ಬಿಜೆಪಿ ರಾಮನೊಂದಿಗೆ ಪ್ರಚಾರಕ್ಕೆ ಹೊರಟಿದೆ : ಸಿದ್ದರಾಮಯ್ಯ
ಬೆಂಗಳೂರು, ಏಪ್ರಿಲ್ 08 : 'ನರೇಂದ್ರ ಮೋದಿಯವರು ತಮ್ಮ 5 ವರ್ಷಗಳ ವೈಫಲ್ಯವನ್ನು ಅಯೋಧ್ಯೆಯ ಪುಣ್ಯಭೂಮಿಯಲ್ಲಿ ಹೂತಿಟ್ಟು, ಅಲ್ಲಿ ನೆಮ್ಮದಿಯಾಗಿದ್ದ ರಾಮನನ್ನು ಕರೆದುಕೊಂಡು ಚುನಾವಣಾ ಪ್ರಚಾರಕ್ಕೆ ಹೊರಟಿದ್ದಾರೆ' ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
2019ರ ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಬಿಜೆಪಿ ಸೋಮವಾರ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿದೆ. ರಾಮ ಮಂದಿರ ನಿರ್ಮಾಣದ ಬಗ್ಗೆಯೂ ಪ್ರಣಾಳಿಕೆಯಲ್ಲಿ ಪ್ರಸ್ತಾಪಿಸಲಾಗಿದೆ. ಸಿದ್ದರಾಮಯ್ಯ ಅವರು ಬಿಜೆಪಿ ಪ್ರಣಾಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿ ಟ್ವೀಟ್ ಮಾಡಿದ್ದಾರೆ.
'ನರೇಂದ್ರ ಮೋದಿಯವರು ತಮ್ಮ 5 ವರ್ಷಗಳ ವೈಫಲ್ಯವನ್ನು ಅಯೋಧ್ಯೆಯ ಪುಣ್ಯಭೂಮಿಯಲ್ಲಿ ಹೂತಿಟ್ಟು, ಅಲ್ಲಿ ನೆಮ್ಮದಿಯಾಗಿದ್ದ ರಾಮನನ್ನು ಕರೆದುಕೊಂಡು ಚುನಾವಣಾ ಪ್ರಚಾರಕ್ಕೆ ಹೊರಟಿದ್ದಾರೆ.

ನರೇಂದ್ರ ಮೋದಿ ಅವರೇ, ಇನ್ನೆಷ್ಟು ಕಾಲ ಜನರ ಭಾವನೆಗಳನ್ನೇ ಬಂಡವಾಳ ಮಾಡಿಕೊಂಡು ಮೋಸ ಮಾಡುತ್ತೀರ? 5 ವರ್ಷದಲ್ಲಿ ಒಮ್ಮೆಯಾದರೂ ಮಂದಿರ ನೆನಪಾಗಿರಲಿಲ್ಲವೇ?' ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಶ್ರಮವನ್ನೇ ಹಾಕಿಲ್ಲ : ಬಿಜೆಪಿ ಹೊಸ ಪ್ರಣಾಳಿಕೆ ರಚನೆ ಮಾಡಲು ಶ್ರಮವನ್ನೇ ಹಾಕಿಲ್ಲ. ಹಳೆಯ ಪ್ರಣಾಳಿಕೆಯ ಕಾಪಿಯನ್ನೇ ಮತ್ತೆ ನೀಡಿದ್ದಾರೆ. 2014ರಲ್ಲಿ ನೀಡಿದ ಯಾವ ಭರವಸೆಗಳನ್ನು ನರೇಂದ್ರ ಮೋದಿ ಅವರು ಈಡೇರಿಸಿಲ್ಲ ಎಂದು ಸಿದ್ದರಾಮಯ್ಯ ಟ್ವಿಟರ್‌ನಲ್ಲಿ ಆರೋಪಿಸಿದ್ದಾರೆ.
ನರೇಂದ್ರ ಮೋದಿಯವರು ತಮ್ಮ 5 ವರ್ಷಗಳ ವೈಫಲ್ಯವನ್ನು ಅಯೋಧ್ಯೆಯ ಪುಣ್ಯಭೂಮಿಯಲ್ಲಿ ಹೂತಿಟ್ಟು, ಅಲ್ಲಿ ನೆಮ್ಮದಿಯಾಗಿದ್ದ ರಾಮನನ್ನು ಕರೆದುಕೊಂಡು ಚುನಾವಣಾ ಪ್ರಚಾರಕ್ಕೆ ಹೊರಟಿದ್ದಾರೆ.@narendramodi ಅವರೇ, ಇನ್ನೆಷ್ಟು ಕಾಲ ಜನರ ಭಾವನೆಗಳನ್ನೇ ಬಂಡವಾಳ ಮಾಡಿಕೊಂಡು ಮೋಸ ಮಾಡುತ್ತೀರ? 5 ವರ್ಷದಲ್ಲಿ ಒಮ್ಮೆಯಾದರೂ ಮಂದಿರ ನೆನಪಾಗಿರಲಿಲ್ಲವೇ?
— Siddaramaiah (@siddaramaiah) April 8, 2019












Click it and Unblock the Notifications