ಮೋದಿ ಅಹಿಂದ ವರ್ಗಕ್ಕೆ ಏನು ಮಾಡಿದ್ದಾರೆ? : ಸಿದ್ದರಾಮಯ್ಯ ಟ್ವೀಟ್
ಬೆಂಗಳೂರು, ನವೆಂಬರ್ 21 : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ, ಎಲ್.ಕೆ.ಅಡ್ವಾಣಿ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 'ಬಿಜೆಪಿಯವರು ಬಹಳ ಡೇಂಜರ್' ಎಂದು ಟ್ವೀಟ್ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಆಯೋಜಿಸಿದ್ದ ಶ್ರೀಮತಿ ಇಂದಿರಾ ಗಾಂಧಿ, ದಿ.ರಾಜೀವ್ ಗಾಂಧಿ ಮತ್ತು ದಿ.ದೇವರಾಜ ಅರಸು ಅವರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಸಿದ್ದರಾಮಯ್ಯ ಅವರು ಸರಣಿ ಟ್ವೀಟ್ ಮಾಡಿ ಟೀಕಿಸಿದ್ದಾರೆ.
@siddaramaiah ಖಾತೆಯಿಂದ ಸರಣಿ ಟ್ವಿಟ್ ಮಾಡಿರುವ ಅವರು, 'ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ನ್ಯಾಯದ ಬಗ್ಗೆ ಭಾಷಣ ಮಾಡುವುದನ್ನು ಬಿಟ್ಟರೆ ಅಹಿಂದ ವರ್ಗಕ್ಕೆ ಏನು ಮಾಡಿದ್ದಾರೆ?' ಎಂದು ಪ್ರಶ್ನೆ ಮಾಡಿದ್ದಾರೆ.
'ಹಿಂದುಳಿದ ವರ್ಗಗಳ ಬಗ್ಗೆ ಬಿಜೆಪಿಯವರಿಗೆ ಕಾಳಜಿ ಇಲ್ಲ. ಅವರದ್ದೇನಿದ್ದರು ಕೇವಲ ಸ್ವಾರ್ಥ ರಾಜಕಾರಣ ಅಷ್ಟೆ' ಎಂದು ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಆರೋಪಗಳನ್ನು ಮಾಡಿದ್ದಾರೆ. ಟ್ವೀಟ್‌ಗಳಲ್ಲಿ ಏನಿದೆ ನೋಡಿ....
|
ಹಿಂದುಳಿದ ಜಾತಿಗಳಿಗೆ ಮೀಸಲಾತಿ
ಹಿಂದುಳಿದ ಜಾತಿಗಳಿಗೆ ಸ್ವಾತಂತ್ರ್ಯ ಪೂರ್ವದಲ್ಲಿಯೇ ಮೀಸಲಾತಿ ನೀಡಲು ಪ್ರಮುಖ ಪಾತ್ರ ವಹಿಸಿದರು.
|
ಮೀಸಲಾತಿ ವಿರೋಧಿಸಿ ರಥಯಾತ್ರೆ
ಹಿಂದುಳಿದ ವರ್ಗಗಳಿಗೆ ಮೀಸಲಾತಿ ವಿರೋಧಿಸಿ ರಥಯಾತ್ರೆ ಮಾಡಿದವರು ಬಿಜೆಪಿ ನಾಯಕರಾದ ಎಲ್.ಕೆ.ಅಡ್ವಾಣಿ
|
ಬಿಜೆಪಿಯವರು ಬಹಳ ಡೇಂಜರ್
ಬಿಜೆಪಿಯವರು ಬಹಳ ಡೇಂಜರ್, ಜನರ ದಾರಿ ತಪ್ಪಿಸಿ ಹೇಗಾದರೂ ಮಾಡಿ ಅಧಿಕಾರ ಹಿಡಿಯುವುದಷ್ಟೇ ಅವರ ಗುರಿ
|
ಸ್ವಾರ್ಥ ರಾಜಕಾರಣ
ಬಿಜೆಪಿಯವರು ಸ್ವಾರ್ಥ ರಾಜಕಾರಣಕ್ಕಾಗಿ ಏನಾದರೂ ಮಾಡುತ್ತಾರೆ.
|
ತಿರುಗೇಟು ಕೊಟ್ಟ ಸುರೇಶ್ ಕುಮಾರ್
ಸಿದ್ದರಾಮಯ್ಯ ಅವರ ಟ್ವೀಟ್‌ಗಳಿಗೆ ಮಾಜಿ ಸಚಿವ ಸುರೇಶ್ ಕುಮಾರ್ ತಿರುಗೇಟು ಕೊಟ್ಟಿದ್ದಾರೆ












Click it and Unblock the Notifications