ವಿಧಾನ ಪರಿಷತ್‍ ಚುನಾವಣೆ: ಬಿಜೆಪಿಗೆ 3 ಸ್ಥಾನ, ಜೆಡಿಎಸ್‌ 1: ಕೋರ್‌ ಕಮಿಟಿ ಸಭೆಯಲ್ಲಿ ಚರ್ಚೆಯಾಗಿದ್ದೇನು?

ಬೆಂಗಳೂರು: ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯು ಇಂದು ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಭೆಯಲ್ಲಿ ಹಲವು ವಿಚಾರಗಳ ಕುರಿತು ಚರ್ಚೆ ನಡೆದಿದ್ದು, ಮುಂದಿನ ಅಕ್ಟೋಬರ್ ನಲ್ಲಿ ನಡೆಯುವ ವಿಧಾನ ಪರಿಷತ್‍ನ ಚುನಾವಣೆ ಕುರಿತು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರು ಮಹತ್ವದ ಮಾಹಿತಿಯನ್ನ ಹಂಚಿಕೊಂಡಿದ್ದಾರೆ.

ಕೋರ್‌ ಕಮಿಟಿ ಸಭೆಯ ಬಳಿಕ ಮಾಧ್ಯಮಗಳ ಜೊತೆಗೆ ಬಿ ವೈ ವಿಜಯೇಂದ್ರ ಅವರು ಮಾತನಾಡಿ, ವಿಧಾನಪರಿಷತ್ ಚುನಾವಣೆ ಸಂಬಂಧವೂ ಮಾತುಕತೆ ನಡೆಸಲಾಯಿತು. ಮುಂದಿನ ಅಕ್ಟೋಬರ್ ನಲ್ಲಿ ವಿಧಾನ ಪರಿಷತ್‍ನ ನಾಲ್ಕು ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಈಗಾಗಲೇ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿ ಘೋಷಣೆ ಮಾಡಲಾಗಿದೆ. ಇನ್ನು ಒಂದು ಕ್ಷೇತ್ರಕ್ಕೆ ಜೆಡಿಎಸ್ ಜೊತೆ ಸಮಾಲೋಚನೆ ಮಾಡಿ ಘೋಷಣೆ ಮಾಡಲಾಗುವುದು. ಯಾರನ್ನು ಕಣಕ್ಕಿಳಿಸಬೇಕು ಎಂದು ತೀರ್ಮಾನ ಮಾಡಲಾಗುವುದು ಎಂದು ಹೇಳಿದರು.

BJP Meeting elections will be held for four Legislative Council in October BY Vijayendra said

ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ಭೀಕರ ಬರವಿದೆ. ಆದರ ಬಗ್ಗೆ ಗಮನ ಹರಿಸಬೇಕಾದ ರಾಜ್ಯ ಸರ್ಕಾರ ಕೈಕಟ್ಟಿ ಕೂತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಆರೋಪಿಸಿದ್ದಾರೆ. ಸರಿಯಾದ ಪ್ರಮಾಣದಲ್ಲಿ ಮಳೆಯಾಗದೆ ರೈತರಿಗೆ ತೊಂದರೆಯಾಗಿದೆ. ಆದರೆ ಕಾಂಗ್ರೆಸ್ ಸರ್ಕಾರ ಈ ಬಗ್ಗೆ ಗಮನ ಹರಿಸದೆ ಸುಮ್ಮನೆ ಕುಳಿತಿದೆ ಎಂದರು.

ಮುಂಬರುವ ಅಧಿವೇಶನದಲ್ಲಿ ನಾಡಿನ ರೈತರ ಒಳಿತಿಗಾಗಿ ಬಿಜೆಪಿ ಕೆಲಸ ಹೋರಾಡಲಿದೆ. ಸದನದ ಕಲಾಪವನ್ನು ಹೇಗೆ ಸದ್ಬಳಕೆ ಮಾಡಿಕೊಳ್ಳಬೇಕು, ರೈತರ ಧ್ವನಿಯಾಗಿ ಯಾವ ವಿಚಾರಗಳನ್ನು ಮಂಡನೆ ಮಾಡಬೇಕು ಎಂಬ ವಿಷಯಗಳ ಕುರಿತು ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಸದನದ ಒಳಗೆ ಮತ್ತು ಹೊರಗೆ ಬಿಜೆಪಿ ರಾಜ್ಯದ ಜನತೆ ಪರವಾಗಿ ಹೋರಾಡಲಿದೆ ಎಂದರು.

ಕೆಪಿಎಸ್‍ಸಿಯಲ್ಲಿ ನಡೆದಿರುವ ಹಗರಣದ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಕೆಪಿಎಸ್‍ಸಿಯಿಂದ ಯುವಕರಿಗೆ ದೊಡ್ಡ ಅನ್ಯಾಯವಾಗಿದೆ. ವರ್ಷಾನುಗಟ್ಟಲೆ ಓದಿ, ಶ್ರಮ ಹಾಕಿದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಅವರ ಶ್ರಮಕ್ಕೆ ಸರಿಯಾದ ಫಲ ಸಿಕ್ಕಿಲ್ಲ. ಈ ಬಗ್ಗೆ ವಿಧಾನಮಂಡಲ ಅಧಿವೇಶನದಲ್ಲಿ ಚರ್ಚೆ ಮಾಡಲಾಗುವುದು ಎಂದರು.

ಬಿಡದಿ ಟೌನ್‍ಶಿಪ್ ವಿರುದ್ಧ ನಡೆಸಲು ತೀರ್ಮಾನಿಸಿರುವ ಪಾದಯಾತ್ರೆ ಸಂಬಂಧ ಯಾವುದೇ ಗೊಂದಲ ಇಲ್ಲ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಮಾತನಾಡಿದ್ದೇನೆ. ಅವರು ದಿನಾಂಕ ಘೋಷಣೆ ಮಾಡಿದ್ದಾರೆ. ಬಿಡದಿ ಟೌನ್‍ಶಿಪ್ ಬಗ್ಗೆಯೂ ಸದನದಲ್ಲಿ ಮಾತನಾಡುತ್ತೇವೆ ಎಂದು ತಿಳಿಸಿದರು.

ಕಾವೇರಿ ನೀರಿನ ಹಂಚಿಕೆ ಸಂಬಂಧ ತಮಿಳುನಾಡಿನ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೇನೆ. ಎರಡೂ ರಾಜ್ಯಗಳ ಜನರು ಒಂದಾಗಿ ಅನ್ಯೋನ್ಯವಾಗಿ ಇರಬೇಕು ಎಂಬುದೇ ಮುಖ್ಯ ಉದ್ದೇಶ. ಕಾವೇರಿ ಮತ್ತು ಮೇಕೆದಾಟು ಬಗ್ಗೆ ಪತ್ರದಲ್ಲಿ ತಿಳಿಸಿದ್ದೇನೆ. ಎರಡು ರಾಜ್ಯಗಳ ಮುಖ್ಯಮಂತ್ರಿಗಳು ಮನಸು ಮಾಡಿದರೆ ಎಲ್ಲ ಸಮಸ್ಯೆ ಬಗೆಹರಿಸಲು ಸಾಧ್ಯವಿದೆ ಎಂದು ಹೇಳಿದÀರು.

ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳಿದ್ದಾಗ ಸರ್ವಜ್ಞ ಮತ್ತು ತಿರುವಳ್ಳುವರ್ ಪ್ರತಿಮೆ ವಿವಾದ ಭುಗಿಲೆದ್ದಿತ್ತು. ದಶಕಗಳಿಂದ ವಿವಾದ ಬಗೆಹರಿಯದೇ ಹಾಗೇ ಉಳಿದಿತ್ತು. ಬಿಎಸ್‍ವೈ ಅವರು ಮುತುವರ್ಜಿ ವಹಿಸಿ ಅಂದಿನ ತಮಿಳುನಾಡು ಮುಖ್ಯಮಂತ್ರಿಗಳಾದ ಕರುಣಾನಿಧಿ ಅವರ ಜೊತೆ ಮಾತನಾಡಿ ಸೌಹಾರ್ದಯುತವಾಗಿ ವಿವಾದವನ್ನು ಪರಿಹಾರ ಮಾಡಿದ್ದರು. ಇದೇ ರೀತಿ ಕಾವೇರಿ ನೀರಿನ ಹಂಚಿಕೆ ವಿಚಾರದಲ್ಲಿ ಉಭಯ ರಾಜ್ಯಗಳ ಮುಖ್ಯಮಂತ್ರಿಗಳು ಮನಸು ಮಾಡಬೇಕಿದೆ ಎಂದರು.

ಮೇಕೆದಾಟು ಸಂಬಂಧ ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಈ ಸಂಬಂಧ ತಮಿಳುನಾಡಿಗೆ ಅನ್ಯಾಯವಾಗುವುದಿಲ್ಲ. ಮೇಕೆದಾಟು ಜಾರಿಯಾದರೆ ಕುಡಿಯುವ ನೀರಿಗೆ ತೊಂದರೆಯಾಗುವುದಿಲ್ಲ. ಎರಡೂ ರಾಜ್ಯಗಳ ಮುಖ್ಯಮಂತ್ರಿಗಳು ಕುಳಿತು ಮಾತುಕತೆ ನಡೆಸಿ ಸರಿಯಾದ ತೀರ್ಮಾನ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ರಾಜ್ಯ ಉಸ್ತುವಾರಿ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ. ರಾಧಾಮೋಹನ್ ದಾಸ್ ಅಗ್ರವಾಲ್, ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ವಿಪಕ್ಷ ನಾಯಕರಾದ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ, ನಿಕಟಪೂರ್ವ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್, ರಾಜ್ಯ ಸಹ-ಉಸ್ತುವಾರಿ ಪಿ. ಸುಧಾಕರ್ ರೆಡ್ಡಿ, ಮಾಜಿ ಉಪಮುಖ್ಯಮಂತ್ರಿ ಮತ್ತು ಶಾಸಕ ಡಾ. ಸಿ.ಎನ್. ಅಶ್ವತ್ಥನಾರಾಯಣ್, ಮಾಜಿ ಸಚಿವ ಬಿ. ಶ್ರೀರಾಮುಲು, ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ, ಪುದುಚೇರಿ ರಾಜ್ಯ ಉಸ್ತುವಾರಿ ನಿರ್ಮಲ್ ಕುಮಾರ್ ಸುರಾನಾ ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+