊರೇಷನ್‌ನ ಪ್ರತಿ ವಾರ್ಡ್‌ನಲ್ಲಿ ಅಟಲ್ ಆಹಾರ ಕೇಂದ್ರ ಸ್ಥಾಪನೆ.
4. ಸರ್ವರಿಗೂ ಸೂರು ಯೋಜನೆ ಅಡಿಯಲ್ಲಿ ವಸತಿ ರಹಿತರಿಗೆ 10 ಲಕ್ಷ ಮನೆ ನೀಡಲಾಗುವುದು
5. ಒನಕೆ ಓಬವ್ವ ಸಾಮಾಜಿಕ ನ್ಯಾಯ ನಿಧಿ ಯೋಜನೆಯಡಿಯಲ್ಲಿ ಎಸ್‌ಸಿ/ಎಸ್‌ಟಿ ಮಹಿಳೆಯರು ಮಾಡಿದ ಐದು ವರ್ಷಗಳ ಸ್ಥಿರ ಠೇವಣಿಗಳ ಮೇಲೆ ರೂ 10,000 ವರೆಗೆ ಹೊಂದಾಣಿಕೆಯ ಠೇವಣಿ ನೀಡಲಾಗುವುದು.
6. ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಕಾಯ್ದೆ, 1972 ಅನ್ನು ಸುಧಾರಿಸಲು ಮತ್ತು ಕುಂದುಕೊರತೆ ಪರಿಹಾರ ಕಾರ್ಯವಿಧಾನವನ್ನು ಆಧುನೀಕರಿಸಲು ಕರ್ನಾಟಕ ನಿವಾಸಿಗಳ ಕಲ್ಯಾಣ ಸಮಾಲೋಚನಾ ಸಮಿತಿಯನ್ನು ರಚಿಸಲಾಗುವುದು
7. ವಿಶ್ವೇಶ್ವರಯ್ಯ ವಿದ್ಯಾ ಯೋಜನೆ ಅಡಿಯಲ್ಲಿ ಸರ್ಕಾರಿ ಶಾಲೆಗಳ ಸಮಗ್ರ ಉನ್ನತೀಕರಣಕ್ಕಾಗಿ ಸರ್ಕಾರವು ಪ್ರಸಿದ್ಧ ವ್ಯಕ್ತಿಗಳು ಮತ್ತು ಸಂಸ್ಥೆಗಳೊಂದಿಗೆ ಪಾಲುದಾರಿಕೆ ಹೊಂದಲಿದೆ.
8. ಐಎಎಸ್/ಕೆಎಎಸ್/ಬ್ಯಾಂಕಿಂಗ್/ಸರ್ಕಾರಿ ಉದ್ಯೋಗಗಳಿಗೆ ತರಬೇತಿ ಪಡೆಯಲು ಯುವಕರಿಗೆ ಆರ್ಥಿಕ ಪ್ರೋತ್ಸಾಹ ಧನ ನೀಡಲಾಗುವುದು.
9. ಹಿರಿಯ ನಾಗರಿಕರಿಗೆ ಉಚಿತ ವಾರ್ಷಿಕ ಮಾಸ್ಟರ್ ಆರೋಗ್ಯ ತಪಾಸಣೆ
10. 'ರಾಜ್ಯ ರಾಜಧಾನಿ ಪ್ರದೇಶ' ಎಂದು ಗೊತ್ತುಪಡಿಸುವ ಮೂಲಕ ಬೆಂಗಳೂರನ್ನು ಅಭಿವೃದ್ಧಿಪಡಿಸಲಾಗುವುದು ಮತ್ತು ಸಮಗ್ರ, ತಂತ್ರಜ್ಞಾನ-ನೇತೃತ್ವದ ನಗರ ಅಭಿವೃದ್ಧಿ ಕಾರ್ಯಕ್ರಮವನ್ನು ಕಾರ್ಯಗತಗೊಳಿಸಲಾಗುವುದು
11. ಚಾರ್ಜಿಂಗ್ ಸ್ಟೇಷನ್‌ಗಳನ್ನು ಸ್ಥಾಪಿಸುವ ಮೂಲಕ, 1,000 ಸ್ಟಾರ್ಟ್‌ಅಪ್‌ಗಳನ್ನು ಬೆಂಬಲಿಸಲಾಗುವುದು.
12. ಬಿಎಂಟಿಸಿ ಬಸ್‌ಗಳನ್ನು ಸಂಪೂರ್ಣ ಎಲೆಕ್ಟ್ರಿಕ್ ಬಸ್‌ಗಳಾಗಿ ಪರಿವರ್ತಿಸಲಾಗುವುದು. ಬೆಂಗಳೂರಿನ ಹೊರವಲಯದಲ್ಲಿ 'ಇವಿ ಸಿಟಿ' ರಚಿಸುವ ಮೂಲಕ ಕರ್ನಾಟಕವನ್ನು ಎಲೆಕ್ಟ್ರಿಕ್ ವಾಹನಗಳ ಪ್ರಧಾನ ಕೇಂದ್ರವಾಗಿ ಪರಿವರ್ತಿಸುತ್ತದೆ.
13. 30,000 ಕೋಟಿ ರೂಪಾಯಿ ಕೆ-ಅಗ್ರಿ ಫಂಡ್ ಮೈಕ್ರೋ-ಕೋಲ್ಡ್ ಸ್ಟೋರೇಜ್ ಸೌಲಭ್ಯಗಳನ್ನು ಸ್ಥಾಪಿಸಲಾಗುವುದು. ಎಲ್ಲಾ ಜಿಪಿಗಳಲ್ಲಿ ಕೃಷಿ ಸಂಸ್ಕರಣಾ ಘಟಕಗಳು, ಐದು ಹೊಸ ಕೃಷಿ-ಕೈಗಾರಿಕೆ ಕ್ಲಸ್ಟರ್‌ಗಳನ್ನು ಮತ್ತು ಮೂರು ಹೊಸ ಆಹಾರ ಸಂಸ್ಕರಣಾ ಪಾರ್ಕ್‌ಗಳನ್ನು ಸ್ಥಾಪಿಸಲು.
14. ಅತ್ಯಾದುನಿಕ ಸೌಲಭ್ಯಗಳನ್ನು ಒದಗಿಸಿ ಕರ್ನಾಟಕವನ್ನು ಪ್ರಮುಖ ಪ್ರವಾಸಿ ಕೇಂದ್ರವನ್ನಾಗಿ ಮಾಡಲಾಗುವುದು. ಕಲ್ಯಾಣ ಸರ್ಕ್ಯೂಟ್, ಬನವಾಸಿ ಸರ್ಕ್ಯೂಟ್, ಪರಶುರಾಮ ಸರ್ಕ್ಯೂಟ್ ಮತ್ತು ಗಾಣಿಗಾಪುರ ಸರ್ಕ್ಯೂಟ್ ಅನ್ನು ಅಭಿವೃದ್ದಿಪಡಿಸಲು 1500 ಕೋಟಿ ರೂಪಾಯಿಗಳನ್ನು ನೀಡಲಾಗುವುದು.
15. ಉತ್ಪಾದನಾ ವಲಯದಲ್ಲಿ 10 ಲಕ್ಷ ಉದ್ಯೋಗಗಳನ್ನು ಸೃಷ್ಟಿಸಲಾಗುವುದು. ಇವುಗಳನ್ನು ಬೆಂಗಳೂರಿನಾಚೆಗೆ ಲಾಜಿಸ್ಟಿಕ್, ಕೈಗಾರಿಕಾ ಕ್ಲಸ್ಟರ್‌ಗಳಿಗೆ ಸಂಯೋಜಿಸಿ 'ಉತ್ಪಾದನಾ ವಲಯ ಆಧಾರಿತ ಪ್ರೋತ್ಸಾಹ' ಯೋಜನೆಯ ವ್ಯಾಪ್ತಿಯನ್ನು ವಿಸ್ತಿರಿಸಲಾಗುವುದು.
16. 'ಮಿಷನ್ ಸ್ವಾಸ್ಥ್ಯ ಕರ್ನಾಟಕದ ಅಡಿ' ಸರ್ಕಾರ ಆಸ್ಪತ್ರೆ ಹಾಗೂ ಆರೋಗ್ಯ ಕೇಂದ್ರಗಳಲ್ಲಿನ ಮೂಲಸೌಕರ್ಯಗಳನ್ನು ಸುಧಾರಿಸಲಾಗುವುದು.
-
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್‌ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications