ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯಡಿಯೂರಪ್ಪ ಅವರ ಮಗನ್ನ ಮಂತ್ರಿ ಮಾಡಬೇಕಾಗುತ್ತೆ ಅಂತಲೇ ಮಂತ್ರಿಮಂಡಲ ವಿಸ್ತರಣೆ ಮಾಡುತ್ತಿಲ್ಲ:ಸಿದ್ದರಾಮಯ್ಯ

ಲಂಚ ಜಾಸ್ತಿ ಸಿಗುತ್ತೆ ಅಂತಲೇ ಒಂದೂವರೆ ವರ್ಷದಿಂದ ಸಂಪುಟ ವಿಸ್ತರಣೆ ಮಾಡದೆ ಸುಮಾರು ಇಲಾಖೆಗಳನ್ನು ಮುಖ್ಯಮಂತ್ರಿಯೇ ಇಟ್ಟುಕೊಂಡಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ

|
Google Oneindia Kannada News

ಕಲಬುರಗಿ,ಫೆಬ್ರವರಿ6: ಯಡಿಯೂರಪ್ಪ ಅವರ ಮಗನ್ನ ಮಂತ್ರಿ ಮಾಡಬೇಕಾಗುತ್ತೆ ಅಂತಲೇ ಮಂತ್ರಿಮಂಡಲ ವಿಸ್ತರಣೆ ಮಾಡುತ್ತಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಕಲಬುರಗಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಲಂಚ ಜಾಸ್ತಿ ಸಿಗುತ್ತೆ ಅಂತಲೇ ಒಂದೂವರೆ ವರ್ಷದಿಂದ ಸಂಪುಟ ವಿಸ್ತರಣೆ ಮಾಡದೆ ಸುಮಾರು ಇಲಾಖೆಗಳನ್ನು ಮುಖ್ಯಮಂತ್ರಿಯೇ ಇಟ್ಟುಕೊಂಡಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ. ಇನ್ನೂ ಬಿಜೆಪಿ ಮತ್ತು ಆರ್.ಎಸ್.ಎಸ್ ನವರು ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಇಳಿಸಿ ಮನೆಗೆ ಕಳಿಸಿದ್ರು. ಬಸವರಾಜ ಬೊಮ್ಮಾಯಿಗೂ ಮತ್ತು ಯಡಿಯೂರಪ್ಪ ಅವರಿಗೂ ಈಗ ಆಗಲ್ಲ ಎಂದು ಹೇಳಿದರು.

ನನಗೊಂದು ಮಂತ್ರಿ ಸ್ಥಾನ ಕೊಡ್ತೀರಾ ಅಂತ ಯಡಿಯೂರಪ್ಪ ನನ್ನ ಬಳಿ ಬಂದಿದ್ರು: ಕುಮಾರಸ್ವಾಮಿ ಹೇಳಿದ್ದೇನು.?ನನಗೊಂದು ಮಂತ್ರಿ ಸ್ಥಾನ ಕೊಡ್ತೀರಾ ಅಂತ ಯಡಿಯೂರಪ್ಪ ನನ್ನ ಬಳಿ ಬಂದಿದ್ರು: ಕುಮಾರಸ್ವಾಮಿ ಹೇಳಿದ್ದೇನು.?

ನರೇಂದ್ರ ಮೋದಿ ಅವರು ನಾವು ಮಾಡಿದ ಕೆಲಸಗಳನ್ನೇ ಉದ್ಘಾಟನೆ ಮಾಡಲು ರಾಜ್ಯಕ್ಕೆ ಬರುತ್ತಿದ್ದಾರೆ. ಹೆಚ್.ಎ.ಎಲ್ ಅನ್ನು ಯು.ಪಿ.ಎ ಅವಧಿಯಲ್ಲಿ ಮಾಡಿದ್ದು ಅದನ್ನು ಉದ್ಘಾಟಿಸುತ್ತಿದ್ದಾರೆ. ಲಂಬಾಣಿ ಜನರಿಗೆ ಮೋದಿಯವರು ಹಕ್ಕುಪತ್ರ ನೀಡಿದ್ರು, ಆ ಕಾನೂನನ್ನು ಮಾಡಿದ್ದು ನಮ್ಮ ಸರ್ಕಾರ. ನಾನು ಮುಖ್ಯಮಂತ್ರಿ ಆಗಿದ್ದಾಗ ಕಂದಾಯ ಸಚಿವರಾಗಿದ್ದ ಕಾಗೋಡು ತಿಮ್ಮಪ್ಪನವರು ವಾಸಿಸುವನೆ ಮನೆಯೊಡೆಯ ಎಂಬ ಕಾಯ್ದೆ ತಂದವರು ನಾವು. ನಾನು ಒಂದು ಸಮಿತಿ ಮಾಡಿ, ಅಧಿಕಾರಿಯನ್ನು ನೇಮಿಸಿ, ಅವರಿಂದ ವರದಿ ಪಡೆದು ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ಮಾಡಿದ್ದು, ನಾವು ಅಡುಗೆ ಮಾಡಿದ್ವಿ, ಮೋದಿ ಅವರು ಬಂದು ಬಡಿಸುತ್ತಿದ್ದಾರೆ.

BJP May Get 50 To 60 Seats Said Siddaramaiah

ಬಿಜೆಪಿಯವರಿಗೆ ನರೇಂದ್ರ ಮೋದಿ ಅವರೇ ಬಂಡವಾಳ. ರಾಜ್ಯ ಬಿಜೆಪಿ ಸರ್ಕಾರ 40% ಕಮಿಷನ್ ಹಗರಣದಲ್ಲಿ ಮುಳುಗಿದೆ, ಏನೂ ಕೆಲಸ ಮಾಡಿಲ್ಲ. ವಚನ ಭ್ರಷ್ಟತೆಯಿಂದ ಜನರ ನಂಬಿಕೆ ಕಳೆದುಕೊಂಡಿದ್ದಾರೆ. ನರೇಂದ್ರ ಮೋದಿ ಅವರು ರಾಜ್ಯಕ್ಕೆ ಬಂದು ಹೋದರೆ ತಮಗೆ ಲಾಭವಾಗುತ್ತೆ ಎಂದು ಬಿಜೆಪಿಯವರು ಭಾವಿಸಿದ್ದರೆ ಅದು ತಪ್ಪು ಕಲ್ಪನೆ. ಈಗಾಗಲೇ ರಾಜ್ಯದ ಜನ ಬಿಜೆಪಿಯನ್ನು ಸೋಲಿಸಿ, ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕು ಎಂದು ತೀರ್ಮಾನ ಮಾಡಿದ್ದಾರೆ.

ಬಿಜೆಪಿ ಪಕ್ಷಕ್ಕೆ ಬಹುಮತ ಬಂದರೆ ತಾನೆ ಆ ನಂತರ ಆರ್.ಎಸ್.ಎಸ್ ನವರು ತೀರ್ಮಾನ ಮಾಡೋದು. ಯಾವಾಗ ಅವರಿಗೆ ಬಹುಮತ ಬಂದಿತ್ತು ಹೇಳಿ? 2008 ರಲ್ಲಿ 110 ಸ್ಥಾನ, 2018 ರಲ್ಲಿ 104 ಸ್ಥಾನ, 2013ರಲ್ಲಿ 40 ಸ್ಥಾನ ಬಂದಿತ್ತು, ಈಗ 2023 ರಲ್ಲಿ 50 ರಿಂದ 60 ಸ್ಥಾನ ಬರಬಹುದು.

ಬಿಜೆಪಿ ಸರ್ಕಾರದಲ್ಲಿ ವ್ಯಾಪಕವಾಗಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಗೂಳಿಹಟ್ಟಿ ಶೇಖರ್ ಅವರು ಸತ್ಯ ಹೇಳಿದ್ದಾರೆ. ಬಿಜೆಪಿಯವರು ಕಳ್ಳರು. ವಜ್ಜಲ್ ಅವರು ನಾರಾಯಣಪುರ ಎಡದಂಡೆ ಕಾಲುವೆಯ ಕೆಲಸವನ್ನೇ ಮಾಡದೆ ದುಡ್ಡು ತಗೊಂಡಿದ್ದಾರೆ. 40% ಕಮಿಷನ್ ಹೊಡೆದಿದ್ದಕ್ಕೆ ಕೆಲಸ ಮಾಡದಿದ್ರು ಬಿಲ್ ಕೊಡುತ್ತಾರೆ.

BJP May Get 50 To 60 Seats Said Siddaramaiah

ನಾನು ಆರ್.ಅಶೋಕ್ ಗಿಂತ ಮೊದಲು ರಾಜಕೀಯಕ್ಕೆ ಬಂದಿದ್ದು, 1978 ರಿಂದ ರಾಜಕಾರಣದಲ್ಲಿದ್ದೀನಿ, ಈಗ 45 ವರ್ಷ ಆಯ್ತು. ನನಗಿದು ಕೊನೆ ಚುನಾವಣೆ ಎಂದು ಹೇಳಲು ಅಶೋಕ್ ಗೆ ಯಾವ ನೈತಿಕತೆ ಇದೆ? ನಾನು ಅಶೋಕ್ ಇಂದು ಪಾಠ ಹೇಳಿಸಿಕೊಳ್ಳಬೇಕ? ಎಂದ ಪ್ರಶ್ನಿಸಿದರು.

English summary
Karnataka Assembly Elections 2023; BJP may get 50 to 60 seats said Former Chief Minister siddaramaiah,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X