"ಜಿ. ಪರಮೇಶ್ವರ್ ಅವರೇ ನಿಮಗೆ ಇಲಾಖೆಯ ಮೇಲೆ ಹಿಡಿತವಿಲ್ಲವೇ"
ರಾಜ್ಯ ಸರ್ಕಾರವು ಹಿಂದೂ ವಿರೋಧ ನೀತಿ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯದ ದಮನಕ್ಕೆ ಪದೇ ಪದೇ ಪ್ರಯತ್ನಿಸುತ್ತಿದೆ ಎಂದು ಬಿಜೆಪಿ ಮುಖಂಡ ಹಾಗೂ ಶಾಸಕ ಸುನೀಲ ಕುಮಾರ್ ಅವರು ದೂರಿದ್ದು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಗೃಹ ಸಚಿವ ಜಿ ಪರಮೇಶ್ವರ್ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಅದರಲ್ಲೂ ಗೃಹ ಸಚಿವರ ವಿರುದ್ಧ ಸರಣಿ ಟ್ವೀಟ್ ಮಾಡಿ ಯಕ್ಷಗಾನಕ್ಕೆ ಅಡ್ಡಿಪಡಿಸಲಾಗಿದೆ ಎಂದು ದೂರಿದ್ದಾರೆ. ಘಟನೆಯ ಹಿನ್ನೆಲೆಯ ಏನು, ಸರಣಿ ಟ್ವೀಟ್ ಮಾಡಿ ಸುನೀಲ್ ಅವರು ಕೆಂಡಾಮಂಡಲರಾಗಿದ್ದೇಕೆ ಅನ್ನುವ ಡೀಟೆಲ್ಸ್ ನೋಡೋಣ...

ಬಿಜೆಪಿ ಶಾಸಕ ಸುನೀಲ ಅವರು ರಾಜ್ಯ ಸರ್ಕಾರದ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. ಅದರಲ್ಲೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಕೆಲಸಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ. ಜಿ ಪರಮೇಶ್ವರ್ ಅವರೇ ಯಕ್ಷಗಾನದಿಂದ ಕಾನೂನು ಸುವ್ಯವಸ್ಥೆ ಹದೆಗೆಡುತ್ತದೆಯೇ. ಇಲ್ಲವೇ ಯಕ್ಷಗಾನದಿಂದ ಯಾರ ಮನಸಿಗಾದರೂ ನೋವಾಗುತ್ತದೆಯೇ. ನೀವೊಬ್ಬರು ಸಭ್ಯ ಹಾಗೂ ಸುಸಂಸ್ಕೃತ ವ್ಯಕ್ತಿ ಎಂದು ನಾವೆಲ್ಲ ಭಾವಿಸಿದ್ದೇ ಈಗ ಸುಳ್ಳಾಗಿದೆ ಎಂದು ಸುನೀಲ್ ಅವರು ಹೇಳಿದ್ದಾರೆ.
ಮುಂದುವರಿದು ನಿಮ್ಮ ಅವಧಿಯಲ್ಲಿ ಪೊಲೀಸ್ ಇಲಾಖೆ ಎಂಬುದು ಅಭಿವ್ಯಕ್ತಿ ಸ್ವಾತಂತ್ರ್ಯದ ದಮನಕ್ಕೆ ಪದೇ ಪದೇ ಬಳಕೆಯಾಗುತ್ತಿದೆ ಎಂಬುದು ಆತ್ಯಂತ ಬೇಸರದ ಸಂಗತಿಯಾಗಿದೆ. ವಾಕ್ ಸ್ವಾತಂತ್ರ್ಯ, ಸಂವಿಧಾನ ಇತ್ಯಾದಿ ವಿಚಾರಗಳು ನಿಮಗೆ ಭಾಷಣದ ಸರಕಾಗಿ ಬಿಟ್ಟಿದೆ.
ಇಲ್ಲವಾದರೆ ಕಾರ್ಕಳ ತಾಲ್ಲೂಕಿನ ಶಿರ್ಲಾಲು ಗ್ರಾಮದ ಮುಂಡ್ಲಿಯಲ್ಲಿ ನಿನ್ನೆ ನಡೆಯುತ್ತಿದ್ದ ಯಕ್ಷಗಾನ ಪ್ರದರ್ಶನವನ್ನು ಸ್ಥಳೀಯ ಕಾಂಗ್ರೆಸ್ ಮುಖಂಡನ ದೂರಿನ ಮೇರೆಗೆ ಸ್ಥಗಿತಗೊಳಿಸಲು ಹೊರಟಿದ್ದು ಎಷ್ಟು ಸರಿ. ಯಕ್ಷಗಾನ ಕರಾವಳಿ ಜಿಲ್ಲೆಗಳ ಪ್ರಾರಂಪರಿಕ ಕಲೆಯಾಗಿದ್ದು ರಾತ್ರಿ ಪೂರ್ತಿ ಪ್ರದರ್ಶನಗೊಳ್ಳುತ್ತದೆ ಎಂದು ತಿವಿದಿದ್ದಾರೆ.
ಮುಂದುವರಿದು ಕಾಂಗ್ರೆಸ್ ನಾಯಕ ದೂರು ಕೊಟ್ಟ ಎಂಬ ಕಾರಣಕ್ಕೆ ಎಸ್ಪಿಯೇ ಯಕ್ಷಗಾನ ನಿಲ್ಲಿಸಲು ಪೊಲೀಸರನ್ನು ಕಳುಹಿಸಿದ್ದು ಎಷ್ಟು ಸರಿ. ಸಾಲದಕ್ಕೆ ಮರುದಿನ ಯಕ್ಷಗಾನ ಆಯೋಜಕರ ಮೇಲೆ ಮೊಕದ್ದಮೆ ದಾಖಲಿಸುವ ಮೂಲಕ ನಿಮ್ಮ ಪೊಲೀಸರು ಎಫ್‌ಐಆರ್ ಸರ್ಕಾರ ನಡೆಸಲು ಹೊರಟಿದ್ದಾರಾ ಎಂದು ಅವರು ಕೇಳಿದ್ದಾರೆ. ಇಂದು ಯಕ್ಷಗಾನ.
ನಾಳೆ ಕಂಬಳ, ಭೂತಕೋಲ ಇತ್ಯಾದಿ ಧಾರ್ಮಿಕ ಆಚರಣೆಗಳನ್ನು ಕಾಂಗ್ರೆಸ್ ನಾಯಕರು ದೂರು ಕೊಟ್ಟರೆಂದು ನಿಲ್ಲಿಸುತ್ತೀರಾ. ರಾಜ್ಯದ ಮುಖ್ಯಮಂತ್ರಿಯಾಗಬೇಕೆಂಬ ಕನಸು ಕಾಣುತ್ತಿರುವ ನಿಮಗೆ ನಾಡಿನ ಸಾಂಸ್ಕೃತಿಕ ಆಯಾಮದ ಬಗ್ಗೆ ಕಲ್ಪನೆ ಇಲ್ಲವೋ ಅಥವಾ ಇಲಾಖೆಯ ಮೇಲೆ ಹಿಡಿತವಿಲ್ಲವೋ ಎಂದು ಕಾರವಾಗಿ ಪ್ರಶ್ನೆ ಮಾಡಿದ್ದಾರೆ.
ಹಿನ್ನೆಲೆ ಏನು: ಬಿಜೆಪಿ ಶಾಸಕ ಸುನೀಲ ಕುಮಾರ್ ಅವರು ಈ ರೀತಿ ಆಕ್ರೋಶ ವ್ಯಕ್ತಪಡಿಸುವುದಕ್ಕೆ ಯಕ್ಷಗಾನ ಕಾರ್ಯಕ್ರಮವನ್ನು ನಿಲ್ಲಿಸುವುದರೊಂದಿಗೆ ಪ್ರಾರಂಭವಾಗಿದೆ. ಅಲ್ಲದೆ ಸ್ಥಳೀಯ ಕಾಂಗ್ರೆಸ್ ನಾಯಕರ ಹಸ್ತಕ್ಷೇಪದಿಂದಲೇ ಈ ರೀತಿ ಮಾಡಲಾಗಿದೆ ಎಂದು ಶಾಸಕ ಸುನೀಲ ಕುಮಾರ್ ಅವರು ಆರೋಪ ಮಾಡಿದ್ದಾರೆ. ಸರಣಿ ಟ್ವೀಟ್ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ.












Click it and Unblock the Notifications