• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಮಾಜಿ ಸಚಿವ ಸಿ.ಟಿ. ರವಿ ಅವರಿಗೆ ಮತ್ತೊಂದು ಮಹತ್ವದ ಜವಾಬ್ದಾರಿ!

|

ಬೆಂಗಳೂರು, ನ. 14: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರಿಗೆ ಮತ್ತೊಂದು ಮಹತ್ವದ ಜವಾಬ್ದಾರಿಯನ್ನು ಕೇಂದ್ರ ಬಿಜೆಪಿ ಕೊಟ್ಟಿದೆ. ಕೆಲ ದಿನಗಳ ಹಿಂದಷ್ಟೆ ಸಿ.ಟಿ. ರವಿ ಅವರು ಸಚಿವ ಸ್ಥಾನಕ್ಕೆ ಕೊಟ್ಟಿದ್ದ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿದ್ದಾರೆ. ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವ ಮೂಲಕ ಪಕ್ಷ ಸಂಘಟನೆಗೆ ರವಿ ಅವರು ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ.

ಇದೀಗ ಸಿ.ಟಿ. ರವಿ ಸೇರಿದಂತೆ ಇನ್ನು ಇಬ್ಬರು ರಾಜ್ಯ ಬಿಜೆಪಿ ನಾಯಕರಿಗೆ ಮಹತ್ವದ ಜವಾಬ್ದಾರಿಯನ್ನು ವಹಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಆದೇಶ ಮಾಡಿದ್ದಾರೆ. ವಿವಿಧ ರಾಜ್ಯಗಳ ಉಸ್ತುವಾರಿಯನ್ನು ವಹಿಸಿ ಜೆ.ಪಿ. ನಡ್ಡಾ ನೇಮಕ ಮಾಡಿದ್ದಾರೆ.

   ಕೋಟಿ ದುಡಿಯೋರೂ ಹೀಗೆ ಮಾಡಬಹುದಾ?? | Oneindia Kannada

   ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರಿಗೆ ಮಹಾರಾಷ್ಟ್ರ, ಗೋವಾ ಹಾಗೂ ತಮಿಳುನಾಡು ರಾಜ್ಯಗಳ ಬಿಜೆಪಿ ಉಸ್ತುವಾರಿಯನ್ನು ವಹಿಸಿದ್ದಾರೆ. ಜೊತೆಗೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ ಅವರಿಗೆ ಪುದುಚೇರಿ ಬಿಜೆಪಿ ಉಸ್ತುವಾರಿ ಹಾಗೂ ಕಾರ್ಕಳ ಶಾಸಕ, ವಿಧಾನಸಭೆಯಲ್ಲಿ ಸರ್ಕಾರದ ಮುಖ್ಯ ಸಚೇತಕ ವಿ. ಸುನೀಲ್ ಕುಮಾರ್ ಅವರನ್ನು ಕೇರಳ ರಾಜ್ಯದ ಸಹ ಪ್ರಭಾರಿಯನ್ನಾಗಿ ನೇಮಕ ಮಾಡಿ ಜೆ.ಪಿ. ನಡ್ಡಾ ಅವರು ಆದೇಶ ಮಾಡಿದ್ದಾರೆ.

   English summary
   BJP National Secretary General CT Ravi was given another significant responsibility by the central BJP. C.T. Ravi is in charge of the BJP in Maharashtra, Goa and Tamil Nadu. Know more
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X