ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ: ತನಿಖೆಗೆ ಅಡ್ಡಿಮಾಡಲ್ಲ, ಸತ್ಯ ಹೊರಬರಲಿ ಎಂದ ಸಿದ್ದರಾಮಯ್ಯ
ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರು ₹5 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಸಿಕ್ಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಲೋಕಾಯುಕ್ತರ ತನಿಖೆ ನಡೆದು ಪೂರ್ಣ ಸತ್ಯಾಸತ್ಯತೆ ಹೊರಬರಲಿ. ನಾವ್ಯಾರು ಅದಕ್ಕೆ ಅಡ್ಡಿಮಾಡಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಬಿಜೆಪಿಯವರಿಗೆ ನಾಚಿಕೆಗೇಡು
ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿಯವರು ಲಂಚದ ಆರೋಪದ ಮೇಲೆ ಲೋಕಾಯುಕ್ತರ ಬಳಿ ಸಿಕ್ಕಿಬಿದ್ದಿದ್ದಾರೆ. ಬಿಜೆಪಿಯವರು ಬೇರೆ ಪಕ್ಷದವರ ಮೇಲೆ ಲಂಚದ ಆರೋಪವನ್ನು ಸುಲಭವಾಗಿ ಮಾಡುತ್ತಿದ್ದರು. ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದು ನಾಚಿಕೆಗೇಡು. ಲೋಕಾಯುಕ್ತರ ತನಿಖೆ ನಡೆದು ಪೂರ್ಣ ಸತ್ಯಾಸತ್ಯತೆ ಹೊರಬರಲಿ ಎಂದು ಹೇಳಿದ್ದಾರೆ.

ಶಿರಹಟ್ಟಿ ಕ್ಷೇತ್ರದ ಶಾಸಕ ಚಂದ್ರು ಲಮಾಣಿ ಅವರು ಲಂಚದ ಆರೋಪದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದಿದ್ದರು. ಲಕ್ಷ್ಮೇಶ್ವರ ಪಟ್ಟಣದಲ್ಲಿ ಸಣ್ಣ ನೀರಾವರಿ ಇಲಾಖೆಯ ಕಾಮಗಾರಿಗೆ ಸಂಬಂಧಿಸಿದಂತೆ ಕ್ಲಾಸ್-1 ಗುತ್ತಿಗೆದಾರ ವಿಜಯ್ ಅವರಿಂದ ₹11 ಲಕ್ಷ ಲಂಚ ಬೇಡಿಕೆ ಇಟ್ಟಿದ್ದಾರೆಯೆಂಬ ಆರೋಪ ಕೇಳಿಬಂದಿತ್ತು. ರಸ್ತೆ ಬದಿ ತಡೆಗೋಡೆ ನಿರ್ಮಾಣ ಕಾಮಗಾರಿ ವಹಿಸಲು ಈ ಹಣ ಕೇಳಿದ್ದು, ದೂರುದಾರರ ಮಾಹಿತಿ ಆಧಾರವಾಗಿ ಲೋಕಾಯುಕ್ತ ಅಧಿಕಾರಿಗಳು ಬಲೆ ಬೀಸಿ ಕಾರ್ಯಾಚರಣೆ ನಡೆಸಿದ್ದರು.
ಮೊದಲ ಕಂತಾಗಿ ₹5 ಲಕ್ಷ ಸ್ವೀಕರಿಸುತ್ತಿದ್ದ ವೇಳೆ ಶಾಸಕ ಚಂದ್ರು ಲಮಾಣಿ ಹಾಗೂ ಅವರಿಬ್ಬರು ವೈಯಕ್ತಿಕ ಸಹಾಯಕರನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಲಾಗಿತ್ತು. ಸದ್ಯ ಮೂವರನ್ನೂ ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳು ಮತ್ತು ಇತರ ಸಾಕ್ಷ್ಯಗಳನ್ನು ಸಂಗ್ರಹಿಸುವ ಕಾರ್ಯ ಮುಂದುವರಿದಿದೆ. ಈ ಘಟನೆ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಪ್ರತಿಪಕ್ಷ ನಾಯಕರು ಮತ್ತು ರಾಜಕೀಯ ವಿಶ್ಲೇಷಕರು ಇದನ್ನು ಗಂಭೀರ ಬೆಳವಣಿಗೆಯಾಗಿ ಪರಿಗಣಿಸುತ್ತಿದ್ದಾರೆ. ಲೋಕಾಯುಕ್ತ ತನಿಖೆ ಮುಂದುವರಿದಿರುವ ಹಿನ್ನೆಲೆ ಮುಂದಿನ ದಿನಗಳಲ್ಲಿ ಇನ್ನಷ್ಟು ಮಾಹಿತಿಗಳು ಬಹಿರಂಗವಾಗುವ ಸಾಧ್ಯತೆ ಇದೆ.
ಡಿಕೆ ಶಿವಕುಮಾರ್ ವ್ಯಂಗ್ಯ
ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿ, ಸಾಮಾನ್ಯವಾಗಿ ಬಿಜೆಪಿ ನಾಯಕರು ಬಹಳ ಪ್ರಾಮಾಣಿಕರು. ಈ ದೇಶದಲ್ಲೇ ಅತ್ಯಂತ ಪ್ರಾಮಾಣಿಕರು ಅವರು. ನಿಮಗೆ ತಪ್ಪು ಮಾಹಿತಿ ಸಿಕ್ಕಿರಬಹುದು. ಲೋಕಾಯುಕ್ತರು ಏನು ಹೇಳುತ್ತಾರೆ ನೋಡೋಣ. ಬಳಿಕ ನಾನು ಪ್ರತಿಕ್ರಿಯಿಸುತ್ತೇನೆ ಎಂದು ವ್ಯಂಗ್ಯವಾಗಿ ಹೇಳಿದ್ದಾರೆ.
-
By Election: ಒಬ್ಬರಿಂದ ಪಕ್ಷ ಗೆಲ್ಲಲ್ಲ, ಇದು ಕಾಂಗ್ರೆಸ್ ಸಿದ್ಧಾಂತಕ್ಕೆ ಸಿಗುವ ಜಯ: ಸಲೀಂ ಅಹ್ಮದ್ ಟಾಂಗ್ ಕೊಟ್ಟಿದ್ಯಾರಿಗೆ? -
ಸಿದ್ದರಾಮಯ್ಯ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ: ರಾಜಕೀಯದಲ್ಲಿ ಹೊಸ ವಿವಾದ -
GST: ಕಾಂಗ್ರೆಸ್ ಜನರ ಪರವೋ ಅಥವಾ ಹೆಚ್ಚಿನ ತೆರಿಗೆ ದರದ ಪರವೋ? ಮಾಜಿ ಸಿಎಂ ನೇರ ಪ್ರಶ್ನೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications