• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಸಚಿವ ಸ್ಥಾನಕ್ಕೆ ರಾಜೀನಾಮೆ; ಸಿ. ಟಿ. ರವಿ ಹೇಳಿದ್ದೇನು?

|

ಬೆಂಗಳೂರು, ಸೆಪ್ಟೆಂಬರ್ 27: ಪ್ರವಾಸೋದ್ಯಮ ಸಚಿವ ಸಿ. ಟಿ. ರವಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. ಸಚಿವ ಸ್ಥಾನಕ್ಕೆ ಅವರು ರಾಜೀನಾಮೆ ನೀಡಿ ಪಕ್ಷ ಸಂಘಟನೆಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ.

ಭಾನುವಾರ ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಸಿ. ಟಿ. ರವಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಕುರಿತು ಮಾತನಾಡಿದರು. "ಒಬ್ಬರಿಗೆ ಒಂದೇ ಹುದ್ದೆ ಎಂಬ ಸೂತ್ರದಂತೆ ಪಕ್ಷ ಸೂಚನೆ ನೀಡಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ" ಎಂದರು.

ಬಿಜೆಪಿ ರಾಷ್ಟ್ರೀಯ ಪದಾಧಿಕಾರಿ ತಂಡ: ಸಿ.ಟಿ ರವಿ, ತೇಜಸ್ವಿ, ರಾಜೀವ್‌ಗೆ ಸ್ಥಾನಬಿಜೆಪಿ ರಾಷ್ಟ್ರೀಯ ಪದಾಧಿಕಾರಿ ತಂಡ: ಸಿ.ಟಿ ರವಿ, ತೇಜಸ್ವಿ, ರಾಜೀವ್‌ಗೆ ಸ್ಥಾನ

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, "ನಾನು ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷ ಯಾವ ಸೂಚನೆ ನೀಡುತ್ತದೆಯೋ ಅದರಂತೆ ನಡೆದುಕೊಳ್ಳುತ್ತೇನೆ. ರಾಜೀನಾಮೆಗೆ ಸೂಚಿಸಿದರೆ ತಕ್ಷಣವೇ ಸಚಿವ ಸ್ಥಾನ ಬಿಡುತ್ತೇನೆ" ಎಂದು ಹೇಳಿದರು.

ಕರ್ನಾಟಕ ಪ್ರವಾಸೋದ್ಯಮ ಕ್ಷೇತ್ರದಲ್ಲಿ 30 ಲಕ್ಷ ಉದ್ಯೋಗ ನಷ್ಟ: ಸಚಿವ ಸಿ.ಟಿ. ರವಿಕರ್ನಾಟಕ ಪ್ರವಾಸೋದ್ಯಮ ಕ್ಷೇತ್ರದಲ್ಲಿ 30 ಲಕ್ಷ ಉದ್ಯೋಗ ನಷ್ಟ: ಸಚಿವ ಸಿ.ಟಿ. ರವಿ

ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಶಾಸಕ ಸಿ. ಟಿ. ರವಿ (53) ಬಿ. ಎಸ್. ಯಡಿಯೂರಪ್ಪ ಸಂಪುಟದಲ್ಲಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವರು. ಒಬ್ಬರಿಗೆ ಒಂದೇ ಹುದ್ದೆ ಎಂಬ ಅಲಿಖಿತ ನಿಯಮ ಬಿಜೆಪಿಯಲ್ಲಿದೆ.

ಕರ್ನಾಟಕ ಬಿಜೆಪಿ ಜಿಲ್ಲೆಗಳ ಪ್ರಭಾರಿಗಳ ಪಟ್ಟಿ ಕರ್ನಾಟಕ ಬಿಜೆಪಿ ಜಿಲ್ಲೆಗಳ ಪ್ರಭಾರಿಗಳ ಪಟ್ಟಿ

ಸಚಿವ ಸ್ಥಾನಕ್ಕಾಗಿ ಲಾಬಿ ಮಾಡಿಲ್ಲ

ಸಚಿವ ಸ್ಥಾನಕ್ಕಾಗಿ ಲಾಬಿ ಮಾಡಿಲ್ಲ

"ಎಂದಿಗೂ ಸಚಿವ ಸ್ಥಾನಕ್ಕಾಗಿ ಲಾಬಿ ಮಾಡಿಲ್ಲ. ಸಚಿವನಾಗುವ ನಿರೀಕ್ಷೆಯನ್ನು ಇಟ್ಟುಕೊಂಡಿರಲಿಲ್ಲ. ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡುವಂತೆಯೂ ಕೇಳಿರಲಿಲ್ಲ. ವರಿಷ್ಠರು ನನ್ನ ಮೇಲೆ ನಂಬಿಕೆ ಇರಿಸಿ ಜವಾಬ್ದಾರಿ ನೀಡಿದ್ದಾರೆ. ಅವರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವುದು ನನ್ನ ಮುಂದಿನ ಗುರಿಯಾಗಿದೆ" ಎಂದು ಸಿ. ಟಿ. ರವಿ ಹೇಳಿದರು.

ಸಚಿವ ಸ್ಥಾನ ಎಂದಿಗೂ ಶಾಶ್ವತವಲ್ಲ

ಸಚಿವ ಸ್ಥಾನ ಎಂದಿಗೂ ಶಾಶ್ವತವಲ್ಲ

"ಚುನಾವಣೆಗೆ ಸ್ಪರ್ಧಿಸಬೇಕು ಎಂದು ವರಿಷ್ಠರು ಸೂಚಿಸಿದಾಗ ಮರು ಮಾತನಾಡದೇ ಸ್ಪರ್ಧಿಸಿ, ಗೆದ್ದು ಬಂದಿದ್ದೇನೆ. ಸಚಿವ ಸ್ಥಾನ ಎಂದಿಗೂ ಶಾಶ್ವತವಲ್ಲ. ವರಿಷ್ಠರು ಸೂಚಿಸಿದ ಕೆಲಸವನ್ನು ನಿಷ್ಠೆಯಿಂದ ಮಾಡುತ್ತೇನೆ" ಎಂದು ಸಿ. ಟಿ. ರವಿ ಹೇಳಿದರು.

ಕರ್ನಾಟಕವೇ ನನ್ನ ಕರ್ಮಭೂಮಿ

ಕರ್ನಾಟಕವೇ ನನ್ನ ಕರ್ಮಭೂಮಿ

"ರಾಷ್ಟ್ರ ರಾಜಕಾರಣಕ್ಕೆ ಹೋದರೂ ಕರ್ನಾಟಕವೇ ನನ್ನ ರಾಜಕೀಯ ಕರ್ಮಭೂಮಿ. ದೆಹಲಿಯಲ್ಲಿ ರಾಜಕಾರಣ ಮಾಡದೇ ಕರ್ನಾಟಕದಲ್ಲಿ ಪಕ್ಷ ಸಂಘಟನೆಗೆ ಶ್ರಮಿಸುತ್ತೇನೆ" ಎಂದು ಸಚಿವ ಸಿ. ಟಿ. ರವಿ ಹೇಳಿದರು.

  ರೈತರ ಪ್ರತಿಭಟನೆ ಕುರಿತು C.M BSY ಹೇಳಿದ್ದೇನು | Oneindia Kannada
  ಯಡಿಯೂರಪ್ಪರಿಂದ ಅಭಿನಂದನೆ

  ಯಡಿಯೂರಪ್ಪರಿಂದ ಅಭಿನಂದನೆ

  ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಸಿ. ಟಿ. ರವಿ ಅವರನ್ನು ಅಭಿನಂದಿಸಿ, ಸನ್ಮಾನಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

  English summary
  Minister for tourism and Kannada and culture C. T. Ravi appointed BJP national general secretary. C. T. Ravi may quit minister post. Minister commented about news.
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X