ಡಿ.ಕೆ.ಶಿವಕುಮಾರ್‌ಗೆ ಸಿಎಂ ಪಟ್ಟ ಸಿಗದಿರಲು ಇದೇ ಕಾರಣ..

ಸಿದ್ದರಾಮಯ್ಯ ಬಳಿಕ ರಾಜ್ಯದ ಸಿಎಂ ರೇಸ್‌ನಲ್ಲಿ ಮುಂಚೂಣಿಯಲ್ಲಿರುವುದು ಡಿಸಿಎಂ ಡಿ.ಕೆ.ಶಿವಕುಮಾರ್‌ ಎನ್ನುವುದು ಎಲ್ಲರಿಗೆ ಗೊತ್ತಿರುವ ವಿಚಾರ. ಆದರೆ, ಇದೀಗ ಮುಖ್ಯಮಂತ್ರಿ ಕುರ್ಚಿಯ ಬಗ್ಗೆಯೇ ಚರ್ಚೆಗಳು ಜೋರಾಗಿದ್ದು, ಈ ಒಪ್ಪಂದದ ಬಗ್ಗೆ ಡಿ.ಕೆ.ಶಿವಕುಮಾರ್ ಹೇಳಿಕೆ ಗಮನ ಸೆಳೆದಿದೆ. ಆದರೆ ನಿಜವಾಗಿ ಡಿಕೆ ಶಿವಕುಮಾರ್‌ ಅವರಿಗೆ ಯಾಕೆ ಸಿಎಂ ಸ್ಥಾನ ಸಿಗುತ್ತಿಲ್ಲ ಎಂದು ಬಿಜೆಪಿ ಕಾರಣ ನೀಡಿದೆ.

ಒಂದೆಡೆ ಸಿಎಂ ಬಣ, ಇನ್ನೊಂದೆಡೆ ಡಿಕೆ ಶಿವಕುಮಾರ್‌ ಬಣದ ಮೂಲಕ ಕಾಂಗ್ರೆಸ್‌ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ನಡೆಸುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಅಧಿಕಾರ ಹಂಚಿಕೆಯ ಒಪ್ಪಂದವಾಗಿತ್ತು ಎಂಬ ಸತ್ಯವನ್ನು ಡಿ.ಕೆ.ಶಿವಕುಮಾರ್‌ ಇಂದು ಬಹಿರಂಗವಾಗಿ ಹೇಳಿದ್ದಾರೆ. ಡಿಕೆಶಿಯವರ ಸಿಎಂ ಕುರ್ಚಿ ಕನಸನ್ನು ಸಿದ್ದರಾಮಯ್ಯ ಅವರು ಕಮರಿಸುವ ಯತ್ನವನ್ನು ನಿರಂತರವಾಗಿ ಮಾಡಿದ್ದಾರೆ ಎಂದು ವ್ಯಂಗ್ಯ ಮಾಡಿದೆ.

BJP Mocked DCM DK Shivakumar As Dreaming Of Becoming Karnataka CM

ಕೆಪಿಸಿಸಿ ಅಧ್ಯಕ್ಷರಾಗಿದ್ದರೂ ಡಿಕೆಶಿ ಅವರಿಗೆ ರಾಜ್ಯ ಕಾಂಗ್ರೆಸ್‌ ಪಕ್ಷದಲ್ಲಿ ಕವಡೆ ಕಾಸಿನ ಕಿಮ್ಮತ್ತು ಇಲ್ಲದಂತಾಗಿತ್ತು. ಶಾಸಕರನ್ನು ತನ್ನ ಅಂಕೆಯಲ್ಲಿಟ್ಟುಕೊಂಡು ಆಟವಾಡುತ್ತಿರುವ ವಲಸಿಗ ಸಿದ್ದರಾಮಯ್ಯ ಅವರಿಂದ ಡಿಕೆಶಿಯ ಸಿಎಂ ಕುರ್ಚಿ ಕನಸು ಕನಸಾಗಿಯೇ ಉಳಿದಿದೆ. ಮುಡಾ ಹಗರಣ ನಡೆದರೂ ಸಿದ್ದರಾಮಯ್ಯರನ್ನು ಸಿಎಂ ಕುರ್ಚಿಯಿಂದ ಇಳಿಸಲು ಡಿ.ಕೆ.ಶಿವಕುಮಾರ್‌ಗೆ ಸಾಧ್ಯವಾಗಿಲ್ಲ. ಇದೀಗ ಸಿದ್ದರಾಮಯ್ಯರವರ ಶಕ್ತಿ ಪ್ರದರ್ಶನಕ್ಕೆ ಹೈಕಮಾಂಡ್ ಮೊರೆ ಹೋಗಿ‌ ಬ್ರೇಕ್ ಹಾಕಲು ಮುಂದಾಗಿದ್ದಾರೆ. ಸಿದ್ದು ಮತ್ತು ಡಿಕೆಶಿ ಕುರ್ಚಿ ಕಾಳಗದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಎಂಬುದೇ ಮರೀಚಿಕೆಯಾಗಿದೆ ಎಂದು ವಾಗ್ದಾಳಿ ನಡೆಸಿದೆ.

ರಾಜ್ಯದಲ್ಲಿ ಅಧಿಕಾರಕ್ಕೆ ಸಂಬಂಧಿಸಿದಂತೆ ನಮ್ಮ ನಡುವೆ ಒಪ್ಪಂದವಾಗಿರುವುದು ಸತ್ಯ. ಆದರೆ ಅದರ ಬಗ್ಗೆ ಈಗ ಮಾತನಾಡುವುದು ಸರಿಯಲ್ಲ. ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಸದ್ಯಕ್ಕೆ ಖಾಲಿ ಇಲ್ಲ ಎಂದು ಡಿ.ಕೆ.ಶಿವಕುಮಾರ್‌ ಅವರು ಸಂದರ್ಶನವೊಂದರಲ್ಲಿ ಹೇಳಿಕೆ ನೀಡಿದ್ದಾರೆ. ಇದರ ಬೆನ್ನಲ್ಲೇ ಮತ್ತೆ ಮುಖ್ಯಮಂತ್ರಿ ಬದಲಾವಣೆಯ ಮಾತುಗಳು ಮುನ್ನೆಲೆಗೆ ಬಂದಿವೆ.

BJP Mocked DCM DK Shivakumar As Dreaming Of Becoming Karnataka CM

ಸಿಎಂ ಹುದ್ದೆ ಬಗ್ಗೆ ಸದ್ಯಕ್ಕೆ ಚರ್ಚೆ ಬೇಡ. ನಾನು ಈಗ ಡಿಸಿಎಂ ಆಗಿ ಕೆಲದಲ್ಲಿ ತೊಡಗಿದ್ದೇನೆ. ನಮ್ಮ ಸಿದ್ದರಾಮಯ್ಯನವ್ರು ಸಿಎಂ ಆಗಿದ್ದಾರೆ. ರಾಜ್ಯದ ಅಭಿವೃದ್ಧಿಗಾಗಿ ಇಬ್ಬರೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದೇವೆ. ನಮ್ಮಿಬ್ಬರ ನಡುವೆ ಯಾವ ಭಿನ್ನಾಭಿಪ್ರಾಯವೂ ಇಲ್ಲ. ಆದರೆ ಅಧಿಕಾರ ಹಂಚಿಕೆ ಸಂಬಂಧ ನಮ್ಮಿಬ್ಬರ ನಡುವೆ ಒಪ್ಪಂದವಂತೂ ಆಗಿದೆ. ಅದನ್ನು ಸಮಯ ಬಂದಾಗ ಹೇಳುತ್ತೇನೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ನನ್ನ ಶಕ್ತಿ ಹಾಗೂ ದೌರ್ಬಲ್ಯ ಎರಡೂ ನನಗೆ ಗೊತ್ತಿದೆ. ಅದರಿಂದಲೇ ನನ್ನ ಕೆಲಸಗಳನ್ನು ಅಚ್ಚುಕಟ್ಟಾಗಿ ಮಾಡಿದ್ದೇನೆ. ಹೈಕಮಾಂಡ್‌ಗೆ ಬ್ಲ್ಯಾಕ್‌ಮೇಲ್‌ ಮಾಡಿಲ್ಲ, ಇದೇ ನನ್ನ ವೀಕ್‌ನೆಸ್‌ ಎಂದು ಡಿಕೆಶಿ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್‌ನ ನಿರ್ಧಾರಕ್ಕೆ ನಾನು ಸದಾ ಬದ್ಧನಾಗಿರುತ್ತೇನೆ, ಹೈಕಮಾಂಡ್‌ಗೆ ವಿರೋಧವಾಗಿ ನಾನು ನಡೆದುಕೊಳ್ಳಲ್ಲ. ಗಾಂಧಿ ಫ್ಯಾಮಿಲಿ ಮೇಲೆ ನನಗರ ಬಹಳ ಪ್ರೀತಿ ಇದ್ದು, ಅವರಿಗೆ ನಾನು ಇಲ್ಲಿವರೆಗೆ ನ್ಯಾಯಯುತವಾಗಿಯೇ ಇದ್ದೇನೆ. ಇದಕ್ಕೆ ಒಂದಲ್ಲಾ ಒಂದು ದಿನ ಫ್ರತಿಫಲ ಸಿಕ್ಕೇ ಸಿಗುತ್ತೆ ಎಂದೂ ಡಿ.ಕೆ.ಶಿವಕುಮಾರ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+