DK Shivakumar: ಡಿಕೆ ಶಿವಕುಮಾರ್ ನಿವಾಸಕ್ಕೆ ಬಂದ್ರು ಶಾಸಕರಾದ ಶಿವರಾಮ್ ಹೆಬ್ಬಾರ್, ಸೋಮಶೇಖರ್- ಚರ್ಚೆಯಾಗಿದ್ದೇನು?
ಬೆಂಗಳೂರು, ಮೇ 13: ಕಳೆದ ಆರು ತಿಂಗಳಿನಿಂದ ಬಿಜೆಪಿಯ ಇಬ್ಬರು ಶಾಸಕರು ಬಹಿರಂಗವಾಗಿಯೇ ಕಾಂಗ್ರೆಸ್ ನಾಯಕರ ಸಂಪರ್ಕದಲ್ಲಿದ್ದಾರೆ. ಬಿಜೆಪಿಯ ಶಾಸಕರಾದ ಎಸ್ ಟಿ ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಸಂಪರ್ಕದಲ್ಲಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಆಡಳಿತರೂಢ ಕಾಂಗ್ರೆಸ್ ಗೆ ಠಕ್ಕರ್ ಕೊಡುವ ನಿಟ್ಟಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಾದ್ರೆ, ಇತ್ತ ಬಿಜೆಪಿ ಶಾಸಕರನ್ನ ಕಾಂಗ್ರೆಸ್ ಗೆ ಕರೆತರುವ ನಿಟ್ಟಿನಲ್ಲಿ ಕಾಂಗ್ರೆಸ್ ಪ್ಲಾನ್ ನಡೆಸಿದ್ದು, ಎಲ್ಲಾ ಹಂತದಲ್ಲಿಯ ಮಾತುಕತೆ ಅಂತ್ಯವಾಗಿದೆ ಎಂದು ತಿಳಿದು ಬಂದಿದೆ.

ಈಗಾಗಲೇ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ವಿರುದ್ಧವಾಗಿಯೇ ಬಹಿರಂಗವಾಗಿ ಎಸ್ ಟಿ ಸೋಮಶೇಖರ್ ಅಸಮಾಧಾನ ಹೊರಹಾಕಿದ್ದು, ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೆಂಬಲವನ್ನ ಸೂಚಿಸಿದ್ದರು. ಇದೀಗ ಮತ್ತೆ ಬೆಳ್ಳಂಬೆಳಗ್ಗೆ ಡಿಕೆ ಶಿವಕುಮಾರ್ ನಿವಾಸದಲ್ಲಿಇಬ್ಬರು ಬಿಜೆಪಿ ನಾಯಕರು ಪ್ರತ್ಯಕ್ಷರಾಗಿದ್ದಾರೆ.
ವಿಧಾನಸಭೆ ಚುನಾವಣೆಯಾದ ಬಳಿಕ ಬಿಜೆಪಿ ಯಶವಂತಪುರ ಶಾಸಕರಾದ ಎಸ್ಟಿ ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಪಕ್ಷದ ಕಾರ್ಯ ಚಟುವಟಿಕೆಯಿಂದ ದೂರವೇ ಉಳಿದಿದ್ದಾರೆ. ಬಿಜೆಪಿ ನಾಯಕರ ಮೇಲೆ ಮುನಿಸಿಕೊಂಡಿರುವ ಈ ಇಬ್ಬರು ನಾಯಕರು ಹಲವು ಕಾಂಗ್ರೆಸ್ ನಾಯಕರ ಜೊತೆಗೆ ಸಂಪರ್ಕದಲ್ಲಿದ್ದು, ಕಾಂಗ್ರೆಸ್ ಕಾರ್ಯ ಚಟುವಟಿಕೆಯಲ್ಲಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಈಗಾಗಲೇ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಕೆಲಸ ನಿರ್ವಹಿಸಿರುವ ಈ ಬಿಜೆಪಿ ನಾಯಕರು ಕಾಂಗ್ರೆಸ್ಗೆ ಸೇರಲು ತುದಿಗಾಲಿನ ಮೇಲೆ ನಿಂತಿದ್ದಾರೆ.
ಈ ಹಿಂದೆ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಯಶವಂತಪುರ ಶಾಸಕ ಎಸ್ಟಿ ಸೋಮಶೇಖರ್ ಕಾಂಗ್ರೆಸ್ಗೆ ಮತ ಹಾಕುವ ಮೂಲಕ ಅಡ್ಡ ಮತದಾನ ಮಾಡಿದ್ದರು. ಇನ್ನು ಶಾಸಕ ಶಿವರಾಮ್ ಹೆಬ್ಬಾರ್ ಮತದಾನ ಮಾಡದೇ ಬಿಜೆಪಿ ಆಘಾತ ನೀಡಿದ್ದರು.

ಮತ್ತು ಅಲ್ಲದೇ ವಿಧಾನ ಪರಿಷತ್ ಚುನಾವಣೆ ಸಂದರ್ಭದಲ್ಲಿಯೂ ಸಹ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಅವರ ಪರ ಕೆಲಸ ಮಾಡಿದ್ರು. ಇನ್ನೂ ಲೋಕಸಭೆ ಚುನಾವಣೆಯಲ್ಲೂ ಬಿಜೆಪಿ ಅಭ್ಯರ್ಥಿಗಳ ಪರ ಈ ಇಬ್ಬರು ನಾಯಕರು ಪ್ರಚಾರ ಮಾಡದೆ, ಹಿಂದೆ ಸರೆದಿದ್ದಾರೆ. ಇದೀಗ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಕೈ ನಾಯಕರ ಜೊತೆಗೆ ಚರ್ಚೆ ನಡೆಸಿದ್ದಾರೆ.
ಶಾಸಕರಾದ ಎಸ್ಟಿ ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಹಲವು ದಿನಗಳಿಂದ ಕಾಂಗ್ರೆಸ್ ನಾಯಕರ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ. ಇನ್ನು ಶಾಸಕ ಎಸ್ಟಿ ಸೋಮಶೇಖರ ಕಾಂಗ್ರೆಸ್ ನಾಯಕರ ಜೊತೆ ಬಹಿರಂಗವಾಗಿಯೇ ಗುರುತಿಸಿಕೊಂಡಿದ್ದಾರೆ.
ಈ ಹಿಂದೆಯೇ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎಂಬ ಸುದ್ದಿ ಸಾಕಷ್ಟು ಚರ್ಚೆಯಾಗಿತ್ತು. ಇದೀಗ ವಿಧಾನ ಪರಿಷತ್ ಚುನಾವಣೆ ಹೊತ್ತಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮೆನೆಗೆ ಭೇಟಿ ನೀಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.












Click it and Unblock the Notifications