ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯಡಿಯೂರಪ್ಪ ಮೇಲೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ತೀವ್ರ ವಾಗ್ದಾಳಿ!

|
Google Oneindia Kannada News

ಬೆಂಗಳೂರು, ಫೆ. 25: ಬೆಂಗಳೂರಿನಲ್ಲಿ ನಡೆದಿದ್ದ ಪಂಚಮಸಾಲಿ ಮೀಸಲಾತಿ ಸಮಾವೇಶದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಿಎಂ ಯಡಿಯೂರಪ್ಪ ಹಾಗೂ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದರು. ಆದರೆ ಸಮಾವೇಶದ ಬಳಿಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಹಿರಂಗವಾಗಿ ಕಾಣಿಸಿಕೊಂಡಿರಲಿಲ್ಲ. ಹೀಗಾಗಿ ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ಅವರು ದೆಹಲಿಗೆ ತೆರಳಿದ್ದಾರೆ ಎಂಬ ಸುದ್ದಿ ಹರಡಿತ್ತು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮೇಲೆ ಮಾಡಿದ್ದ ಆರೋಪಗಳಿಗೆ ಸಂಬಂಧಿಸಿದಂತೆ ಯತ್ನಾಳ್ ಅವರಿಗೆ ಹೈಕಮಾಂಡ್ ಬುಲಾವ್ ನೀಡಿದೆ ಎಂಬ ಸುದ್ದಿಗಳು ಬಿಜೆಪಿ ವಲಯದಿಂದಲೇ ಕೇಳಿ ಬಂದಿದ್ದವು.

ಆದರೆ ಅವೆಲ್ಲವನ್ನು ಅಲ್ಲಗಳೆದಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಯಡಿಯೂರಪ್ಪ ಹಾಗೂ ಅವರ ಪುತ್ರ ಬಿವೈ ವಿಜಯೇಂದ್ರ ಮೇಲೆ ಮತ್ತೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಾನೆಲ್ಲೂ ಹೋಗಿಲ್ಲ. ನನಗ್ಯಾರ ಭಯವೂ ಇಲ್ಲ ಎಂದು ಯತ್ನಾಳ್ ಅವರು ತಮ್ಮ ದೆಹಲಿ ಪ್ರವಾಸದ ಕುರಿತು ಹೇಳಿದ್ದಾರೆ. ಜೊತೆಗೆ ದೆಹಲಿಗೆ ಹೋಗಿದ್ಯಾಕೆ ಎಂಬುದನ್ನು ಅವರು ವಿವರಿಸಿದ್ದಾರೆ.

ಸ್ವಂತ ಕೆಲಸವಿತ್ತು, ಹೋಗಿದ್ದೆ

ಸ್ವಂತ ಕೆಲಸವಿತ್ತು, ಹೋಗಿದ್ದೆ

ನಾನು ದೆಹಲಿಗೆ ವೈಯಕ್ತಿಕ ಕೆಲಸದ ನಿಮಿತ್ತ ಹೋಗಿದ್ದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸ್ಪಷ್ಟಪಡಿಸಿದ್ದಾರೆ. ವಿಜಯಪುರದ ಸಿದ್ಧೇಶ್ವರ ಸಂಸ್ಥೆಯ ಅಡಿಯಲ್ಲಿ ನಿರ್ಮಿಸಲಾದ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಶಿಶು ನಿಕೇತನ ಶಾಲೆಯನ್ನು ತುರ್ತಾಗಿ ಸಿಬಿಎಸ್‌ಸಿಇ ನೋಂದಣಿ ಮಾಡಸಬೇಕಾಗಿತ್ತು. ಹೀಗಾಗಿ ದೆಹಲಿಗೆ ಹೋಗಿದ್ದೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಯಾರ ಬುಲಾವು ಇಲ್ಲ!

ಯಾರ ಬುಲಾವು ಇಲ್ಲ!

ನನಗೆ ಪಕ್ಷದ ಹೈಕಮಾಂಡ್ ಯಾವುದೇ ರೀತಿಯ ತುರ್ತು ಬುಲಾವ್ ಆಗಲಿ ಅಥವಾ ಸಮಯ ಕೊಟ್ಟು ನನ್ನ ವಿಚಾರಣೆಗೆ ಕರೆದಿಲ್ಲ. ನಾನು ಯಾವುದೇ ನಾಯಕರ ಭೇಟಿಗೆ ಸಮಯ ಕೇಳಲಿಲ್ಲ ಎಂದು ಇದೇ ಸಂದರ್ಭದಲ್ಲಿ ಶಾಸಕ ಯತ್ನಾಳ್ ಅವರು ಸ್ಪಷ್ಟಪಡಿಸಿದ್ದಾರೆ. ಸಮಾವೇಶದಲ್ಲಿ ಯತ್ನಾಳ್ ಅವರ ಹೇಳಿಕೆಗಳಿಂದ ಸಿಎಂ ಯಡಿಯೂರಪ್ಪ ಅವರಿಗೆ ತೀವ್ರ ಮುಜುಗುರವಾಗಿತ್ತು. ಹೀಗಾಗಿ ಹೈಕಮಾಂಡ್ ಯತ್ನಾಳ್ ಅವರನ್ನು ಕರೆಯಿಸಿಕೊಂಡಿತ್ತು ಎಂದು ವರದಿಯಾಗಿತ್ತು. ಆದರೆ ಅವನ್ನೆಲ್ಲ ಯತ್ನಾಳ್ ಅವರು ಅಲ್ಲಗಳೇದಿದ್ದಾರೆ.

ತಂದೆ ಮಗನ ಷಡ್ಯಂತ್ರ

ತಂದೆ ಮಗನ ಷಡ್ಯಂತ್ರ

ನಾನು ದೆಹಲಿಗೆ ತೆರಳಿದ್ದನ್ನು ಹೈಕಮಾಂಡ್ ಬುಲಾವ್ ಎಂದು ತಂದೆ-ಮಗ (ಸಿಎಂ ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ) ಸುಳ್ಳು ಸುದ್ದಿ ಮಾಡಿಸಿದ್ದಾರೆ. ಬಲ್ಲ ಮೂಲಗಳಿಂದ ಎಂದು ಮಾಧ್ಯಮಗಳಲ್ಲಿ ಹೇಳಿಸಿದ್ದಾರೆ. ಆ ಮೂಲಕ ರಾಜ್ಯದ ಜನರಲ್ಲಿ ಪಕ್ಷದ ಶಾಸಕರು ಮತ್ತು ಕಾರ್ಯಕರ್ತರಲ್ಲಿ ಆತಂಕ ಉಂಟಾಗುವಂತೆ ಮಾಡಲು ಯತ್ನಿಸಿದ್ದಾರೆ. ಯತ್ನಾಳನಿಗೆ ಮುಖಭಂಗ, ಬೀಗ್ ಶಾಕ್ 'ಎಚ್ಚರಿಕೆ ಮತ್ತು ಬಾಯಿಗೆ ಬೀಗ' ಅಂತ ವ್ಯವಸ್ಥಿತ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಸಿಎಂ ಯಡಿಯೂರಪ್ಪ ಹಾಗು ಅವರ ಪುತ್ರ ವಿಜಯೇಂದ್ರ ಅವರ ಮೇಲೆ ಶಾಸಕ ಯತ್ನಾಳ್ ಮತ್ತೆ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

ಹೈಕಮಾಂಡ್ ಭೇಟಿ ಮಾಡಿಲ್ಲ

ಹೈಕಮಾಂಡ್ ಭೇಟಿ ಮಾಡಿಲ್ಲ

ಜೊತೆಗೆ ನಾನು ಯಾರನ್ನೂ ಭೇಟಿಯಾಗಿಲ್ಲ ಮತ್ತು ಯಾರ ಸಮಯವನ್ನೂ ಕೇಳಲಿಲ್ಲ ಎಂದು ಹೈಕಮಾಂಡ್ ಭೇಟಿ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ನನ್ನ ಹೋರಾಟ ನನ್ನ ಆದರ್ಶ, ಗುರು ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಹಾಗೂ ನಮ್ಮ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರ ಸಂಕಲ್ಪದ ಹೋರಾಟ. ನನ್ನ ಹೋರಾಟ ಕುಟುಂಬ ರಾಜಕಾರಣದ ವಿರುದ್ಧವೇ ಹೊರತು ಯಾವುದೇ ವ್ಯಕ್ತಿಯ ವಿರುದ್ಧ ಅಲ್ಲ. ನನ್ನ ಮಾತೃ ಪಕ್ಷದ ವಿರುದ್ಧವೂ ಅಲ್ಲ ಎಂದು ತಮ್ಮ ಹೇಳಿಕೆಗಳಿಗೆ ಮತ್ತೊಮ್ಮೆ ಸ್ಪಷ್ಟನೆ ಕೊಟ್ಟಿದ್ದಾರೆ.

Recommended Video

ಮಾರ್ಚ್ 1ರಿಂದ ಮೂರನೇ ಹಂತದ ಕೋವಿಡ್ ಲಸಿಕೆ ವಿತರಣೆ | Oneindia Kannada
ಆಮೇಲೆ ನೋಡಿಕೊಳ್ತೇನೆ!

ಆಮೇಲೆ ನೋಡಿಕೊಳ್ತೇನೆ!

ಜೊತೆಗೆ ಸಚಿವರಾದ ಮುರುಗೇಶ್ ನಿರಾಣಿ ಹಾಗೂ ಸಿ.ಸಿ. ಪಾಟೀಲ್ ಅವರ ಹೆಸರು ಹೇಳದೆಯೇ ಅವರ ವಿರುದ್ಧ ಯತ್ನಾಳ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದ ಇಬ್ಬರು ಸಚಿವರು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ನನ್ನ ಬಗ್ಗೆ ಮತ್ತು ನಮ್ಮ ಪೂಜ್ಯರ ಬಗ್ಗೆ ಅತ್ಯಂತ ಹಗುರವಾಗಿ ಮಾತನಾಡಿದ್ದಾರೆ. ಸದ್ಯದಲ್ಲಿ ಅದಕ್ಕೆ ಸೂಕ್ತ ಉತ್ತರ ಕೊಡುತ್ತೆನೆ. ಹಿಂದೂ ಸಮಾಜದಲ್ಲಿಯ ಸಾಮಾಜಿಕ ನ್ಯಾಯಕ್ಕಾಗಿ ನನ್ನ ಹೋರಾಟ ನಿಲ್ಲುವುದಿಲ್ಲ ಅಂಜುವುದಿಲ್ಲ, ಬಗ್ಗುವದು ಇಲ್ಲ ಮತ್ತು ಪಲಾಯನ ಇಲ್ಲವೆ ಇಲ್ಲ ಎಂದು ವಿಜಯಪುರ ಶಾಶಕ ಬಸನಗೌಡ ಪಾಟೀಲ್ ಯತ್ನಾಳ್ ಎಚ್ಚರಿಸಿದ್ದಾರೆ.

English summary
After returning from Delhi Vijayapura BJP MLA Basanagouda Patil Yatnal has made a fierce argument over CM Yeddyurappa and his son BY Vijayendra.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X