MLA S. Suresh Kumar ಬಿಜೆಪಿ ಶಾಸಕ ಎಸ್ ಸುರೇಶ್ ಕುಮಾರ್ ಅವರ ಆರೋಗ್ಯ ಈಗ ಹೇಗಿದೆ?
ಬೆಂಗಳೂರು,ಸೆಪ್ಟೆಂಬರ್ 04: ಬೆಂಗಳೂರಿನ ರಾಜಾಜಿನಗರ ಶಾಸಕ ಎಸ್ ಸುರೇಶ್ ಕುಮಾರ್ ಅನಾರೋಗ್ಯಕ್ಕೀಡಾಗಿದ್ದಾರೆ. ಬೆಂಗಳೂರಿನ ಶೇಷಾದ್ರಿಪುದ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕೆಲ ದಿನಗಳಿಂದ ಬಹಳ ಆಯಾಸಗೊಂಡಿದ್ದ ಸುರೇಶ್ ಕುಮಾರ್ ಅವರು ಚಿಕನ್ ಗುನ್ಯಾ ಹಾಗೂ ತೀವ್ರ ಬೆನ್ನುನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಮಂಗಳವಾರ ಸಂಜೆ ಏಕಾಏಕಿ ಆಯಾಸಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇನ್ನೂ ಶಾಸಕ ಸುರೇಶ್ ಕುಮಾರ್ ಅವರು ಮುಡಾ ಹಗರಣ ವಿರೋಧಿಸಿ ಬಿಜೆಪಿ ನಡೆಸಿದ ಬೆಂಗಳೂರು ಮೈಸೂರು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದರು. ಆ ಬಳಿಕ ಸೈಕಲ್‌ನಲ್ಲಿಯೇ ತಿರುಪತಿ ಪ್ರವಾಸ ಮಾಡಿದ್ದರು. ಅಲ್ಲಿಂದ ವಾಪಸ್ ಆದ ಬಳಿಕ ಬೆನ್ನುನೋವಿನಿಂದ ಬಳಲುತ್ತಿದ್ದರು. ಕಳೆದ ವಾರಾಂತ್ಯದಿಂದ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ಚಿಕನ್ ಗುನ್ಯಾ ಎಂದು ಹೇಳಲಾಗಿದೆ. ಸಾಕಷ್ಟು ಸುಸ್ತು ಇರುವುದರಿಂದ ಸುರೇಶ್ ಕುಮಾರ್ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿದೆ.

ನಾನು ಆರೋಗ್ಯವಾಗಿದ್ದೇನೆ
ಮಾಧ್ಯಮಗಳಲ್ಲಿ ತಮ್ಮ ಅನಾರೋಗ್ಯ ಕುರಿತಂತೆ ಪ್ರಸಾರವಾಗುತ್ತಿರುವ ವದಂತಿಗಳನ್ನು ನಂಬುವುದು ಬೇಡ. ನಾನು ಆರೋಗ್ಯವಾಗಿದ್ದೇನೆ ಎಂದು ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತಂತೆ ಮಾಧ್ಯಮ ಪ್ರಕಟಣೆಯನ್ನು ಬಿಡುಗಡೆ ಮಾಡಿರುವ ಅವರು, ಚಿಕೂನ್ ಗುನ್ಯಾ ತಮ್ಮನ್ನು ಕೆಲ ದಿನಗಳಿಂದ ಬಾಧಿಸಿದ್ದು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದೇನೆ. ಜ್ವರದಿಂದ ಈಗ ಸಂಪೂರ್ಣ ಚೇತರಿಕೆ ಕಂಡಿದ್ದು, ಗುಣಮುಖನಾಗಿದ್ದೇನೆ ಹಾಗೂ ಸದ್ಯಕ್ಕೆ ವಿಶ್ರಾಂತಿಯಲ್ಲಿದ್ದೇನೆ. ಕಾಳಜಿ ಹೊಂದಿರುವ ತಮ್ಮ ಹಿತೈಶಿಗಳು ಅನಗತ್ಯ ಆತಂಕಕ್ಕೆ ಒಳಗಾಗುವುದು ಬೇಡ ಎಂದು ಅಭಿಮಾನಿಗಳಿಗೆ ಹಾಗೂ ಕಾರ್ಯಕರ್ತರಿಗೆ ತಿಳಿಸಿದ್ದಾರೆ.












Click it and Unblock the Notifications