• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅರವಿಂದ ಲಿಂಬಾವಳಿಗೆ ಪಶ್ಚಿಮ ಬಂಗಾಳ ಚುನಾವಣೆ ಹೊಣೆ

|
Google Oneindia Kannada News

ಬೆಂಗಳೂರು, ಮಾರ್ಚ್ 6: ಪಶ್ಚಿಮ ಬಂಗಾಳದ ವಿಧಾನಸಭೆಯ 294 ಕ್ಷೇತ್ರಗಳಿಗೆ ಮಾರ್ಚ್ 27ರಿಂದ ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಈ ಬಾರಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ಗೆ ಬಿಜೆಪಿ ಪ್ರಮುಖ ಎದುರಾಳಿ ಎಂದು ಪರಿಗಣಿಸಲಾಗಿದೆ. ಮಮತಾ ಬ್ಯಾನರ್ಜಿ ಅವರನ್ನು ಅಧಿಕಾರದಿಂದ ಕೆಳಗಿಳಿಸಿ, ಎಡಪಂಥೀಯರ ನಾಡಿನಲ್ಲಿ ಕೇಸರಿ ಬಾವುಟ ಹಾರಿಸುವುದು ಬಿಜೆಪಿಯ ಗುರಿ. ಅದಕ್ಕಾಗಿ ವ್ಯಾಪಕ ಪ್ರಚಾರ ಕಾರ್ಯಗಳು, ಹೊಸ ತಂತ್ರಗಳನ್ನು ನಡೆಸುತ್ತಿದೆ.

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಕ್ಷವನ್ನು ತಳಮಟ್ಟದಲ್ಲಿ ಬಲಪಡಿಸಲು ಮತ್ತು ಚುನಾವಣಾ ತಂತ್ರಗಳನ್ನು ನಡೆಸಲು ವಿವಿಧ ನಾಯಕರಿಗೆ ಜವಾಬ್ದಾರಿಗಳನ್ನು ನೀಡಲಾಗಿದೆ. ರಾಜ್ಯ ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಅವರಿಗೂ ಚುನಾವಣೆಯ ಹೊಣೆಗಾರಿಕೆ ನೀಡಲಾಗಿದೆ.

ಚುನಾವಣೆ ಸಮೀಪದಲ್ಲೇ ತೃಣಮೂಲ ಕಾಂಗ್ರೆಸ್‌ಗೆ ಮತ್ತೊಂದು ಹೊಡೆತಚುನಾವಣೆ ಸಮೀಪದಲ್ಲೇ ತೃಣಮೂಲ ಕಾಂಗ್ರೆಸ್‌ಗೆ ಮತ್ತೊಂದು ಹೊಡೆತ

ದಕ್ಷಿಣ 24 ಪರಗಣ ಜಿಲ್ಲೆಯ ಪೂರ್ವ ಭಾಗದ ಐದು ವಿಧಾನಸಭಾ ಕ್ಷೇತ್ರಗಳಲ್ಲಿನ ಜವಾಬ್ದಾರಿಯನ್ನು ಲಿಂಬಾವಳಿ ಅವರಿಗೆ ಕೊಡಲಾಗಿದೆ. ಬರುಯಿಪುರ್ ಪೂರ್ಬಾ, ಕಾನ್ನಿಂಗ್ ಪಶ್ಚಿಮ್, ಕಾನ್ನಿಂಗ್ ಪೂರ್ಬಾ, ಬರುಯಿಪುರ್ ಪಶ್ಚಿಮ್ ಮತ್ತು ಮಾಗ್ರಹಟ್ ಪೂರ್ಬಾ ಕ್ಷೇತ್ರಗಳಲ್ಲಿ ಅರವಿಂದ್ ಲಿಂಬಾವಳಿ ಅವರು ಪಕ್ಷದ ಪರ ಚಟುವಟಿಕೆಗಳನ್ನು ನಡೆಸಲಿದ್ದಾರೆ.

ಪಶ್ಚಿಮ ಬಂಗಾಳದ ಚುನಾವಣೆ ಜವಾಬ್ದಾರಿ ಕುರಿತಾದ ಸಭೆಗೆ ಹೈಕಮಾಂಡ್‌ನಿಂದ ಕರೆ ಬಂದಿದ್ದರಿಂದ ಅರವಿಂದ ಲಿಂಬಾವಳಿ ಅವರು ಶುಕ್ರವಾರದ ಕಲಬುರಗಿ ಪ್ರವಾಸ ರದ್ದುಗೊಳಿಸಿ ದೆಹಲಿಗೆ ತೆರಳಿದ್ದರು.

English summary
State BJP Minister Arvind Limbavali was given responsiblity in 5 constituencies of West Bengal assembly.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X