Basangouda Patil Yatnal: ಪಕ್ಷದಿಂದ ಉಚ್ಚಾಟನೆ ಸುದೀರ್ಘ ಪತ್ರ ಬರೆದ ಬಸನಗೌಡ ಪಾಟೀಲ್ ಯತ್ನಾಳ್
Basangouda Patil Yatnal: ಬಿಜೆಪಿಯ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸುದೀರ್ಘ ಪತ್ರ ಬರೆದಿದ್ದಾರೆ. ಕೆಲ ರಾಜಕೀಯ ಪಟ್ಟಭದ್ರರು, ಅಡ್ಜಸ್ಟ್ಮೆಂಟ್ ರಾಜಕಾರಣದ ಹರಿಕಾರರಿಂದ ಲೋಕ ಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ತೀವ್ರ ಹಿನ್ನಡೆಯಾಯಿತು. ಕಲ್ಬುರ್ಗಿ, ರಾಯಚೂರು, ಬಳ್ಳಾರಿ, ಚಿಕ್ಕೋಡಿಯಲ್ಲಿ ಆದ ಸೋಲಿನ ಪರಾಮರ್ಶೆಯನ್ನು ಹೈ ಕಮಾಂಡ್ ಮಾಡದೆ ಇರುವುದು ಕಲ್ಯಾಣ ಕರ್ನಾಟಕದಲ್ಲಿ ಪಕ್ಷದ ಅವನತಿಗೆ ಕಾರಣವಾಗಿದೆ.
ಕಾರ್ಯಕರ್ತರ ಪಕ್ಷ ಎಂದು ಹೆಸರುವಾಸಿಯಾಗಿದ್ದ ಭಾರತೀಯ ಜನತಾ ಪಕ್ಷ ಈಗ ಕುಟುಂಬ ರಾಜಕಾರಣದಲ್ಲಿ ಮುಳುಗಿರುವುದು ವಿಷಾದನೀಯ.

ಪಕ್ಷದ ವಿರುದ್ದ ಬಹಿರಂಗವಾಗಿ ಮಾತನಾಡಿ ಹಾಗೂ ಆಡಳಿತಾರೂಢ ಪಕ್ಷದ ಸಭೆಯಲ್ಲಿ ಭಾಗವಹಿಸುತ್ತಿದ್ದ ಶಾಸಕರ ಉಚ್ಚಾಟನೆ ಮಾಡದೆ ಉತ್ತರ ಕರ್ನಾಟಕದ ಭಾಗದಲ್ಲಿ ಪಕ್ಷದ ಬಲವರ್ಧನೆಗೆ ಟೊಂಕಕಟ್ಟಿ ಕೆಲಸ ಮಾಡಿದ ನನ್ನಂತವರಿಗೆ ಉಚ್ಚಾಟನೆ ಮಾಡುವುದು ಪಕ್ಷದ ದ್ವಂದ್ವ ನೀತಿಗಳಿಗೆ ಹಿಡಿದ ಕೈಗನ್ನಡಿ.
ಕಲ್ಯಾಣ ಕರ್ನಾಟಕದಲ್ಲಿ ಸಧೃಡವಾಗಿದ್ದ ಪಕ್ಷ ಲೋಕ ಸಭಾ ಚುನಾವಣೆಯಲ್ಲಿ ಮಕಾಡೆ ಮಲಗಿದ್ದು ಯಾರ 'ಅಡ್ಜಸ್ಟ್ಮೆಂಟ್ ರಾಜಕಾರಣದಿಂದ' ಎಂದು ಪಕ್ಷದ ಪ್ರಮುಖರು ವಿಶ್ಲೇಷಿಸಲಿ.
ಬಿ.ಬಿ.ಶಿವಪ್ಪ, ಮಲ್ಲಿಕಾರ್ಜುನಪ್ಪ, ಡಾ ವಿ.ಎಸ.ಆಚಾರ್ಯರು ಸೇರಿದಂತೆ ಪಕ್ಷದ ಅನೇಕ ಧುರೀಣರು, ಸಾವಿರಾರು ಕಾರ್ಯಕರ್ತರು ಪಕ್ಷವನ್ನು ಸಂಘಟಿಸಿದ ಪರಿಣಾಮದಿಂದಲೇ ಪಕ್ಷ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಸಾಧ್ಯವಾಗಿದ್ದು. ಬಿಡಿಗಾಸಿಲ್ಲದೇ, ಕಾರ್ಯಕರ್ತರ ಓಡಾಟ, ಉಪಹಾರಕ್ಕೂ ಹಣವಿಲ್ಲದಿರುವ ಕಾಲಘಟ್ಟದಲ್ಲಿ ದಿವಂಗತ ಮಲ್ಲಿಕಾರ್ಜುನಪ್ಪನವರು ತಮ್ಮ ಸ್ವಂತ ಸಂಪನ್ಮೂಲದಿಂದ ಪಕ್ಷವನ್ನು ಮುನ್ನೆಡೆಸಿ ಕಾರ್ಯಕರ್ತರ ಮನೋಬಲವನ್ನು ಹೆಚ್ಚಿಸಿ ಸಂಘಟನೆಗೆ ಕಾರಣವಾದರು. ಮಾತು ಕಡಿಮೆಯಾದರೂ ತಮ್ಮ ಕೆಲಸದಿಂದ ಕರಾವಳಿಯಲ್ಲಿ ಪಕ್ಷವನ್ನು ಸಂಘಟಿಸಿದ್ದು ಪಕ್ಷ ಮರೆಯಲಾಗದ ಮಾಣಿಕ್ಯ ಡಾ. ವಿ.ಎಸ್.ಆಚಾರ್ಯರು. ಆಯಕಟ್ಟಿನ ಸ್ಥಾನದಲ್ಲಿದ್ದರೂ ಆಚಾರ್ಯರ ಕುಟುಂಬದವರು ಯಾರೂ ಸಹ ರಾಜಕಾರಣಕ್ಕೆ ಬರಲಿಲ್ಲ ಎಂಬುದು ಹಲವರಿಗೆ ಗೊತ್ತಿಲ್ಲ ಎಂದಿದ್ದಾರೆ.
ಹಿಂದುತ್ವವಾದ ಬಗ್ಗೆ ರಾಜಿ ಮಾಡಿಕೊಳ್ಳದೆ, ಕುಟುಂಬ ರಾಜಕಾರಣದ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ರಾಜ್ಯದಲ್ಲಿ ಪಕ್ಷವನ್ನು ಕಟ್ಟಿದ್ದ ಈಶ್ವರಪ್ಪನವರನ್ನು ಹೊರಗಿಟ್ಟರು. ನಿಸ್ವಾರ್ಥ ಕಾರ್ಯಕರ್ತರು, ತನು-ಮನ-ಧನದಿಂದ ದುಡಿದ ಮುಖಂಡರಿಂದ ಪಕ್ಷದ ಸಂಘಟನೆಯಾಯಿತೇ ಹೊರತು ಸ್ವಯಂಘೋಷಿತ 'ಪೂಜ್ಯ' ರಿಂದಲ್ಲ.
ರಾಜ್ಯದಲ್ಲಿ ಪ್ರ ಪ್ರಥಮ ಬಾರಿಗೆ ವಕ್ಫ್ ಹೋರಾಟಕ್ಕೆ ಧರಣಿ ಸತ್ಯಾಗ್ರಹವನ್ನು ಪ್ರಾರಂಭಿಸಿದ್ದು ನಾವೇ, ವಾಲ್ಮೀಕಿ ಹಗರಣ, ದಲಿತರಿಗೆ SCSP/TSP ಅನುದಾನದ ದುರ್ಬಳಕೆಯನ್ನು ಖಂಡಿಸಿದ್ದು, ಹೋರಾಟ ರೂಪಿಸಿದ್ದು, ವಕ್ಫ್ ವಿರುದ್ಧ ನಾವು ಮಾಡಿದ್ದ ಮಾಹಿತಿ ಸಂಗ್ರಹಕ್ಕೆ ಜೆ.ಪಿ.ಸಿ ಅಧ್ಯಕ್ಷರಾದ ಶ್ರೀ ಜಗದಂಬಿಕಾ ಪಾಲ್ ಅವರು ಪ್ರಶಂಸಿಸಿದ್ದರು.
ಪ್ರತಿ ಬಾರಿ ಅಧಿವೇಶನ ನಡೆದಾಗಲೂ ಉತ್ತರ ಕರ್ನಾಟಕಕ್ಕೆ ಆಗುತ್ತಿರುವ ಮಲತಾಯಿ ಧೋರಣೆಯನ್ನು, ಕೃಷ್ಣ ಯೋಜನೆಯ ವಿಳಂಬದ ಬಗ್ಗೆ ಧ್ವನಿ ಎತ್ತಿದ್ದು ನಾವೇ, ಕರ್ನಾಟಕ ಲೋಕ ಸೇವಾ ಆಯೋಗದಲ್ಲಿರುವ ಭ್ರಷ್ಟರನ್ನು ಕಿತ್ತೊಗೆಯಲು ಸ್ಪರ್ಧಾರ್ಥಿಗಳ ಜೊತೆಗೆ ನಿಂತಿದ್ದು ನಾವೇ. ಬಾಣಂತಿಯರ ಸಾವಿನ ಬಗ್ಗೆ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದು ನಾನೇ. ಪಕ್ಷದಲ್ಲಿ ಆಗಬೇಕಾದ ಕೆಲ ಬದಲಾವಣೆಗಳು, ಸುಧಾರಣೆಗಳು ಸೂಚಿಸಿದಕ್ಕೆ ನಮ್ಮ ನಿಲುವು ಕೆಲವರಿಗೆ 'ಅಪಥ್ಯ' ವಾಗಿದೆ.
ಅಡ್ಜಸ್ಟ್ಮೆಂಟ್ ರಾಜಕಾರಣ ನಿಲ್ಲದಿದ್ದರೆ ಪಕ್ಷ ಮಕಾಡೆ ಮಲಗುವುದು ಖಚಿತ. ಕುಟುಂಬ ರಾಜಕಾರಣಕ್ಕೆ ಕಡಿವಾಣ ಹಾಕಿ, ನಿಜವಾದ ಜನ ಪರ ಕಾಳಜಿ ಇರುವ ನಾಯಕರಿಗೆ ಪಕ್ಷ ಅವಕಾಶ ನೀಡಬೇಕು. ಕಾಟಾಚಾರಕ್ಕೆ ಸರ್ಕಾರದ ನೀತಿಗಳನ್ನು ಖಂಡಿಸಿ ಸಂಜೆ ವೇಳೆ ಅವರ ಮನೆಯಲ್ಲಿ ಭೋಜನ ಕೂಟದಲ್ಲಿ ಭಾಗವಹಿಸುವ ನಾಯಕರ ಅವಶ್ಯ ಪಕ್ಷಕ್ಕಿಲ್ಲ. Nation First, Party next, Self last ಎಂಬ ತತ್ವದಡಿ ಕೆಲಸ ಮಾಡುವ ನನ್ನ ನೀತಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೇಳಿದ್ದಾರೆ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications