J.P.Nadda: ಕೆಲವೇ ಕ್ಷಣಗಳಲ್ಲಿ ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಎಂಟ್ರಿ, ಕಾರ್ಯಕ್ರಮಗಳ ವಿವರ ಇಲ್ಲಿದೆ

ಕರ್ನಾಟಕ, ಏಪ್ರಿಲ್‌, 28: ವಿಧಾನಸಭೆ ಚುನಾವಣೆ ಹಿನ್ನೆಲೆ ಈಗಾಗಲೇ ರಾಷ್ಟೀಯ ನಾಯಕರು ರಾಜ್ಯ ಪ್ರವಾಸವನ್ನು ಕೈಗೊಂಡಿದ್ದಾರೆ. ಅಲ್ಲದೆ ರಾಜ್ಯ ನಾಯಕರ ಪರವಾಗಿ ಅಬ್ಬರದ ಪ್ರಚಾರ ಮಾಡಲು ಮುಂದಾಗಿದ್ದಾರೆ. ಅದೇ ರೀತಿ ಇಂದು ಶುಕ್ರವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ರಾಜ್ಯ ಪ್ರವಾಸ ಮಾಡಲಿದ್ದಾರೆ. ಹಾಗಾದರೆ ಇಂದು ಅವರು ಯಾವ ಜಿಲ್ಲೆಗಳಿಗೆ ಎಷ್ಟು ಗಂಟೆಗೆ ಆಗಮಿಸಲಿದ್ದಾರೆ ಎನ್ನುವ ವಿವರ ಇಲ್ಲಿದೆ ನೋಡಿ.

ರಾಜ್ಯದಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಇಂದು ಭೇಟಿ ನೀಡಲಿದ್ದು, ಅವರು ಪಾಲ್ಗೊಳ್ಳಲಿರುವ ಕಾರ್ಯಕ್ರಮಗಳ ವಿವರ ಇಂತಿದೆ ನೋಡಿ.

BJP National President J.P.Nadda will be arrive to Karnataka today, Know programs details

ಕಾರ್ಯಕ್ರಮ-1: ಚಿಕ್ಕಮಗಳೂರು ಜಿಲ್ಲೆಗೆ ಮಧ್ಯಾಹ್ನ 12:20 ಕ್ಕೆ ಆಗಲಿಸಲಿದ್ದು, ಜಿಲ್ಲೆಯ ಕಳಸದಲ್ಲಿರುವ ಕರ್ನಾಟಕ ಸಾರ್ವಜನಿಕ ಶಾಲಾ ಮೈದಾನದಲ್ಲಿ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮೂಡಿಗೆರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ದೀಪಕ್ ದೊಡ್ಡಯ್ಯ ಪರ ಮತಯಾಚನೆ ಮಾಡಲಿದ್ದಾರೆ.

ಕಾರ್ಯಕ್ರಮ-2: ಇನ್ನು ಶಿವಮೊಗ್ಗ ಜಿಲ್ಲೆಯ ಸೊರಬಕ್ಕೆ ಮಧ್ಯಾಹ್ನ 2:10ಕ್ಕೆ ಆಗಮಿಸಲಿದ್ದು, ಇಲ್ಲಿನ ಬಿಜೆಪಿ ಕಚೇರಿ ಮೈದಾನದಲ್ಲಿ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅಲ್ಲದೆ ಪಕ್ಷದ ಅಭ್ಯರ್ಥಿ, ಕಾರ್ಯಕರ್ತರಿಗೆ ರಣೋತ್ಸಾಹವನ್ನು ತುಂಬಲಿದ್ದಾರೆ.

ಕಾರ್ಯಕ್ರಮ-3: ಹಾಗೆಯೆ ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪಕ್ಕೆ ಮಧ್ಯಾಹ್ನ 3:15ಕ್ಕೆ ಆಗಮಿಸಲಿದ್ದು, ಇಲ್ಲಿನ ಮುನ್ಸಿಪಲ್‌ ಮೈದಾನದಲ್ಲಿ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಪಕ್ಷದ ಕಾರ್ಯಕರ್ತರಿಗೆ ಪ್ರಚಾರದ ಬಗ್ಗೆ ಮಾಹಿತಿ ನೀಡಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+