Lok Sabha Election 2024: ಬಿಜೆಪಿ ಶಾಕ್‌ : ಶಿವರಾಮ್‌ ಹೆಬ್ಬಾರ್‌ ಪುತ್ರ ಕಾಂಗ್ರೆಸ್‌ ಸೇರ್ಪಡೆ- ಹೆಬ್ಬಾರ್‌ ಸೇರ್ಪಡೆ ಯಾವಾಗ?

ಉತ್ತರ ಕನ್ನಡ, ಏಪ್ರಿಲ್‌ 11: ಲೋಕಸಭೆ ಚುನಾವಣೆಗೆ ಅಬ್ಬರದ ಪ್ರಚಾರದಲ್ಲಿ ರಾಜ್ಯ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದೆ. ಲೋಕಸಭಾ ಚುನಾವಣೆಯಲ್ಲಿ ಆಡಳಿತರೂಢ ಕಾಂಗ್ರೆಸ್‌ ಗೆ ಠಕ್ಕರ್‌ ಕೊಡುವ ನಿಟ್ಟಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿಯಾದ್ರೆ, ಇತ್ತ ಬಿಜೆಪಿ ಶಾಸಕರ ಪ್ರತ್ರನಿಗೆ ಗಾಳ ಹಾಕುವಲ್ಲಿ ಕಾಂಗ್ರೆಸ್‌ ಯಶಸ್ವಿಯಾಗಿದೆ.

ಹೌದು, ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್ ಅವರ ಪುತ್ರ ವಿವೇಕ್ ಹೆಬ್ಬಾರ್ ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಅವರ ಪುತ್ರ ವಿವೇಕ್ ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಬನವಾಸಿಯಲ್ಲಿ ವಿವೇಕ್ ಹೆಬ್ಬಾರ್ ತಮ್ಮ ಅಪಾರ ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಉಪಾಧ್ಯಕ್ಷ ಐವಾನ್ ಡಿಸೋಜಾ ಅವರು ವಿವೇಕ್ ಹೆಬ್ಬಾರ್ ಅವರನ್ನು ತಮ್ಮ ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.

BJP MLA Shivaram Hebbar son Vivek Hebbar Joins Congress

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ರಚನೆಯಾದ ಬಳಿಕ ಯಶವಂತಪುರ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್, ಶಿವರಾಮ್​ ಹೆಬ್ಬಾರ್ ಬಿಜೆಪಿ ಕಾರ್ಯಕ್ರಮ ಹಾಗೂ ಬಿಜೆಪಿ ನಾಯಕರಿಂದ ಅಂತರವನ್ನ ಕಾಯ್ದುಕೊಂಡಿದ್ದು, ಕಾಂಗ್ರೆಸ್‌ ನಾಯಕರ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದಾರೆ. ಈಗಾಗಲೇ ಶಾಸಕ ಶಿವರಾಮ್ ಹೆಬ್ಬಾರ್ ಕೂಡ ಬಿಜೆಪಿಯಿಂದ ದೂರವಾಗಿದ್ದು, ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ. ಮಗ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ತಂದೆ ಶಿವರಾಮ್ ಹೆಬ್ಬಾರ್ ನಡೆ ಕುತೂಹಲ ಮೂಡಿಸಿದೆ, ಸದ್ಯದಲ್ಲಿ ಶಿವರಾಮ್‌ ಹೆಬ್ಬಾರ್‌ ಸಹ ಕಾಂಗ್ರೆಸ್‌ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗಿದೆ.

ದೀಪಕ್ ತಿಮ್ಮಯ ಕಾಂಗ್ರೆಸ್ ಸೇರ್ಪಡೆ

ಹಿರಿಯ ಪತ್ರಕರ್ತ ದೀಪಕ್ ತಿಮ್ಮಯ ಅವರನ್ನು ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು. ಸದಾಶಿವನಗರ ನಿವಾಸದಲ್ಲಿ ಗುರುವಾರ ದೀಪಕ್ ತಿಮ್ಮಯ ಅವರಿಗೆ ಕಾಂಗ್ರೆಸ್ ಪಕ್ಷದ ಶಾಲು ಹೊದೆಸಿ, ಹೂಗುಚ್ಛ ನೀಡಿ ಪಕ್ಷಕ್ಕೆ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಅವರು ಬರಮಾಡಿಕೊಂಡರು.

ಈ ಕುರಿತು ಮಾಧ್ಯಮಗಳ ಜೊತೆಗೆ ಡಿ ಕೆ ಶಿವಕುಮಾರ್‌ ಮಾತನಾಡಿ, ಹಿರಿಯ ಪತ್ರಕರ್ತರಾದ ದೀಪಕ್ ತಿಮ್ಮಯ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷರ ರಾಜಕೀಯ ಹಾಗೂ ಸಂವಹನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದ್ದು, ಅವರಿಗೆ ಕಾಂಗ್ರೆಸ್ ಕಚೇರಿಯಲ್ಲಿ ಕಚೇರಿ ನೀಡಲಾಗುವುದು. ಪಕ್ಷದ ವಿಚಾರವಾಗಿ ಯಾರೇ ನನ್ನನ್ನು ಸಂಪರ್ಕ ಮಾಡಲು ಅವರು ಸಹಕಾರ ನೀಡಲಿದ್ದಾರೆ.

ಮಾಧ್ಯಮ ಕ್ಷೇತ್ರದಲ್ಲಿ ಸುಮಾರು 30-40 ವರ್ಷಗಳ ಅನುಭವವಿರುವ ದೀಪಕ್ ತಿಮ್ಮಯ ಅವರು ತಮ್ಮದೇ ಆದ ಸಂಸ್ಥೆ ಮೂಲಕ ಮಕ್ಕಳನ್ನು ನಾಯಕರನ್ನಾಗಿ ರೂಪಿಸುವ ಕೆಲಸ ಮಾಡಿಕೊಂಡು ಬಂದಿದ್ದಾರೆ. ನಾಯಕರನ್ನು ಸೃಷ್ಟಿಸುವವನು ನಾಯಕನೇ ಹೊರತು ಹಿಂಬಾಲಕರನ್ನು ಸೃಷ್ಟಿಸುವವನು ಅಲ್ಲ ಎಂಬಂತೆ ಕೆಲಸ ಮಾಡುತ್ತಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತ, ವಿಚಾರವಾಗಿ ಅವರು ನನಗೆ ಅನೇಕ ಉತ್ತಮ ಸಲಹೆಗಳನ್ನು ನೀಡಿದ್ದಾರೆ. ಹೀಗಾಗಿ ಅವರಿಗೆ ಕಾಂಗ್ರೆಸ್ ಪಕ್ಷದ ಭಾಗವಾಗುವಂತೆ ಮನವಿ ಮಾಡಿದ್ದೆ. ಅದನ್ನು ಒಪ್ಪಿ ಅವರು ಇಂದು ಪಕ್ಷಕ್ಕೆ ಸೇರ್ಪಡೆ ಆಗಿದ್ದು, ಈ ಜವಾಬ್ದಾರಿ ತೆಗೆದುಕೊಳ್ಳುತ್ತಿದ್ದಾರೆ.

ಕಾಂಗ್ರೆಸಿಗರು ಎಸ್.ಟಿ ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆದುಕೊಂಡಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಅವರನ್ನು ಎಲ್ಲಿ ಸೇರಿಸಿಕೊಂಡಿದ್ದೇನೆ. ಅವರು ತಮ್ಮ ಕ್ಷೇತ್ರದ ವಿಚಾರವಾಗಿ ನಮ್ಮ ಜತೆ ಚರ್ಚೆ ಮಾಡಿದ್ದಾರೆ. ಆ ಕ್ಷೇತ್ರಕ್ಕೆ ಹೋಗಿ ಅಲ್ಲಿ ಕೇಳಿ. ಸೋಮಶೇಖರ್ ಹಾಗೂ ಹೆಬ್ಬಾರ್ ಅವರು ಬಿಜೆಪಿಯ ಅಧಿಕೃತ ಶಾಸಕರು. ಅವರು ತಮ್ಮದೇ ಆದ ಲೆಕ್ಕಾಚಾರ, ನಂಬಿಕೆ ಮೇಲೆ ಯಾವ ಪಕ್ಷಕ್ಕೆ ಸಹಾಯ ಮಾಡುತ್ತಿದ್ದಾರೋ ನನಗೆ ಗೊತ್ತಿಲ್ಲ ಎಂದು ತಿಳಿಸಿದರು.

ಹೆಚ್ಎಎಲ್ ಮುಚ್ಚಲಾಗುತ್ತದೆ ಎಂದಿದ್ದ ರಾಹುಲ್ ಗಾಂಧಿ ಅವರಿಂದ ಡಿ.ಕೆ. ಶಿವಕುಮಾರ್ ಅವರು ಕ್ಷಮೆ ಕೇಳಿಸುತ್ತಾರಾ ಎಂಬ ಯಡಿಯೂರಪ್ಪ ಅವರ ಹೇಳಿಕೆ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಯಡಿಯೂರಪ್ಪ ಅವರು ವಿಷಯಾಂತರ ಮಾಡುವುದು ಬೇಡ. ಯಡಿಯೂರಪ್ಪ ಅವರು ಬರ ಪರಿಹಾರ ವಿಚಾರವಾಗಿ ನಿರ್ಮಲಾ ಸೀತರಾಮನ್ ಅವರ ಹೇಳಿಕೆ, ನಮ್ಮ ಬೇಡಿಕೆ, ನರೇಗಾ ಯೋಜನೆಯಲ್ಲಿ ಕೂಲಿ ದಿನಗಳ ಸಂಖ್ಯೆ ಹೆಚ್ಚಳ ಹಾಗೂ ನಮ್ಮ ತೆರಿಗೆ ಪಾಲಿನ ಬಗ್ಗೆ ಮಾತನಾಡಲಿ. ಹಾಗೂ ಯಡಿಯೂರಪ್ಪ ಅವರು ಯಾಕೆ ಕಣ್ಣೀರು ಹಾಕಿದರು ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+