Madal Virupakshappa : ಮಾಡಾಳ್ ವಿರೂಪಾಕ್ಷಪ್ಪಗೆ ಶುರುವಾಯ್ತು ಬಂಧನ ಭೀತಿ; ನಿರೀಕ್ಷಣಾ ಜಾಮೀನು ಅರ್ಜಿ ವಜಾ
ಬೆಂಗಳೂರು,ಮಾರ್ಚ್ 27: ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯಾಗಿರುವ ಬಿಜೆಪಿ ಚನ್ನಗಿರಿಯ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರು ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿ ಆದೇಶ ನೀಡಿದೆ.
ಇನ್ನೂ ಸೋಮವಾರ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದ್ದು, ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರು ಯಾವುದೇ ಕ್ಷಣದಲ್ಲಿ ಬಂಧನವಾಗುವ ಸಾಧ್ಯತೆಯಿದೆ.

ಕಳೆದ ಕೆಲ ದಿನಗಳ ಹಿಂದೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಮಾಡಾಳ್ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀರ ಬಲೆಗೆ ಬಿದ್ದಿದ್ದರು. ನಂತರ ಮಾಡಾಳ್ ವಿರೂಪಾಕ್ಷಪ್ಪ ಅವರ ದಾವಣಗೆರೆ ನಿವಾಸದ ಮೇಲೂ ಲೋಕಾಯುಕ್ತ ದಾಳಿ ನಡೆದಿತ್ತು. ಅಲ್ಲಿಯೂ ಸಹ ಕೋಟ್ಯಂತರ ರೂ. ನಗದು ಪತ್ತೆಯಾಗಿತ್ತು.

ನಂತರ ಕೆಲ ದಿನಗಳ ನಂತರ ಕಾಣಿಯಾಗಿದ್ದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರು ಜಾಮೀನು ದೊರೆತ ನಂತರ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದರು. ಅವರಿಗೆ ತರಾತುರಿಯಲ್ಲಿ ಜಾಮೀನು ಮಂಜೂರು ಮಾಡಿದ್ದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಸಿಜೆಐಗೂ ಪತ್ರ ಬರೆಯಲಾಗಿತ್ತು.
ಕೆಎಸ್‌ಡಿಎಲ್ ವರ್ಕ್ ಆರ್ಡರ್ ನೀಡಲು ಲಂಚ ಪಡೆದಿರುವ ಪ್ರಕರಣದ ಪ್ರಮುಖ ಆರೋಪಿಯಾದ ಮಾಡಾಳ್ ವಿರೂಪಾಕ್ಷಪ್ಪನವರಿಗೆ ಮಾರ್ಚ್ 7 ರಂದು ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಕೆಲ ದಿನಗಳ ಹಿಂದೆ ತಲೆ ಮರೆಸಿಕೊಂಡಿದ್ದ ಮಾಡಾಳ್ ವಿರೂಪಾಕ್ಷಪ್ಪ ಅವರು ಜಾಮೀನು ಸಿಗುತ್ತಿದ್ದಂತೆ ಬೃಹತ್ ರೋಡ್ ಶೋ ಕ್ಷೇತ್ರಕ್ಕೆ ಆಗಮಿಸಿ, ಇದು ನನ್ನ ಹಾಗೂ ನನ್ನ ಕುಟುಂಬದ ವಿರುದ್ದ ನಡಸಿರುವ ಷಡ್ಯಂತ್ರ ಎಂದು ಆರೋಪಿಸಿದದ್ದರು.
ಇನ್ನೂ ಈ ಕುರಿತು ಸೋಮವಾರ ಹೈಕೋರ್ಟ್ ವಿಚಾರಣೆಯ ವೇಳೆ ಲೋಕಾಯುಕ್ತ ಪರ ವಕೀಲರು ಜಾಮೀನು ಅರ್ಜಿಗೆ ಪ್ರಬಲ ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಏಕ ಸದಸ್ಯ ಪೀಠ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಹಾಗಾಗಿ ಯಾವುದೇ ಸಂದರ್ಭದಲ್ಲಿ ಬೇಕಾದರೂ ಮಾಡಾಳ್ ವಿರೂಪಾಕ್ಷಪ್ಪನವರನ್ನು ಬಂಧಿಸಬಹುದಾಗಿದೆ ಎನ್ನಲಾಗಿದೆ.
ಇದೀಗ ಮತ್ತೆ ಸಂಕಷ್ಟ ಎದುರಾಗಿದ್ದು, ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದ್ದು, ಯಾವುದೇ ಕ್ಷಣದಲ್ಲಾದರೂ ಮಾಡಾಳ್ ವಿರೂಪಾಕ್ಷಪ್ಪ ಬಂಧನವಾಗುವ ಸಾಧ್ಯತೆ ಇದೆ. ಇದೇ ಕಾರಣಕ್ಕೆ ಮಾಡಾಳ್ ವಿರೂಪಾಕ್ಷಪ್ಪ ಚನ್ನಗಿರಿಯ ತಮ್ಮ ನಿವಾಸದಿಂದ ಅಜ್ಞಾತ ಸ್ಥಳಕ್ಕೆ ಹೊರಟಿದ್ದಾರೆ ಎನ್ನಲಾಗುತ್ತಿದೆ.
ಇತ್ತ ಕಾಂಗ್ರೆಸ್ ನ ಮೊದಲ ಟಿಕೆಟ್ ಘೋಷಣೆಯಾಗಿದ್ದು, ಇನ್ನೂ ಬಿಜೆಪಿಯಲ್ಲಿ ಭಾನುವಾರ ಚುನಾವಣಾ ಚಾಣಕ್ಷ ಅಮಿತ್ ಶಾ ನೇತೃತ್ವದದಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಟಿಕೆಟ್ ಆಕಾಂಕ್ಷಿಗಳ ಕುರಿತು ಚರ್ಚೆ ನಡೆದಿದ್ದು, ಯಾವ ಅಭ್ಯರ್ಥಿಗೆ ಟಿಕೆಟ್ ನೀಡಬೇಕು, ಕಳಂಕಹೊತ್ತ ನಾಯಕರಿಗೆ ಈ ಬಾರಿ ಟಿಕೆಟ್ ನೀಡಬೇಕಾ ಅಥವಾ ಬೇಡ್ವಾ ಎಂಬ ಕುರಿತು ಚರ್ಚೆ ನಡೆದಿದೆ.
ಇನ್ನೂ ಮಾಡಾಳ್ ವಿರೂಪಾಕ್ಷಪ್ಪನವರ ಪುತ್ರ ಮಾಡಾಳ್ ಮಲ್ಲಿಕಾರ್ಜುನ್‌ರವರು ಚನ್ನಗಿರಿ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಆದರೆ, ನಿರೀಕ್ಷಣಾ ಜಾಮೀನು ಅರ್ಜಿ ವಜಾದಿಂದಾಗಿ ಮಾಡಾಳ್ ವಿರೂಪಾಕ್ಷಪ್ಪ ಬಂಧನದ ಭೀತಿಯಲ್ಲಿರುವುದರಿಂದ ಮಾಡಾಳ್ ಮಲ್ಲಿಕಾರ್ಜುನ್ ಅವರಿಗೆ ಟಿಕೆಟ್ ಸಿಗುವುದು ಕಷ್ಟ ಎನ್ನಲಾಗುತ್ತಿದೆ.
ಲಂಚ ಪ್ರಕರಣದಲ್ಲಿ ಬಿಜೆಪಿ ಪಕ್ಷದಿಂದ ಉಚ್ಚಾಟಣೆಯಾಗಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಈ ಬಾರ ಟಿಕೆಟ್ ಮಿಸ್ ಆಗಲಿದ್ದು, ವಿರೂಪಾಕ್ಷಪ್ಪ ಸ್ಥಾನಕ್ಕೆ ಪರ್ಯಾಯ ಅಭ್ಯರ್ಥಿಯನ್ನ ಕಣಕ್ಕಿಳಿಸಲು ಆರ್ ಎಸ್ ಎಸ್ ಚಿಂತನೆ ನಡೆಸಿದ್ದು, ಈ ಬಾರಿ ಚನ್ನಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಡಾ.ಧನಂಜಯ ಸರ್ಜಿ ಅವರನ್ನ ಕಣಕ್ಕಿಳಿಸಲು ತಿರ್ಮಾನಿಸಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.












Click it and Unblock the Notifications