ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೋದಿ ಅಹಿಂದ ವರ್ಗಕ್ಕೆ ಏನು ಮಾಡಿದ್ದಾರೆ? : ಸಿದ್ದರಾಮಯ್ಯ ಟ್ವೀಟ್

|
Google Oneindia Kannada News

ಬೆಂಗಳೂರು, ನವೆಂಬರ್ 21 : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ, ಎಲ್.ಕೆ.ಅಡ್ವಾಣಿ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 'ಬಿಜೆಪಿಯವರು ಬಹಳ ಡೇಂಜರ್' ಎಂದು ಟ್ವೀಟ್ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಆಯೋಜಿಸಿದ್ದ ಶ್ರೀಮತಿ ಇಂದಿರಾ ಗಾಂಧಿ, ದಿ.ರಾಜೀವ್ ಗಾಂಧಿ ಮತ್ತು ದಿ.ದೇವರಾಜ ಅರಸು ಅವರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಸಿದ್ದರಾಮಯ್ಯ ಅವರು ಸರಣಿ ಟ್ವೀಟ್‌ ಮಾಡಿ ಟೀಕಿಸಿದ್ದಾರೆ.

ರಾಮ ಮಂದಿರ ನಿರ್ಮಾಣ : ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಟ್ವೀಟ್ ಬಾಣ!ರಾಮ ಮಂದಿರ ನಿರ್ಮಾಣ : ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಟ್ವೀಟ್ ಬಾಣ!

@siddaramaiah ಖಾತೆಯಿಂದ ಸರಣಿ ಟ್ವಿಟ್ ಮಾಡಿರುವ ಅವರು, 'ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ನ್ಯಾಯದ ಬಗ್ಗೆ ಭಾಷಣ ಮಾಡುವುದನ್ನು ಬಿಟ್ಟರೆ ಅಹಿಂದ ವರ್ಗಕ್ಕೆ ಏನು ಮಾಡಿದ್ದಾರೆ?' ಎಂದು ಪ್ರಶ್ನೆ ಮಾಡಿದ್ದಾರೆ.

ಜನ್ಮದಿನದಂದು ಇಂದಿರಾ ಗಾಂಧಿ ನೆನಪಿಸಿಕೊಂಡ ಸಿದ್ದರಾಮಯ್ಯಜನ್ಮದಿನದಂದು ಇಂದಿರಾ ಗಾಂಧಿ ನೆನಪಿಸಿಕೊಂಡ ಸಿದ್ದರಾಮಯ್ಯ

'ಹಿಂದುಳಿದ ವರ್ಗಗಳ ಬಗ್ಗೆ ಬಿಜೆಪಿಯವರಿಗೆ ಕಾಳಜಿ ಇಲ್ಲ. ಅವರದ್ದೇನಿದ್ದರು ಕೇವಲ ಸ್ವಾರ್ಥ ರಾಜಕಾರಣ ಅಷ್ಟೆ' ಎಂದು ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಆರೋಪಗಳನ್ನು ಮಾಡಿದ್ದಾರೆ. ಟ್ವೀಟ್‌ಗಳಲ್ಲಿ ಏನಿದೆ ನೋಡಿ....

ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌ಗೆ ಹೊಸ ಜವಾಬ್ದಾರಿ ಕೊಟ್ಟ ಹೈಕಮಾಂಡ್!ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌ಗೆ ಹೊಸ ಜವಾಬ್ದಾರಿ ಕೊಟ್ಟ ಹೈಕಮಾಂಡ್!

ಹಿಂದುಳಿದ ಜಾತಿಗಳಿಗೆ ಮೀಸಲಾತಿ

ಹಿಂದುಳಿದ ಜಾತಿಗಳಿಗೆ ಸ್ವಾತಂತ್ರ್ಯ ಪೂರ್ವದಲ್ಲಿಯೇ ಮೀಸಲಾತಿ ನೀಡಲು ಪ್ರಮುಖ ಪಾತ್ರ ವಹಿಸಿದರು.

ಮೀಸಲಾತಿ ವಿರೋಧಿಸಿ ರಥಯಾತ್ರೆ

ಹಿಂದುಳಿದ ವರ್ಗಗಳಿಗೆ ಮೀಸಲಾತಿ ವಿರೋಧಿಸಿ ರಥಯಾತ್ರೆ ಮಾಡಿದವರು ಬಿಜೆಪಿ ನಾಯಕರಾದ ಎಲ್.ಕೆ.ಅಡ್ವಾಣಿ

ಬಿಜೆಪಿಯವರು ಬಹಳ ಡೇಂಜರ್

ಬಿಜೆಪಿಯವರು ಬಹಳ ಡೇಂಜರ್, ಜನರ ದಾರಿ ತಪ್ಪಿಸಿ ಹೇಗಾದರೂ ಮಾಡಿ ಅಧಿಕಾರ ಹಿಡಿಯುವುದಷ್ಟೇ ಅವರ ಗುರಿ

ಸ್ವಾರ್ಥ ರಾಜಕಾರಣ

ಬಿಜೆಪಿಯವರು ಸ್ವಾರ್ಥ ರಾಜಕಾರಣಕ್ಕಾಗಿ ಏನಾದರೂ ಮಾಡುತ್ತಾರೆ.

ತಿರುಗೇಟು ಕೊಟ್ಟ ಸುರೇಶ್ ಕುಮಾರ್

ಸಿದ್ದರಾಮಯ್ಯ ಅವರ ಟ್ವೀಟ್‌ಗಳಿಗೆ ಮಾಜಿ ಸಚಿವ ಸುರೇಶ್ ಕುಮಾರ್ ತಿರುಗೇಟು ಕೊಟ್ಟಿದ್ದಾರೆ

English summary
In a series of tweet Karnataka Former Chief Minister Siddaramaiah alleged that BJP negated the backward class development, party miss leading people for the sake of power.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X