ಕಾವೇರಿ ಹೋರಾಟದ ಕಿಚ್ಚು: ತಮಿಳುನಾಡು ಮುಖ್ಯಮಂತ್ರಿಗೆ ಪತ್ರ ಬರೆದ ಬಿಜೆಪಿ ಸಂಸದ ಲೆಹರ್ ಸಿಂಗ್!
ಬೆಂಗಳೂರು, ಸೆಪ್ಟೆಂಬರ್ 28: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕುರಿತು ರಾಜ್ಯಾದ್ಯಂತ ಕಾವೇರಿ ಹೋರಾಟ ನಡೆಯುತ್ತಿದೆ. ಇನ್ನೂ ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಗೆ ರಾಜ್ಯಸಭಾ ಸದಸ್ಯರಾದ ಲೆಹರ್ ಸಿಂಗ್ ಪತ್ರ ಬರೆದಿದ್ದಾರೆ.
ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳು ಸಹೋದರರಂತೆ ಪರಸ್ಪರರ ಅಗತ್ಯತೆಗಳು ಮತ್ತು ಸವಾಲುಗಳನ್ನು ಅರ್ಥಮಾಡಿಕೊಂಡು, ಲಭ್ಯವಿರುವ ಸೀಮಿತ ನೀರನ್ನು ಸಮಾನವಾಗಿ ಹಂಚಿಕೊಳ್ಳುವ ಮೂಲಕ ಸಮಸ್ಯೆ ಬಗೆಹರಿಸಬೇಕು ಎಂದು ಮನವಿ ಮಾಡಿದ್ದಾರೆ. ಈ ನಿಟ್ಟಿನಲ್ಲಿ ತಮಿಳುನಾಡು ಮತ್ತು ಕರ್ನಾಟಕದ ಮುಖ್ಯಮಂತ್ರಿಗಳು ಪರಸ್ಪರ ಭೇಟಿಯಾಗಿ ಪರಿಸ್ಥಿತಿಯನ್ನು ಚರ್ಚಿಸಿದಾಗ ಮಾತ್ರ ಇದು ಸಾಧ್ಯ ಎಂದು ಪತ್ರದ ಮೂಲಕ ಲೆಹರ್ ಸಿಂಗ್ ತಿಳಿಸಿದ್ದಾರೆ.

ಎಂಕೆ ಸ್ಟಾಲಿನ್ ಗೆ ಬರೆದ ಪತ್ರದಲ್ಲಿ ಏನಿದೆ?
ಕರ್ನಾಟಕ ಮತ್ತು ತಮಿಳುನಾಡು ನಡುವಿನ ಸಂಕಷ್ಟದ ಕಾಲದ ಕಾವೇರಿ ನದಿ ನೀರು ಹಂಚಿಕೆ ವಿವಾದದ ಸೂಕ್ಷ್ಮ ಸಂದರ್ಭದಲ್ಲಿ ನಾನು ಈ ಪತ್ರವನ್ನು ಬರೆಯುತ್ತಿದ್ದೇನೆ. ಅಂತರ್-ರಾಜ್ಯ ನೀರಿನ ನಿರ್ವಹಣೆ, ನೀರಿನ ಒಪ್ಪಂದಗಳಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ನನ್ನ ತಿಳುವಳಿಕೆ ಬಹಳ ಸೀಮಿತವಾಗಿದೆ ಎನ್ನುವುದು ನನಗೆ ತಿಳಿದಿದೆ. ಆದರೂ ಕಿಂಚಿತ್ ಸಾಮಾನ್ಯ ಜ್ಞಾನದ ದೃಷ್ಟಿಕೋನದಿಂದ ನನ್ನ ಕೆಲವು ಅನಿಸಿಕೆಗಳನ್ನು ತಮ್ಮೊಂದಿಗೆ ನಿವೇದಿಸಿಕೊಳ್ಳುತ್ತೇನೆ.
ಕರ್ನಾಟಕ ಉದ್ದೇಶಪೂರ್ವಕವಾಗಿ ನೀರನ್ನು ಹಿಡಿದಿಟ್ಟುಕೊಳ್ಳುತ್ತಿಲ್ಲ ಎನ್ನುವುದನ್ನು ತಮಿಳುನಾಡು ಅರಿತುಕೊಳ್ಳಬೇಕು. ನಮ್ಮ ಜಲಾಶಯಗಳು ಖಾಲಿಯಾಗಿವೆ ಮತ್ತು ನಮ್ಮ ರಾಜ್ಯದ ಸುಮಾರು ಶೇ.70 ರಷ್ಟು ತಾಲೂಕುಗಳಲ್ಲಿ ಬರಗಾಲವಿದೆ, ಜೊತೆಗೆ, ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ.
ಕರ್ನಾಟಕದ ನೀರಿನ ಅಗತ್ಯತೆಗಳಲ್ಲಿ, ಕರ್ನಾಟಕದಲ್ಲಿ ವಾಸಿಸುವ, ಕೆಲಸ ಮಾಡುತ್ತಿರುವ ಲಕ್ಷಾಂತರ ತಮಿಳು ಭಾಷಿಕರ ನೀರಿನ ಅಗತ್ಯತೆಗಳನ್ನೂ ಒಳಗೊಂಡಿದೆ ಎನ್ನುವುದನ್ನು. ತಮಿಳುನಾಡು ಅರ್ಥಮಾಡಿಕೊಳ್ಳಬೇಕು ಎನ್ನುವುದು ನನ್ನ ಆಗ್ರಹವಾಗಿದೆ.
ನಾವು ವಲಸಿಗ ಸಮಾಜದಲ್ಲಿ ವಾಸಿಸುತ್ತಿದ್ದೇವೆ. ಅಂತರ್-ರಾಜ್ಯ ವಲಸೆಯು ಕಳೆದ ಒಂದೆರಡು ದಶಕಗಳಲ್ಲಿ ಒಂದು ಪ್ರವೃತ್ತಿಯೇ ಎನ್ನುವಂತಾಗಿದ್ದು, ಉದ್ಯೋಗದ ಕಾರಣಗಳಿಗಾಗಿ ಜನರು ತಮ್ಮ ಸ್ವಂತ ರಾಜ್ಯಗಳನ್ನು ತೊರೆದು ಬೇರೆ ರಾಜ್ಯಗಳಲ್ಲಿ ವಾಸಿಸುತ್ತಿದ್ದಾರೆ. ಆದ್ದರಿಂದ ನಾವು ನೀರಿನ ಹಕ್ಕುಗಳ ಬಗ್ಗೆ ಮಾತನಾಡುವಾಗ ಸಮಕಾಲೀನ ವಲಸೆಯ ಪ್ರವೃತ್ತಿಯನ್ನು ಮತ್ತು ವಾಸ್ತವಗಳನ್ನು ಮನಸ್ಸಿನಲ್ಲಿಟ್ಟುಕೊಂಡು ಚಿಂತಿಸಬೇಕಾಗಿದೆ.
ಈ ಸಂಕಷ್ಟದ ಪರಿಸ್ಥಿತಿಗೆ ಒಂದು ಉತ್ತಮ ಪರಿಹಾರವೆಂದರೆ, ಸಹೋದರರಂತೆ ಎರಡೂ ರಾಜ್ಯಗಳು ಪರಸ್ಪರರ ಅಗತ್ಯತೆಗಳು ಮತ್ತು ಸವಾಲುಗಳನ್ನು ಅರ್ಥಮಾಡಿಕೊಂಡು, ಲಭ್ಯವಿರುವ ಸೀಮಿತ ನೀರನ್ನು ಸಮಾನವಾಗಿ ಹಂಚಿಕೊಳ್ಳುವುದು, ಭ್ರಾತೃತ್ವದ ಭಾವನೆಯಿಂದ ತಮಿಳುನಾಡು ಮತ್ತು ಕರ್ನಾಟಕದ ಮುಖ್ಯಮಂತ್ರಿಗಳು ಭೇಟಿಯಾಗಿ ಪರಿಸ್ಥಿತಿಯನ್ನು ಚರ್ಚಿಸಿದಾಗ ಮಾತ್ರ ಇದು ಸಾಧ್ಯ. ಕೇಂದ್ರ ಸರ್ಕಾರ ಅಥವಾ ನ್ಯಾಯಾಲಯಗಳ ಮಧ್ಯಸ್ತಿಕೆ ಅಥವಾ ನೆರವು ಕೋರುವುದಕ್ಕಿಂತಲೂ ಇಂತಹ ಸಭೆಯಿಂದ ಹೆಚ್ಚಿನದನ್ನು ಸಾಧಿಸಬಹುದು.
ನಾವು ಕನಿಷ್ಟವೆಂದರೆ, ಕಾವೇರಿ ನದಿ ನೀರು ಹಂಚಿಕೆಯನ್ನು ಒಂದು ಪ್ರಮುಖ ವಿವಾದವಾಗಿ, ಪ್ರಾದೇಶಿಕ ಸಂಘರ್ಷವಾಗಿ ನೋಡುವ ಹಳೆಯ ಚಾಳಿಯನ್ನು ಬಿಟ್ಟು, ಪ್ರಬುದ್ಧತೆಯಿಂದ ಎರಡೂ ರಾಜ್ಯ ಸರ್ಕಾರಗಳು ಇದೊಂದು ಪರಿಹರಿಸಲೇಬೇಕಾದ ಮಾನವೀಯ ಬಿಕ್ಕಟ್ಟು ಎಂದು ಪರಿಗಣಿಸಬೇಕು. ಈ ವಿಚಾರದಲ್ಲಿ ರಾಜಕೀಯ ಲಾಭ ಅಥವಾ ಹೇಳಿಕೆಗಳ ಮೇಲಾಟಗಳಿಗೆ ಅವಕಾಶ ಇರಬಾರದು.
ಪ್ರಾಕೃತಿಕವಾದ ಈ ಬಿಕ್ಕಟ್ಟಿನ ಪರಿಹಾರದ ನಿಟ್ಟಿನಲ್ಲಿ ಆದಷ್ಟು ಬೇಗ ಪರಸ್ಪರ ಭೇಟಿಯಾಗಿ ಮಾನವೀಯ ನೆಲೆಯಲ್ಲಿ ಚರ್ಚಿಸಿ, ಸಮಸ್ಯೆಯನ್ನು ಸರಿಯಾದ ದಾರಿಯಲ್ಲಿ ನಿರ್ವಹಿಸಬೇಕೆಂದು ಮುಖ್ಯಮಂತ್ರಿಗಳನ್ನು ಮತ್ತೊಮ್ಮೆ ಅತ್ಯಂತ ಗೌರವಪೂರ್ವಕವಾಗಿ ಮನವಿ ಮಾಡುತ್ತೇನೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications