ಬಿಜೆಪಿಯಲ್ಲಿ ಶುರುವಾಯ್ತು ಆತಂಕ; ವಯಸ್ಸಾದ ಶಾಸಕರಿಗೆ ಕೊಕ್ ಕೊಡುತ್ತಾ ಬಿಜೆಪಿ?: ಸುಳಿವು ಕೊಟ್ಟ ಶಾಸಕ ಬೆಲ್ಲದ್
ಧಾರವಾಡ,ಮಾರ್ಚ್11: 2023 ರ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಒಂದು ಕಡೆ ಬಿಜೆಪಿಯ ಹಾಲಿ ನಾಯಕರಿಗೆ ಟಿಕೆಟ್ ಕೈ ತಪ್ಪುವ ಆತಂಕ ಶುರುವಾಗಿದೆ.
ಹೌದು ಸಂಸದೀಯ ಮಂಡಳಿಯ ಸದಸ್ಯರು ಹಾಗೂ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನವರ ಹೇಳಿಕೆಯಿಂದಾಗಿ ಹಿರಿಯ ಕಮಲ ಕಲಿಗಳಿಗೆ ಈ ಬಾರೀ ಚುನಾವಣೆಗೆ ಟಿಕೆಟ್ ಕೈ ತಪ್ಪುವ ಆತಂಕ ಶುರುವಾಗಿದೆ. ಈಗಾಗಲೇ ಮಿಷನ್ 150 ಟಾರ್ಗೆಟ್ ಇಟ್ಟುಕೊಂಡಿರುವ ಬಿಜೆಪಿ ಅಧಿಕಾರದಲ್ಲಿದ್ದು ಮುಂದಿನ ಚುನಾವಣೆಯಲ್ಲಿ ಪಕ್ಷ ಸೋಲು ಕಂಡರೆ ಮುಜಗರಕ್ಕೆ ಒಳಗಾಗಬಹುದು ಎಂದು ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲು ಬಿಜೆಪಿ ಚಿಂತನೆ ನಡೆಸಿದೆ ಎನ್ನಲಾಗಿದೆ.

ಈ ಕುರಿತು ಶಾಸಕ ಅರವಿಂದ್ ಬೆಲ್ಲದ್ ಮಾತನಾಡಿ, ಪಕ್ಷದಲ್ಲಿನ ಹಳೆಯ ಹಾಗೂ ವಯಸ್ಸಾದ ಶಾಸಕರು ಕೂಡ ಇದ್ದಾರೆ. ಅವರಿಗೆ ವಯಸ್ಸಾದ ಕಾರಣಕ್ಕೆ ಪಕ್ಷ ಅವರಿಗೆ ಟಿಕೆಟ್ ನೀಡದೇ ಇರಬಹುದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಈ ಬಾರೀ ನಾಲ್ಕಾರು ಹಾಲಿ ಶಾಸಕರಿಗೆ ಟಿಕೆಟ್ ಕೈ ತಪ್ಪುತ್ತದೆ ಎಂಬ ಹೇಳಿಕೆಗೆ ಇದೀಗ ಶಾಸಕ ಅರವಿಂದ್ ಬೆಲ್ಲದ್ ಕೂಡ ಪುಷ್ಠಿ ನೀಡಿದ್ದಾರೆ.
ಹೀಗಿರುವಾಗ ಪಕ್ಷದಲ್ಲಿ ಪಕ್ಷದಲ್ಲಿ ವಯಸ್ಸಾದವರು ತಾವಾಗಿಯೇ ಟಿಕೆಟ್ ಬೇಡ ಎನ್ನಬುಹುದು. 224 ಕ್ಷೇತ್ರಗಳಲ್ಲಿ 121 ಕ್ಷೇತ್ರದಲ್ಲಿ ಮೂರ್ನಾಲ್ಕು ಜನ ಇದ್ದೇ ಇರುತ್ತಾರೆ ಅದನ್ನ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನವರು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ. ಪಕ್ಷದಲ್ಲಿ ಯಾರಿಗೆ ನೀಡಬೇಕು ಎಂಬ ಬಗ್ಗೆ ಹೈಕಮಾಂಡ್ ನಿರ್ಧರಿಸಲಿದೆ ಎಂದು ಶಾಸಕ ಅರವಿಂದ್ ಬೆಲ್ಲದ್ ಹೇಳಿದರು.
ಇನ್ನೂ ಯಾವ ಕ್ಷೇತ್ರದಲ್ಲಿ ಬಿಜೆಪಿ ವಿರೋಧಿ ಅಲೆ ರದುರಿಸುತ್ತಿದೆ ಎಂಬ ಬಗ್ಗೆ ಈಗಾಗಲೇ ಹೈಕಮಾಂಡ್ ಮಾಹಿತಿ ಪಡೆದುಕೊಂಡಿದ್ದು, ಯಾರಿಗೆ ಟಿಕೆಟ್ ನೀಡಬೇಕು ಎಂಬ ಕುರಿತು ಚಿಂತನೆ ನಡೆಸಿದೆ. ಬಿಜೆಪಿಯ 6 ಮಂದಿ ಶಾಸಕರಿಗೆ ಟಿಕೆಟ್ ಕೈ ತಪ್ಪುವ ಆತಂಕ ಶುರುವಾಗಿದೆ.

ಈ ಬಾರಿ ಚುನಾವಣೆಯಲ್ಲಿ ಮಾಜಿ ಸಚಿವರಾದ ಕೆ.ಎಸ್ ಈಶ್ವರಪ್ಪ, ಮೂಡಿಗೆರೆ ಶಾಸಕರಾದ ಎಂ.ಪಿ ಕುಮಾರಸ್ವಾಮಿ, ಕನಕಗಿರಿ ಶಾಸಕ ಬಸವರಾಜ ದಡೆಸೂರು ಸೇರಿದಂತೆ ಕೆಲ] ಹಿರಿಯ ನಾಯಕರಿಗೆ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದೆ ಎನ್ನಲಾಗಿದೆ. ಈಗಾಗಲೇ ಬಿಜೆಪಿ ವಿರೋಧಿ ಅಲೆ ಇರುವ ಕ್ಷೇತ್ರಗಳಲ್ಲಿ ದೆಹಲಿ ಮೂಲದ ಖಾಸಗಿ ಸಂಸ್ಥೆಯಿಂದ ಸಮೀಕ್ಷೆ ನಡೆಸಿದ್ದು, ಹಳಬರಿಗೆ ಟಿಕೆಟ್ ನೀಡುವ ಬದಲು ಹೊಸ ಮುಖಗಳಿಗೆ ಟಿಕೆಟ್ ನೀಡುವ ಮೂಲಕ ಕ್ಷೇತ್ರ ಉಳಿಸಿಕೊಳ್ಳುವ ಪ್ಲಾನ್ ಅನ್ನ ಬಿಜೆಪಿ ನಾಯಕರು ಮಾಡಿದ್ದಾರೆ ಎನ್ನಲಾಗಿದೆ.
ಇನ್ನೂ ಈ ಬಾರಿ ಆರ್ ಎಸ್ ಎಸ್ ಹಾಗೂ ಸಂಘ ಪರಿವಾರದ ಹಿನ್ನೆಲೆಯುಳ್ಳ ಹಾಗೂ ಸಮಾನದಲ್ಲಿ ಒಂದಿಷ್ಟು ಹೆಸರು ಗಳಿಸಿರುವ ಹೊಸ ಮುಖಗಳನ್ನ ಕಣಕ್ಕಿಳಿಸಲು ಬಿಜೆಪಿ ಚಿಂತನೆ ನಡೆಸಿದ್ದು, ಅದರಂತೆ ಸೋಲು ಎದುರಾಗಿರುವ ಕ್ಷೇತ್ರಗಳಲ್ಲಿ ಪಕ್ಷ ಹಾಗೂ ಅಭ್ಯರ್ಥಿಗಳ ಕುರಿತು ಮಾಹಿತಿ ಕಲೆ ಹಾಕುವ ಸಿದ್ದತೆ ನೆರಸಿದೆ ಎನ್ನಲಾಗಿದೆ.












Click it and Unblock the Notifications