Madal Virupakshappa Resigns: ಕೆಎಸ್‌ಡಿಎಲ್‌ ಅಧ್ಯಕ್ಷ ಸ್ಥಾನಕ್ಕೆ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆ ಮೇರೆಗೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರು ರಾಜೀನಾಮೆ ನೀಡಿದ್ದಾರೆ.

ಬೆಂಗಳೂರು,ಮಾರ್ಚ್ 3: ವಿಧಾನಸಭಾ ಚುನಾವಣೆಯ ತಯಾರಿಯಲ್ಲಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಲೋಕಾಯುಕ್ತ ಶಾಕ್ ನೀಡಿದ್ದು, ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ರಾಜ್ಯ ಸರ್ಕಾರಕ್ಕೆ ಭಾರೀ ಮುಜುಗರ ತರಿಸಿದೆ.

ರಾಜ್ಯ ಸರ್ಕಾರಕ್ಕೆ ಇದರಿಂದ ಆಗುವ ಮುಜಗರದಿಂದ ತಪ್ಪಿಸಿಕೊಳ್ಳುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾಗಿದ್ದು, ರಾಜ್ಯ ಸಾಬೂನು ಮತ್ತು ಮಾರ್ಜಕಗಳ ನಿಗಮದ ಅಧ್ಯಕ್ಷ‌ ಮಾಡಾಳ್ ವಿರೂಪಾಕ್ಷಪ್ಪಗೆ ರಾಜೀನಾಮೆ ನೀಡುವಂತೆ ಸೂಚನೆ ನೀಡಿದರು.

BJP MLA Madal Virupakshappa resigns as KSDL chairman

ಪುತ್ರ ಪ್ರಶಾಂತ್ ಮಾಡಾಳ್ ನಿವಾಸದ ಮೇಲೆ ಲೋಕಾಯುಕ್ತ ದಾಳಿ ಬೆನ್ನಲ್ಲೆ ಶಾಸಕ ವಿರೂಪಾಕ್ಷಪ್ಪ ಅವರು ಕೆಎಸ್​ಡಿಎಲ್ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಸಿಎಂ ಬಸವರಾಜ್ ಬೊಮ್ಮಾಯಿ ಸೂಚನೆ ಮೇರೆಗೆ ಶಾಸಕರು ಕೆಎಸ್​ಡಿಎಲ್​ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

BJP MLA Madal Virupakshappa resigns as KSDL chairman

ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹೇಳಿದ್ದೇನು.?

ಮಾರ್ಚ್ 2 ರಂದು ನಡೆದ ಲೋಕಾಯುಕ್ತ ದಾಳಿಗು ನನಗೂ ಯಾವುದೇ ಸಂಬಂಧವಿರುವುದಿಲ್ಲ. ಇದು ನನ್ನ ಹಾಗೂ ನನ್ನ ಕುಟುಂಬದ ವಿರುದ್ಧ ಶಡ್ಯಂತ್ರವಾಗಿರುತ್ತದೆ. ಆದಾಗಿಯೂ ನನ್ನ ಮೇಲೆ ಆಪಾದನೆ ಬಂದಿರುವುದರಿಂದ ನಾನು ನೈತಿಕ ಹೊಣೆ ಹೊತ್ತು ಕೆ.ಎಸ್.ಡಿ.ಎಲ್‌ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ದಯವಿಟ್ಟು ಈ ನನ್ನ ಜೀನಾಮೆಯನ್ನು ಅಂಗೀಕರಿಸಬೇಕು ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇನ್ನೂ ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ಶಾಸಕರ ಮನೆಯಲ್ಲಿ ಸಿಕ್ಕ ಹಣದ ರಹಸ್ಯವೇನು? ಎಂದು ಬಿಜೆಪಿಯನ್ನ ಪ್ರಶ್ನಿಸಿದೆ. ಈ ಹಣ ಪೇ ಸಿಎಂ ಗೆ ತಲುಪಿಸುವುದಕ್ಕಾ ಅಥವಾ ಪೇ ಪಿಎಂ ಗೆ ತಲುಪಿಸುವುದಕ್ಕಾ ಎಂದು ಪ್ರಶ್ನಿಸಿದೆ.

ಕರ್ನಾಟಕಕ್ಕೆ ಪದೇ ಪದೇ ಬರುತ್ತಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಜೋಡಿಗೆ ಕರ್ನಾಟಕ ಎಂಟಿಎಂ ಅಗಿದೆಯೇ? ಸಂಪತ್ತಿನ ಕ್ರೋಡೀಕರಣಕ್ಕಾಗಿ 40% ಕಮಿಷನ್ ಬಗ್ಗೆ ಮೋದಿ, ಅಮಿತ್ ಶಾ ಮಾನಾಡುತ್ತಿಲ್ಲವೇ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಪ್ರಶ್ನಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+