• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಬಿಟ್‌ಕಾಯಿನ್ ಅಕ್ರಮದ ದಾಖಲೆಗಳನ್ನು ಬಿಜೆಪಿ ಮಂತ್ರಿಗಳೇ ಕೊಡುತ್ತಿದ್ದಾರೆ: ಡಿ.ಕೆ. ಶಿವಕುಮಾರ್.

|
Google Oneindia Kannada News

ಬೆಂಗಳೂರು, ನ.12: ಬಿಟ್‌ಕಾಯಿನ್ ವಿಚಾರ ಬಿಟ್ಟುಬಿಡಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ ಮಾತ್ರಕ್ಕೆ ನಾವು ಯಾಕೆ ಬಿಡಬೇಕು? ಬಿಜೆಪಿ ಸರ್ಕಾರದ ಮಂತ್ರಿಗಳೇ ದಾಖಲೆ ಕೊಡುತ್ತಿದ್ದಾರೆ. ಸೂಕ್ತ ಸಮಯದಲ್ಲಿ ಬಿಡುಗಡೆ ದಾಖಲೆಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

'ಬಿಟ್ ಕಾಯಿನ್ ಪ್ರಕರಣ ಸಂಬಂಧ 100 ಪರ್ಸೆಂಟ್ ದಾಖಲೆ ಸಂಗ್ರಹಿಸುತ್ತಿದ್ದೇವೆ. ಸೂಕ್ತ ಸಮಯ ಬಂದಾಗ ಅದನ್ನು ಬಿಡುಗಡೆ ಮಾಡುತ್ತೇವೆ. ನಾವು ಹೋಗಿ ಯಾವುದೇ ದಾಖಲೆ ಹುಡುಕುತ್ತಿಲ್ಲ. ಸರಕಾರದ ಮಂತ್ರಿಗಳು, ಅಧಿಕಾರಿಗಳೇ ನಮಗೆ ಅದನ್ನು ಒದಗಿಸುತ್ತಿದ್ದಾರೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

ಬಿಟ್‌ಕಾಯಿನ್ ವಿಚಾರವನ್ನು ಬಿಟ್ಟುಬಿಡಿ ಎಂದು ಪ್ರಧಾನಮಂತ್ರಿಗಳು ಹೇಳಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ದೆಹಲಿಯಲ್ಲಿ ಹೇಳಿದ್ದಾರೆ. ಪ್ರಧಾನಿಯವರು ಬಿಟ್ಟುಬಿಡಿ ಎಂದ ಮಾತ್ರಕ್ಕೆ ನಾವ್ಯಾಕೆ ಬಿಟ್ಟುಬಿಡಬೇಕು? ಇದು ಜನರ ವಿಚಾರ. ದೇಶದಲ್ಲಿ ಅವ್ಯವಹಾರ ಯಾರೇ ಮಾಡಿದರೂ ತಪ್ಪೇ. ಅದು ಕಾಂಗ್ರೆಸ್ ಅವರಾಗಲಿ, ಬೇರೆ ಪಕ್ಷದವರಾಗಲಿ, ಜನರೇ ಆಗಲಿ. ಅದರ ಸತ್ಯಾಂಶ ಏನು ಎಂಬುದು ತಿಳಿಯಬೇಕು. ಪೊಲೀಸರು ಮಾಡಿದ ತನಿಖೆಯನ್ನು ಈಗ ಇ.ಡಿ.ಗೆ ನೀಡಿದ್ದೇವೆ ಎಂದು ಹೇಳುತ್ತಿದ್ದಾರೆ. ಒಂದು, ಐದು, ಹತ್ತು, ಸಾವಿರ ಹೀಗೆ ಎಷ್ಟು ಬಿಟ್‌ಕಾಯಿನ್ ಅವ್ಯವಹಾರ ಆಗಿದೆಯೋ. ಆ ಸತ್ಯಾಂಶವನ್ನು ಹೊರಗಿಡಬೇಕು ಅಷ್ಟೇ' ಎಂದು ಉತ್ತರಿಸಿದರು.

ಪ್ರಧಾನಿ ಬಳಿ ಚರ್ಚಿಸುವ ಅಗತ್ಯವೇನಿತ್ತು?

ವಿರೋಧ ಪಕ್ಷವಾಗಿ ಮಾಧ್ಯಮಗಳ ವರದಿ, ಅಧಿಕಾರಿಗಳಿಂದ ಪಡೆದ ಮಾಹಿತಿಗಳ ಆಧಾರದ ಮೇಲೆ ನಾವು ಆರೋಪ ಮಾಡುತ್ತೇವೆ. ಮಾಧ್ಯಮಗಳು ಕೂಡ ಸುಖಾಸುಮ್ಮನೆ ವರದಿ ಮಾಡುತ್ತವೆಯೇ? ಇದು ಗಂಭೀರ ವಿಚಾರವಲ್ಲದಿದ್ದರೆ ಇದನ್ನು ಪ್ರಧಾನಮಂತ್ರಿಗಳ ಜತೆ ಚರ್ಚೆ ಮಾಡುವ ಅಗತ್ಯವೇನಿತ್ತು? ಉನ್ನತ ಮಟ್ಟದ ಚರ್ಚೆಯಾಗಿದೆ ಎಂದರೆ ಇದು ಪ್ರಮುಖ ವಿಚಾರವೇ ಅಲ್ಲವೇ? ಈ ಪ್ರಕರಣದಲ್ಲಿ ಯಾವ ಅಧಿಕಾರಿಗಳು, ಯಾರೆಲ್ಲಾ ಭಾಗಿಯಾಗಿದ್ದಾರೆ ಎಂಬ ಮಾಹಿತಿ ನಮ್ಮ ಬಳಿಯೂ ಇದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

ಸಿಸಿಬಿ ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ 31 ಬಿಟ್ ಕಾಯಿನ್ ವಶಪಡಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಆ ಬಿಟ್ ಕಾಯಿನ್ ಈಗ ಎಲ್ಲಿದೆ? ಯಾರ ಬಳಿ ಇದೆ? ಯಾರು ಸೀಜ್ ಮಾಡಿದ್ದಾರೆ? ಅದರ ಪಂಚನಾಮಗಳಾಗಿವೆಯೇ? ಇವೆಲ್ಕವನ್ನೂ ಸರ್ಕಾರ ಜನರ ಮುಂದೆ ಇಡಬೇಕು ಎಂದು ಒತ್ತಾಯಿಸಿದರು.

ಬಿಟ್ ಕಾಯಿನ್ ಹಗರಣದಲ್ಲಿ ಕಾಂಗ್ರೆಸ್ ಗಂಭೀರ ಆರೋಪ ಮಾಡುತ್ತಿದ್ದರೂ ಬಿಜೆಪಿ ಅದನ್ನು ಲೆಕ್ಕಕ್ಕೆ ತೆಗೆದುಕೊಳ್ಳುತ್ತಿಲ್ಲ. ಬಿಜೆಪಿ ಸರ್ಕಾರ ಈ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದೆ. ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ಈ ಬಗ್ಗೆ ಸಾಕಷ್ಟು ಮಾತನಾಡಿದ್ದು, ನಿನ್ನೆ ಕುಮಾರಸ್ವಾಮಿ ಅವರೂ ಹೇಳಿಕೆ ನೀಡಿದ್ದಾರೆ. ಸರ್ಕಾರ ಪ್ರಕರಣದ ವಿಚಾರವಾಗಿ ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ಮಾಹಿತಿಯಲ್ಲಿ ಅವರಿಗೆ ಅನುಕೂಲವಾಗುವ ಅಂಶಗಳನ್ನು ಮಾತ್ರ ಬಿಡುಗಡೆ ಮಾಡುತ್ತಿದೆ ಎಂದರು.

BJP Ministers Giving Documents o Bitcoin Scam says KPCC President DK Shivakumar

ಪ್ರಧಾನಿಯೇ ಹೀಗೆ ಹೇಳಿದರೆ ಹೇಗೆ?

ಕರ್ನಾಟಕದಲ್ಲಿ ಬಿಟ್‌ಕಾಯಿನ್ ಹಗರಣ ಸಂಬಂಧ ಪ್ರಧಾನಿಯವರ ಹೇಳಿಕೆಯನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

"ಆರೋಪದ ತನಿಖೆ ನಡೆಸಿ ಆರೋಪವನ್ನು ಸುಳ್ಳೆಂದು ಸಾಬೀತುಪಡಿಸಿ ಎಂದು ಹೇಳಬೇಕಾಗಿದ್ದ ಪ್ರಧಾನಿಯವರೇ ಆರೋಪವನ್ನು ನಿರ್ಲಕ್ಷಿಸಿ ಎಂದು ಹೇಳಿದರೆ ಹೇಗೆ? ಎಂದು ಸಿದ್ದರಾಮಯ್ಯ ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ.

ಅಪರಾಧಗಳ ತನಿಖೆಗೆ ಪೊಲೀಸ್ ಇಲಾಖೆ, ನ್ಯಾಯಾಲಯಗಳ ಅಗತ್ಯ ಇಲ್ಲವೇ? ಪ್ರಧಾನಿಯವರ ಏಕಪಕ್ಷೀಯ ತೀರ್ಮಾನವೇ ಅಂತಿಮವೇ? ಎಂದು ಸಿದ್ದರಾಮಯ್ಯ ಕೇಳಿದ್ದಾರೆ.

ಬಿಟ್‌ಕಾಯಿನ್ ಹಗರಣದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗಿಯೋ, ಇಲ್ಲವೋ ನಮಗೆ ಗೊತ್ತಿಲ್ಲ. ಅವರು ಅಪರಾಧಿಗಳೆಂದು ಯಾರೂ ಹೇಳಿಲ್ಲ. ನಿಸ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರನ್ನು ಶಿಕ್ಷಿಸಿ ಎಂದಷ್ಟೇ ನಾನು ಮತ್ತು ನನ್ನ ಪಕ್ಷದ ನಾಯಕರು ಹೇಳುತ್ತಿರುವುದು. ತನಿಖೆ ನಡೆಸಲು ಹಿಂಜರಿಕೆ ಯಾಕೆ? ಎಂದು ಸಿದ್ದರಾಮಯ್ಯ ಕೇಳಿದ್ದಾರೆ.

ಕಾಂಗ್ರೆಸ್ ನಾಯಕರ ಹೆಸರು ಇದೆ ಎಂದು ಹೇಳಿ ನಮ್ಮ ಬಾಯಿ ಮುಚ್ಚಿಸಲು ಪ್ರಯತ್ನ ಮಾಡಬೇಡಿ. ಕೇಂದ್ರ ಮತ್ತು ರಾಜ್ಯದಲ್ಲಿ ನಿಮ್ಮದೇ ಸರ್ಕಾರ ಇದೆ. ತನಿಖೆ ನಡೆಸಿ ಅಪರಾಧಿಗಳನ್ನು ಬಯಲಿಗೆಳೆಯಿರಿ. ಅವರೆಲ್ಲರೂ ಯಾವ ಪಕ್ಷದವರು ಎನ್ನುವುದನ್ನು ಆಮೇಲೆ ನೋಡಿಕೊಳ್ಳೋಣ ಎಂದು ಸಿದ್ದರಾಮಯ್ಯ ಟ್ವೀಟ್ ಮೂಲಕ ಹೇಳಿದ್ದಾರೆ.

   ರೇಡಿಯೋದಿಂದ ರಾಜಕೀಯದ ವರೆಗೂ ಲಾವಣ್ಯ ನಡೆದು ಬಂದ ಹಾದಿ | Oneindia Kannada
   ಡಿ.ಕೆ. ಶಿವಕುಮಾರ
   Know all about
   ಡಿ.ಕೆ. ಶಿವಕುಮಾರ
   English summary
   BJP Ministers Giving Documents o Bitcoin Scam says KPCC President DK Shivakumar, we will release at the right time.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X