ಸಿದ್ದರಾಮಯ್ಯನವರನ್ನು ಹಾಡಿ ಹೊಗಳಿದ ಎಸ್.ಟಿ.ಸೋಮಶೇಖರ್. ಘರ್ ವಾಪ್ಸಿ ಮುನ್ಸೂಚನೆಯೇ?
ಬೆಂಗಳೂರು,ಜುಲೈ 04: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲು ಅನುಭವಿಸಿದ್ದು, ಇದೀಗ ರಾಜ್ಯ ರಾಜಕಾರಣದಲ್ಲಿ ಹೊಂದಾಣಿಕೆ ರಾಜಕಾರಣ ಬಾರೀ ಸದ್ದು ಮಾಡುತ್ತಿದೆ. ಇತ್ತ ಕಾಂಗ್ರೆಸ್ ಸರ್ಕಾರ ರಚನೆಯ ಬಳಿಕ ಗುರು ಶಿಷ್ಯರ ಗುಪ್ತಗಾಮಿನಿ ಸಾಕಷ್ಟು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಹೌದು. ಬಿಜೆಪಿ ಶಾಸಕ ಹಾಗೂ ಸಿದ್ದರಾಮಯ್ಯ ಅವರ ಶಿಷ್ಯ ಎಸ್.ಟಿ.ಸೋಮಶೇಖರ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹಾಡಿ ಹೊಗಳಿದ್ದಾರೆ. ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆಯುವ ರಾಜಕಾರಣಿ. 2013-18 ರ ಅವಧಿಯ ಸಿದ್ದರಾಮಯ್ಯ ಸರ್ಕಾರ ಕೊಟ್ಟ ಅನುದಾನ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳಿಂದ ನಾನು ಎರಡನೇ ಬಾರಿ ಶಾಸಕನಾಗಿ ಆಯ್ಕೆಯಾದೆ. . ಯಾವತ್ತೂ ದ್ವೇಷ ರಾಜಕಾರಣ ಮಾಡದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಿಷ್ಯನಾಗಿ, ಅಭಿಮಾನಿ ಎಂದು ಎಸ್.ಟಿ.ಸೋಮಶೇಖರ್ ಹೇಳಿಕೆ ನೀಡಿದ್ದು, ಹಲವು ಅಚ್ಚರಿಕೆ ಕಾರಣವಾಗಿದೆ.

ಒಂದೇ ವೇದಿಕೆಯಲ್ಲಿ ಸಿದ್ದರಾಮಯ್ಯ ಅವರು ಶಿಷ್ಯನ ಹೆಗಲ ಮೇಲೆ ಕೈ ಹಾಕಿ ಗುಪ್ತ್ ಗುಪ್ತ್ ಮಾತನಾಡಿದ್ದಾರೆ. ಈ ಎಲ್ಲಾ ಬೆಳವಣಿಗೆಯಿಂದ ರಾಜ್ಯ ರಾಜಕಾರಣದಲ್ಲಿ ಹೊಸ ಚರ್ಚೆ ಶುರುವಾಗಿದೆ. ಈ ಹಿಂದೆ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರದ ಪತನಕ್ಕೆ ಕಾರಣವಾಗಿದ್ದ ಕಾಂಗ್ರೆಸ್ ಹಾಗೂ ಜೆಡಿಎಸ್ ನ ಹಲವು ಶಾಸಕರು ಬಿಜೆಪಿ ಸೇರ್ಪಡೆಯಾಗಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಕಾರಣರಾಗಿದ್ರು. ಆದರೆ, ಈಗೀನ ರಾಜ್ಯ ರಾಜಕೀಯದ ಬದಲಾವಣೆ ಹಾಗೂ ಬಿಜೆಪಿ ಸೋಲಿನಿಂದಾಗಿ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ವಲಸಿಗ ಬಿಜೆಪಿಗರು ಹೋಗಲಿದ್ದಾರೆ ಎನ್ನುವ ಚರ್ಚೆಗಳು ಶುರುವಾಗಿದೆ.
ಇತ್ತ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ಲೋಕಸಭಾ ಚುನಾವಣೆಯಲ್ಲಿಯೂ ಹೆಚ್ಚಿನ ಸ್ಥಾನ ಗೆಲ್ಲಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್ ಹಾಕಿದ್ದು, ಪ್ರಬಲ ಬಿಜೆಪಿ ನಾಯಕರನ್ನ ಸೆಳೆಯಲು ಕಾಂಗ್ರೆಸ್ ನಾಯಕರ ಸಜ್ಜಾಗಿದ್ದಾರೆ. ಇತ್ತ ಪಕ್ಷ ಬಿಟ್ಟು ಹೋದ ನಾಯಕರನ್ನ ಮತ್ತೆ ಸೆಳೆಯುತ್ತ ತಂತ್ರಕ್ಕೆ ಕೈ ಪಡೆ ಮುಂದಾಗಿದೆ ಎಂದು ಹೇಳಲಾಗುತ್ತಿದೆ.

ಇನ್ನೂ ಬಿಜೆಪಿ ಪಾಳಯದಲ್ಲಿ ಮೂಲ ಬಿಜೆಪಿಗರು ಹಾಗೂ ವಲಸಿಗ ಬಿಜೆಪಿಗರ ನಡುವೆ ಅಸಮಾಧಾನ ಮುಂದಾಗಿದ್ದು, ಕಾಂಗ್ರೆಸ್ ನಿಂದ ವಲಸೆ ಬಂದವರಿಂದ ಬಿಜೆಪಿ ಪಕ್ಷದಲ್ಲಿ ಅಶಿಸ್ತು ಹೆಚ್ಚಾಗಿದೆ. ಕಾಂಗ್ರೆಸ್ ಗಾಳಿ ಪಕ್ಷದಲ್ಲಿ ಬೀಸಿದೆ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿಕೆ ನೀಡಿದ್ದು, ಈಶ್ವರಪ್ಪ ಹೇಳಿಕೆ ವಿರುದ್ದ ವಲಸಿಗರು ಕಿಡಿಕಾರಿದ್ದು, ಸರ್ಕಾರ ರಚೆನಯಾಗಿದ್ದು ಯಾರಿಂದ ಎಂದು ತೀವ್ರ ವಾಗ್ದಾಳಿ ನಡೆಸಿದ್ರು.
ಒಟ್ನಲಿ ಹಲವು ಬೆಳವಣೆಗಳ ನಡುವೆ ಕಾಂಗ್ರೆಸ್ ನಿಂದ ಬಿಜೆಪಿಗೆ ವಲಸೆ ಹೋದ ಹಲವು ನಾಯಕರು ಮತ್ತೆ ಮರಳಿ ಮನೆಗೆ ಬರಲಿದ್ದಾರೆ ಎಂಬ ಚರ್ಚೆಗಳು ಶುರುವಾಗಿದ್ದು, ಹಲವು ನಾಯಕರನ್ನ ಸೆಳೆಯಲು ಕಾರ್ಯತಂತ್ರ ನಡೆಯುತ್ತಿದೆ ಎಂದು ಹೇಳಲಾಗಿದೆ.












Click it and Unblock the Notifications