ಸದನದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ವೇ* ಎಂದರಾ ಸಿ.ಟಿ.ರವಿ: ಕಣ್ಣೀರಿಡುತ್ತಾ ಹೊರನಡೆದ ಸಚಿವೆ, ವ್ಯಾಪಕ ಆಕ್ರೋಶ
ಬೆಳಗಾವಿ, ಡಿಸೆಂಬರ್19: ಸಂಸತ್ನಲ್ಲಿ ಬಿ ಆರ್ ಅಂಬೇಡ್ಕರ್ ಅವರ ವಿಚಾವಾಗಿ ಆಡಳಿತರೂಢ ಎನ್ಡಿಎ ಸದಸ್ಯರು ಹಾಗೂ ವಿಪಕ್ಷ ಸದಸ್ಯರ ನಡುವೆ ದೊಡ್ಡ ಮೊಟ್ಟದ ಆರೋಪ ಪ್ರತ್ಯಾರೋಪವಾಗಿದೆ. ಬಿಜೆಪಿ ಹಾಗೂ ಕಾಂಗ್ರೆಸ್ ಸದಸ್ಯರ ನಡುವೆ ತೀವ್ರ ನೂಕಾಟ ತಳ್ಳಾಟದಿಂದ ಇಬ್ಬರು ಸಂಸದರ ಕೆಳಗೆ ಬಿದ್ದು ಗಾಯಗೊಂಡಿದ್ದಾರೆ. ಇತ್ತ ಕರ್ನಾಟಕ ವಿಧಾನಪರಿಷತ್ ಚಳಿಗಾಲದ ಅಧಿವೇಶನದಲ್ಲೂ ಇದೇ ವಿಚಾರ ಪ್ರತಿಧ್ವನಿಸಿದೆ.
ಈ ಕುರಿತು ಪರಸ್ಪರ ಚರ್ಚೆಯ ವೇಳೆ ಬಿಜೆಪಿ ಸದಸ್ಯ ಸಿಟಿ ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಅಶ್ಲೀಲ ಪದದಿಂದ ಬೈದಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಸದನದ ಹೊರಗೆ ಹಾಗೂ ಒಳಗೆ ದೊಡ್ಡ ಮಟ್ಟದ ಕೋಲಾಹಲ ಸೃಷ್ಟಿಯಾಗಿದೆ.

ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ವೇ* ಎಂಬ ಪದವನ್ನು ಬಳಕೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸಿ.ಟಿ. ರವಿ ಅವರು ಲಕ್ಷ್ಮಿ ಹೆಬ್ಬಾಳ್ಕರ್ ವೇ* ಎಂದು ಹೇಳಿದ್ದಾರೆ. ಈ ಪದವನ್ನು ಬಳಕೆ ಮಾಡಿದ್ದರಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕೆಂಡಾಮಂಡಲವಾಗಿದ್ದಾರೆ. ಇದರಿಂದ ತಮಗಾದ ಅವಮಾನ ತಡೆದುಕೊಳ್ಳಲಾಗದೇ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕಣ್ಣಿರು ಹಾಕುತ್ತಾ ಪರಿಷತ್ತಿನಿಂದ ಹೊರಗೆ ಹೋಗಿದ್ದಾರೆ.
ಅಶ್ಲೀಲ ಪದ ಬಳಿಕೆ ಮಾಡಿರುವ ಸಿಟಿ ರವಿ ವಿರುದ್ಧ ಕಾಂಗ್ರೆಸ್ ಸದಸ್ಯರು ಮುಗಿಬಿದ್ದಿದ್ದು, ಸೂಕ್ತ ಕ್ರಮಕೈಗೊಳ್ಳುವಂತೆ ಸಭಾಪತಿಗೆ ಮನವಿ ಮಾಡಿದ್ದಾರೆ. ಸಭಾಪತಿ ಬಸವರಾಜ್ ಹೊರಟ್ಟಿ ಚೇಂಬರ್ ನಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್, ಪ್ರಿಯಾಂಕ್ ಖರ್ಗೆ., ಬೋಸರಾಜ್ ಲಕ್ಷ್ಮಿ ಹೆಬ್ಬಾಳ್ಕರ್, ಹೆಚ್ ಕೆ ಪಾಟೀಲ್ ಮಾತುಕತೆ ನಡೆಸಿದ್ದಾರೆ.
ಈ ಬಗ್ಗೆ ಬಿಜೆಪಿ ಸದಸ್ಯರಾದ ಸಿ.ಟಿ. ರವಿ ಅವರು ಹಾಗೇ ಮಾತನಾಡಿಲ್ಲ ಎಂದು ವಾದ ಮಾಡಿದ್ದಾರೆ. ಇನ್ನು ಈ ಘಟನೆ ನಡೆಯುವ ಸ್ವಲ್ಪ ಮುಂಚೆ ಸಿ.ಟಿ. ರವಿ ಹೊರಗೆ ಹೋಗಿದ್ದಾರೆ. ಸಿ.ಟಿ. ರವಿ ಹೊರಗೆ ಹೋದ ಬಳಿಕ ಗಲಾಟೆ ಜೋರಾಗಿ ಕಾಂಗ್ರೆಸ್ ಸದಸ್ಯರು ಕೂಡ ಹೊರಗೆ ಎದ್ದು ಹೋಗಿದ್ದಾರೆ. ಈ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮೀಡಿಯಾ ಗ್ಯಾಲರಿ ಬಳಿ ಬಂದು ತಮಗಾದ ನೋವಿನ ಬಗ್ಗೆ ಹೇಳಿಕೊಂಡು ಕಣ್ಣೀರು ಹಾಕಿದ್ದಾರೆ. ಇದರ ಬೆನ್ನಲ್ಲಿಯೇ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಬಿಜೆಪಿ ಸದಸ್ಯ ಸಿ.ಟಿ. ರವಿಅವರ ವಿರುದ್ಧ ದೂರು ನೀಡಿದ್ದಾರೆ.
ಇದರ ಬೆನ್ನಲ್ಲಿಯೇ ಸಭಾಪತಿ ಬಸವರಾಜ ಹೊರಟ್ಟಿ ಅವರು ಸದನದ ಆಡಿಯೋ, ವಿಡಿಯೊ ಪರಿಶೀಲನೆಗೆ ಸೂಚಿಸಿದ್ದಾರೆ. ಕಾರ್ಯದರ್ಶಿಯಿಂದ ಆಡಿಯೋ ವಿಡಿಯೋ ಪರಿಶೀಲನೆ ಮಾಡುತ್ತಿದ್ದಾರೆ. ಜೊತೆಗೆ, ಕಾಂಗ್ರೆಸ್‌ನಿಂದ ಸಿ.ಟಿ. ರವಿ ಅವರ ಅಮಾನತಿಗೆ ಸದನದಲ್ಲಿ ಆಗ್ರಹಿಸಲು ಸಿದ್ದತೆ ನಡೆಸಿದ್ದಾರೆ. ಕಲಾಪ ಆರಂಭವಾಗುತ್ತಿದ್ದಂತೆ ಅಮಾನತಿಗೆ ಆಗ್ರಹಿಸಲು ಕಾಂಗ್ರೆಸ್ ಸದಸ್ಯರು ಸಭಾಪತಿಗಳಿಗೆ ಮನವಿ ಮಾಡಲಿದ್ದಾರೆ.
ಇನ್ನೂ ಈ ಬಗ್ಗೆ ಸಿ ಟಿ ರವಿ ಅವರು ನಾನು ಆ ರೀತಿ ಪದ ಬಳಸಿಲ್ಲ ಎಂದು ಹೇಳಿದ್ದಾರೆ. ನಾನು ಕಪೋಲ ಕಲ್ಪಿತ ಪ್ರಶ್ನೆಗಳಿಗೆ ಮಾತಾಡಲ್ಲ. ದಾಖಲೆ ಇದ್ದರೆ ತೆಗೆಯಿರಿ. ನಾನು ಆ ತರ ಪದ ಬಳಸಿಲ್ಲ. ನಾನು ಈ ವಿಚಾರದಲ್ಲಿ ಸ್ಪಷ್ಟವಾಗಿದ್ದೀನಿ. ನಾನು ಆ ತರ ಪದ ಬಳಸೇ ಇಲ್ಲ. ನಾನು ಅಂಬೇಡ್ಕರ್ ಅವರ ಬಗ್ಗೆ ಮಾತಾನಾಡುತ್ತಿದ್ದೆನು. ನಾನು ಹಾಗೇ ಮಾತಾಡಿಲ್ಲ, ದಾಖಲೆ ಇದ್ದರೆ ತೆಗೆಸಿ ಎಂದು ಸಿ.ಟಿ. ರವಿ ಹೇಳಿದ್ದಾರೆ.












Click it and Unblock the Notifications