ಜನರ ಕಿವಿಗೆ ಹೂವಿಟ್ಟು ಗ್ಯಾರೆಂಟಿ ಎಂಬ ಚಿಪ್ಪು ಕೊಟ್ಟ ಕಾಂಗ್ರೆಸ್ ಸರ್ಕಾರ-ಸಿ.ಟಿ ರವಿ
ಬೆಂಗಳೂರು, ಜೂನ್.16: ರಾಜ್ಯ ಕಾಂಗ್ರೆಸ್ ಸರ್ಕಾರ ಪೆಟ್ರೋಲ್ ಮೇಲೆ 3 ರೂಪಾಯಿ, ಡಿಸೇಲ್ ಬೆಲೆಯಲ್ಲಿ ಮೂರೂವರೆ ರೂಪಾಯಿ ಏರಿಕೆ ಮಾಡಿದೆ. ಸರ್ಕಾರದ ಈ ನಡೆಗೆ ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಚಿಕ್ಕಮಗಳೂರು ಬಿಜೆಪಿ ಕಾರ್ಯಕರ್ತರು ವಿನೂತನ ಪ್ರತಿಭಟನೆ ನಡೆಸಿದ್ದಾರೆ. ಕಿವಿಯಲ್ಲಿ ದಾಸವಾಳ ಮುಡಿದು, ಕೈಯಲ್ಲಿ ತೆಂಗಿನ ಚಿಪ್ಪು ಹಿಡಿದು ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರ ವಿರುದ್ಧ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಕಿಡಿಕಾರಿದ್ದಾರೆ. ರಾಜ್ಯದ ಜನತೆಯ ಕಿವಿಯ ಮೇಲೆ ಹೂವಿಟ್ಟು ಗ್ಯಾರೆಂಟಿ ಎಂಬ ಚಿಪ್ಪು ಕೊಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ. ಕನ್ನಡಿಗರಿಗೆ ಪದೇ ಪದೇ ಬೆಲೆ ಏರಿಕೆಯ ಬರೆ ಹಾಕುವುದೇ ಕಾಂಗ್ರೆಸ್ ಸರ್ಕಾರದ ಅಸಲಿ ಕರ್ನಾಟಕ ಮಾಡೆಲ್.

ಬಡವರ ವಿರೋಧಿ ಕಾಂಗ್ರೆಸ್ ಸರ್ಕಾರ ಏಕಾಏಕಿ ಪೆಟ್ರೋಲ್ ಬೆಲೆಯನ್ನು ಪ್ರತಿ ಲೀಟರಿಗೆ 3 ರೂಪಾಯಿ ಹಾಗೂ ಡಿಸೇಲ್ ಬೆಲೆಯನ್ನು ಪ್ರತಿ ಲೀಟರಿಗೆ 3.50 ರೂಪಾಯಿಯಷ್ಟು ಹೆಚ್ಚಿಸಿದೆ. ಇದನ್ನು ವಿರೋಧಿಸಿ ಭಾರತೀಯ ಜನತಾ ಯುವ ಮೋರ್ಚ, ಚಿಕ್ಕಮಗಳೂರು ಜಿಲ್ಲೆ ಇದರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ಕೆಲ ದಿನದ ಹಿಂದೆ ರಾಜ್ಯ ಸರ್ಕಾರದ ಬೊಕ್ಕಸ ತುಂಬಿ ತುಳುಕುತ್ತಿದೆ, ಕರ್ನಾಟಕ ದಿವಾಳಿ ಸಹ ಆಗಿಲ್ಲ ಎಂದ ನೀವು ಈಗ ದಿಢೀರ್ ಅಂತ ಮಾಡಿದ ಈ ಬೆಲೆಯೇರಿಕೆ ಯಾವ ಪುರುಷಾರ್ಥಕ್ಕೆ..? ನಿಮಗೆ ನಿಜಕ್ಕೂ ಬಡವರ ಮೇಲೆ ಕಾಳಜಿ ಇದ್ದರೆ, ಕೂಡಲೇ ಬೆಲೆ ಏರಿಕೆ ಆದೇಶವನ್ನು ಹಿಂಪಡೆಯಿರಿ ಎಂದು ಆಗ್ರಹಿಸಿದರು.
ಪೆಟ್ರೋಲ್ ಡಿಸೇಲ್ ಮೇಲೆ ಸೆಸ್ ವಿಧಿಸಿದ ಜನ ವಿರೋಧಿ, ಬಡವರ ವಿರೋಧಿ ಸರ್ಕಾರ. ಉಚಿತ ಉಚಿತ ಉಚಿತ ಎಂದು ರಾಜ್ಯದ ಜನರ ಮುಂಗೈಗೆ ತುಪ್ಪ ಹಚ್ಚುತ್ತಾ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಕಳೆದ ಒಂದು ವರ್ಷದ ಅಧಿಕಾರಾವಧಿಯಲ್ಲಿ ಎರಡಕ್ಕೂ ಹೆಚ್ಚು ಬಾರಿ ಪೆಟ್ರೋಲ್ ಮೇಲಿನ ಸೆಸ್ ಜಾಸ್ತಿ ಮಾಡಿದೆ.

ರಾಜ್ಯದಲ್ಲಿ ಇಂದಿನಿಂದ ಪೆಟ್ರೋಲ್ ಬೆಲೆ ಸರಾಸರಿ ಮೂರೂ ರೂಪಾಯಿ ಹಾಗು ಡಿಸೇಲ್ ಬೆಲೆ ಸರಾಸರಿ ಮೂರುವರೆ ರೂಪಾಯಿಯಷ್ಟು ಜಾಸ್ತಿ ಮಾಡಿದೆ. ನಾನು ಬಡವರ ಪರ ನಾನು ಬಡವರ ಪರ ಎಂದು ಬೊಬ್ಬೆ ಹೊಡೆಯುವ ಮುಖ್ಯಮಂತ್ರಿಯವರೇ ಇದೆ ಏನು ನಿಮ್ಮ ಬಡವರ ಪರ ನೀತಿ?
ನಾಚಿಕೆಯಾಗಬೇಕು, ನಿಮ್ಮ ಜನ ವಿರೋಧಿ ಸರ್ಕಾರಕ್ಕೆ ನಾಚಿಕೆಯಾಗಬೇಕು ನಿಮ್ಮ ಕಾಂಗ್ರೆಸ್ ಸರ್ಕಾರಕ್ಕೆ ಎಂದು ಸಿ.ಟಿ ರವಿ ಕಿಡಿಕಾರಿದ್ದಾರೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು?












Click it and Unblock the Notifications