Breaking: ಹೈದರಾಬಾದ್‌ಗೆ ತೆರಳಿದ ಸಿಎಂ: ಅಮಿತ್ ಶಾ, ನಡ್ಡಾ ಜೊತೆ ಮಾತುಕತೆ
ಬೆಂಗಳೂರು, ಜು. 02: ಇಂದಿನಿಂದ ಎರಡು ದಿನಗಳ ಕಾಲ ತೆಲಂಗಾಣ ರಾಜ್ಯದ ಹೈದರಾಬಾದಿನಲ್ಲಿ ರಾಷ್ಟ್ರೀಯ ಬಿಜೆಪಿ ಕಾರ್ಯಕಾರಣಿ ಸಭೆ ನಡೆಯಲಿದೆ. ಸಭೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಿಂದ ಹೈದರಾಬಾದಿಗೆ ತೆರಳಿದರು.
"ಬಿಜೆಪಿ ರಾಷ್ಟ್ರೀಯ ಮುಖಂಡರು ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ದ ಸೇರಿದಂತೆ ಇನ್ನು ಅನೇಕ ಮುಖಂಡರು ಪಾಲ್ಗೊಳ್ಳಲಿದ್ದಾರೆ. ಸಾಂದರ್ಭಿಕವಾಗಿ ಅವರನ್ನು ಭೇಟಿ ಮಾಡಲಾಗುವುದು. ನಾಳೆ ಸಂಜೆ ಹಿಂತಿರುವುದಾಗಿ ಮುಖ್ಯಮಂತ್ರಿಗಳು ಸುದ್ದಿಗಾರರಿಗೆ ಬೆಂಗಳೂರಿನಲ್ಲಿ ತಿಳಿಸಿದರು.
ಪೌರಕಾರ್ಮಿಕರ ಬಗ್ಗೆ ಸಹಾನುಭೂತಿ ಕ್ರಮ:
ಪೌರಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಹಾನುಭೂತಿ ಹಾಗೂ ಮಾನವೀಯತೆಯಿಂದ ಕ್ರಮ ತೆಗೆದುಕೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

Recommended Video
ನೇರ ಪಾವತಿ ವ್ಯವಸ್ಥೆಯಡಿ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಖಾಯಂಗೊಳಿಸಲು ತಾತ್ವಿಕವಾಗಿ ಸರ್ಕಾರ ಒಪ್ಪಿಕೊಂಡಿದೆ. ಕಾನೂನಾತ್ಮಕ ವಾಗಿ ಹಾಗೂ ತಾಂತ್ರಿಕವಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಪೌರಕಾರ್ಮಿಕರ ಹಾಗೂ ಅಧಿಕಾರಿಗಳ ಜಂಟಿ ಸಮಿತಿಯನ್ನು ರೂಪಿಸಲಾಗಿದೆ. ಸಮಿತಿ ಶಿಫಾರಸ್ಸು ಮಾಡಿದ ಕೂಡಲೇ ಪ್ರಕ್ರಿಯೆ ಪ್ರಾರಂಭಿಸಲಾಗುವುದು. ಪೌರಕಾರ್ಮಿಕರ ಸಂರಕ್ಷಣೆಗೆ ಆರೋಗ್ಯ, ಶಿಕ್ಷಣ ಸೇರಿದಂತೆ ಎಲ್ಲ ದೃಷ್ಟಿಯಿಂದ ಖಾಯಂ ಆಗಿ ಸುರಕ್ಷತೆ ನೀಡಲು ಒಪ್ಪಲಾಗಿದೆ. ಮುಂದಿನ ವಿಧಾನಸಭಾ ಅಧಿವೇಶನದಲ್ಲಿ ಚರ್ಚೆ ಮಾಡಲಾಗುವುದು. ಸೌಹಾರ್ದತೆಯಿಂದ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದರು.












Click it and Unblock the Notifications