Lok Sabha Election: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಈ ನಾಯಕರಿಗೆ ಟಿಕೆಟ್‌ ಇಲ್ಲ!? ಬಿಜೆಪಿ ಲೆಕ್ಕಾಚಾರವೇನು?

ಬೆಂಗಳೂರು, ಜೂನ್‌ 02: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಗೆದ್ದು ಅಧಿಕಾರದ ಚುಕ್ಕಾಣಿ ಹಿಡಿಯುವ ಕನಸು ಕಂಡಿದ್ದ ಬಿಜೆಪಿ ಹೀನಾಯವಾಗಿ ಸೋಲು ಕಂಡಿದ್ದು, ಲೋಕಸಭಾ ಚುನಾವಣಾ ತಯಾರಿಗೆ ಸಜ್ಜಾಗಿದೆ.

ಮುಂದಿನ ಲೋಕಸಭಾ ಚುನಾವಣೆಗೆ ಈಗಾಗಲೇ ತಯಾರಿ ಆರಂಭಿಸಿರುವ ಬಿಜೆಪಿ ಹೈಕಮಾಂಡ್ ಈಗಾಗಲೇ ಕರ್ನಾಟಕದಲ್ಲಿರುವ ತನ್ನ ಹಾಲಿ ಸಂಸದರಲ್ಲಿ ಕೆಲವರಿಗೆ ಟಿಕೆಟ್ ನೀಡದೇ ಇರಲು ನಿರ್ಧರಿಸಿದೆ ಎನ್ನಲಾಗಿದೆ.

Lok Sabha Elections 2024

ಈಗಾಗಲೇ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ತಂದ ಬದಲಾವಣೆಯಂತೆ ವಯೋಮಿತಿಯ ಆಧಾರದ ಮೇಲೆ ಹಾಗೂ ಮುಂದಿನ ತಲೆಮಾರಿನ ನಾಯಕರನ್ನು ಬೆಳೆಸುವ ಅನಿವಾರ್ಯತೆ ಇರುವ ದೃಷ್ಟಿಯಲ್ಲಿ ಕೆಲವು ಹಾಲಿ ಸಂಸದರಿಗೆ ಟಿಕೆಟ್ ನೀಡಿರಲು ನಿರ್ಧರಿಸಿದೆ ಎಂದು ಹೇಳಲಾಗಿದೆ.

ಲೋಕಸಭಾ ಚುನಾವಣೆಯಲ್ಲಿ ಕೆಲವು ಹಾಲಿ ಸಂಸದರಿಗೆ ಟೆಕೆಟ್ ಕೊಡದಿರುವಂತೆ ನಿರ್ಧರಿಸಲಾಗಿದ್ದು, ಬೆಂಗಳೂರು ಉತ್ತರ ಕ್ಷೇತ್ರದ ಸಂಸದ, ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ, ಚಿಕ್ಕಬಳ್ಳಾಪುರದ ಸಂಸದ ಬಚ್ಚೇಗೌಡ, ಕೋಲಾರ ಸಂಸದ ಮುನಿಸ್ವಾಮಿ, ಚಾಮರಾಜನಗರದ ಸಂಸದ ಶ್ರೀನಿವಾಸ ಪ್ರಸಾದ್, ವಿಜಯಪುರ ಸಂಸದ ರಮೇಶ್ ಜಿಗಜಿಣಗಿ, ತುಮಕೂರು ಸಂಸದ ಜಿ.ಎಸ್. ಬಸವರಾಜು, ಕೊಪ್ಪಳದ ಸಂಸದ ಸಂಗಣ್ಣ ಕರಡಿ, ದಾವಣಗೆರೆಯ ಸಂಸದ ಜಿ.ಎಂ. ಸಿದ್ದೇಶ್ವರ ಅವರು ಸೇರಿದಂತೆ ಹಲವು ನಾಯಕರಿಗೆ ಈ ಬಾರೀ ಟಿಕೆಟ್‌ ನೀಡದಿರಲು ನಿರ್ಧರಿಸಿದೆ ಎನ್ನಲಾಗಿದೆ.

ಇನ್ನೂ ಈ ನಾಯಕರು ಮಾತ್ರವಲ್ಲದೇ ರಾಜ್ಯ ಬಿಜೆಪಿ ಅಧ್ಯಕ್ಷರಾದ ನಳೀನ್ ಕುಮಾರ್ ಕಟೀಲ್ ಅವರಿಗೂ ಈ ಬಾರಿ ಬಿಜೆಪಿ ಟಿಕೆಟ್ ಸಿಗುವುದು ಅನುಮಾನ ಎಂದು ಹೇಳಲಾಗಿದೆ.ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಸಮರ್ಪಕವಾಗಿ ಮುನ್ನಡೆಸದೇ ಇರುವುದು ನಳೀನ್ ಕುಮಾರ್ ಕಟೀಲ್ ಅವರ ಮೇಲೆ ಬಿಜೆಪಿ ಹೈಕಮಾಂಡ್ ಮುನಿಸಿಕೊಂಡ ಕಾರಣ ಈ ಬಾರೀ ಟಿಕೆಟ್‌ ಸಿಗುವುದು ಅನುಮಾನ ಎನ್ನಲಾಗಿದೆ. ಅಲ್ಲದೇ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಕಾರ್ಯಕರ್ತರು ಕಟೀಲ್‌ ವಿರುದ್ದ ಮುನಿಸಿಕೊಂಡಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದು, ಈ ಬಾರಿ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದೆ.

Lok Sabha Elections 2024

ಇತ್ತ ಅನಾರೋಗ್ಯದ ಕಾರಣದಿಂದಾಗಿ ಪಕ್ಷದ ಕಾರ್ಯಚಟುವಟಿಕೆಯಿಂದ ಅಂತರವನ್ನ ಕಾಯ್ದ ಕೊಡಿರುವ ಉತ್ತರ ಕನ್ನಡ ಕ್ಷೇತ್ರದ ಸಂಸದ ಅನಂತ್ ಕುಮಾರ್ ಹೆಗ್ಡೆಯವರಿಗೂ ಟಿಕೆಟ್ ನಿರಾಕರಿಸುವ ಸಾಧ್ಯತೆಗಳು ದಟ್ಟವಾಗಿವೆ. ಈಗಾಗಲೇ ಹೈಕಮಾಂಡ್‌ ಸಹ ಪಕ್ಷದ ಸಭೆ, ಸಮಾರಂಭಗಳಿಂದ ಅವರಿಗೆ ಆಹ್ವಾನವನ್ನೂ ನೀಡದೇ ದೂರ ಇಟ್ಟಿದೆ ಎಂದು ಹೇಳಲಾಗುತ್ತಿದೆ. ಚುನಾವಣೆ ಸಂದರ್ಭದಲ್ಲಿ ಮೋದಿಯವರು ಚುನಾವಣಾ ಪ್ರಚಾರಕ್ಕಾಗಿ ಉತ್ತರ ಕನ್ನಡಕ್ಕೆ ಬಂದಾಗಲೂ ಅನಂತ ಕುಮಾರ್ ಹೆಗ್ಡೆಗೆ ಆಹ್ವಾನ ಇರಲಿಲ್ಲ ಎಂದು ಹೇಳಲಾಗಿದೆ. ಇದೇ ಕಾರಣಕ್ಕೆ ಈ ಬಾರಿ ಅವರಿಗೆ ಟಿಕೆಟ್ ಸಿಗುವುದು ಅನುಮಾನ ಎನ್ನಲಾಗಿದೆ.

ಇನ್ನೂ ರಾಜ್ಯ ವಿಧಾನಸಭಾ ಚುನಾವಣೆಯಂತೆ ಮುಂದಿನ ಲೋಕಸಭಾ ಚುನಾವಣೆಯಲ್ಲೂ ಇದೇ ರೀತಿಯ ಪ್ರಯೋಗವನ್ನು ಮಾಡಲು ಬಿಜೆಪಿ ನಿರ್ಧರಿಸಿದೆ. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬದಲಾವಣೆಯ ತಂತ್ರಗಾರಿಕೆಯನ್ನು ಅನುಸರಿಸಿದ್ದು ಸರಿಯಾಗಿದೇ ಇತ್ತು. ಆದರೆ, ಬಿಜೆಪಿ ಸರ್ಕಾರದ ಕೆಲವು ಸಚಿವರು ಹಾಗೂ ಶಾಸಕರ ವಿರುದ್ಧ ಭ್ರಷ್ಟಾಚಾರ ಆರೋಪಗಳು ಇದ್ದಿದ್ದರಿಂದ ಬಿಜೆಪಿಯ ಪ್ರಯೋಗಗಳು ಫಲಿಸಲಿಲ್ಲ.

2024 ರ ಲೋಕಸಭಾ ಚುನಾವಣೆಯಲ್ಲಿ ಖಂಡಿತವಾಗಿಯೂ ಪ್ರಧಾನಿ ಮೋದಿಯವರ ಪ್ರಭಾವ ಹೆಚ್ಚಾಗಿ ಕೆಲಸ ಮಾಡುತ್ತದೆ. ಗೆಲುವು ಬಿಜೆಪಿಗೆ ಕಟ್ಟಿಟ್ಟ ಬುತ್ತಿ ಎಂಬ ಲೆಕ್ಕಾಚಾರವನ್ನ ಬಿಜೆಪಿ ಹಾಕಿಕೊಂಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+